AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಆರ್​ಸಿಬಿಯ ಮಾಜಿ ವೇಗಿಗೆ ಬೌಲಿಂಗ್ ಕೋಚ್ ಹುದ್ದೆ ನೀಡಿದ ಕಾವ್ಯ ಮಾರನ್

Sunrisers Hyderabad: ಸನ್‌ರೈಸರ್ಸ್ ಹೈದರಾಬಾದ್ ತಂಡವು 2026ರ ಐಪಿಎಲ್​ಗೆ ಮಾಜಿ ಭಾರತೀಯ ವೇಗದ ಬೌಲರ್ ವರುಣ್ ಆರೋನ್ ಅವರನ್ನು ಬೌಲಿಂಗ್ ಕೋಚ್ ಆಗಿ ನೇಮಿಸಿದೆ. ಐಪಿಎಲ್​ನಲ್ಲಿ ಈ ಹಿಂದೆ ಆರ್​ಸಿಬಿ ತಂಡದ ಪರ ಆಡಿದ್ದ ವರುಣ್, ಈಗ ತಮ್ಮ ಅನುಭವವನ್ನು SRH ತಂಡಕ್ಕೆ ನೀಡಲಿದ್ದಾರೆ. ಇದರಿಂದ ತಂಡದ ಬೌಲಿಂಗ್ ವಿಭಾಗಕ್ಕೆ ಹೊಸ ಶಕ್ತಿ ಸಿಗುವ ನಿರೀಕ್ಷೆಯಿದೆ.

IPL 2026: ಆರ್​ಸಿಬಿಯ ಮಾಜಿ ವೇಗಿಗೆ ಬೌಲಿಂಗ್ ಕೋಚ್ ಹುದ್ದೆ ನೀಡಿದ ಕಾವ್ಯ ಮಾರನ್
Srh 2026
ಪೃಥ್ವಿಶಂಕರ
|

Updated on:Jul 14, 2025 | 8:20 PM

Share

2026 ಐಪಿಎಲ್​ಗೆ (IPL 2026) ಇನ್ನು ಸಾಕಷ್ಟು ಸಮಯವಿದೆ. ಆದಾಗ್ಯೂ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡ ಈಗಾಗಲೇ ತನ್ನ ತಯಾರಿಯನ್ನು ಆರಂಭಿಸಿದೆ. ಅದರಂತೆ ಸನ್‌ರೈಸರ್ಸ್ ಹೈದರಾಬಾದ್ ತನ್ನ ಕೋಚಿಂಗ್ ವಿಭಾಗಕ್ಕೆ ಮಾಜಿ ಭಾರತೀಯ ವೇಗದ ಬೌಲರ್‌ನನ್ನು ಸೇರಿಸಿಕೊಂಡಿದೆ. ಆ ಆಟಗಾರ ಬೇರ್ಯಾರು ಅಲ್ಲ, ತನ್ನ ವೇಗದ ಬೌಲಿಂಗ್ ಮೂಲಕವೇ ಟೀಂ ಇಂಡಿಯಾದಲ್ಲಿ ಮಿಂಚಿ ಮರೆಯಾದ ವರುಣ್ ಆರೋನ್ (Varun Aaron). ಮುಂಬರುವ ಐಪಿಎಲ್‌ನಲ್ಲಿ ವರುಣ್, ಸನ್‌ರೈಸರ್ಸ್ ಹೈದರಾಬಾದ್‌ನ ಬೌಲಿಂಗ್ ಕೋಚ್ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಅಂದರೆ, ಕಳೆದ ಸೀಸನ್​ನಲ್ಲಿ ತಂಡದ ಭಾಗವಾಗಿದ್ದ ಜೇಮ್ಸ್ ಫ್ರಾಂಕ್ಲಿನ್ ಬದಲಿಗೆ ವರುಣ್ ಆರೋನ್ ಅವರನ್ನು ತಂಡಕ್ಕೆ ನೇಮಕಗೊಳ್ಳಲಾಗಿದ್ದು, ಈ ಮಾಹಿತಿಯನ್ನು ಸ್ವತಃ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ನೀಡಿದೆ.

ಕಾವ್ಯ ಮಾರನ್ ತಂಡದಿಂದ ಘೋಷಣೆ

ಸನ್‌ರೈಸರ್ಸ್ ಹೈದರಾಬಾದ್ ತಂಡವು ವರುಣ್ ಆರೋನ್ ಅವರನ್ನು ಐಪಿಎಲ್ 2026 ರ ಸೀಸನ್‌ಗೆ ಹೊಸ ಬೌಲಿಂಗ್ ಕೋಚ್ ಆಗಿ ಘೋಷಿಸಿದೆ . ವರುಣ್ ಆರೋನ್ ಭಾರತ ಪರ ಟೆಸ್ಟ್ ಮತ್ತು ಏಕದಿನ ಮಾದರಿಗಳಲ್ಲಿ ಆಡಿದ್ದಾರೆ . ಈ ವರ್ಷದ ಆರಂಭದಲ್ಲಿ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವರುಣ್​ಗೆ ಈಗ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಈ ದೊಡ್ಡ ಜವಾಬ್ದಾರಿಯನ್ನು ವಹಿಸಿದೆ. ಈ ಬಗ್ಗೆ ಪೋಸ್ಟ್ ಅನ್ನು ಹಂಚಿಕೊಂಡಿರುವ ಎಸ್​ಆರ್​​ಹೆಚ್, ‘‘ನಮ್ಮ ಕೋಚಿಂಗ್ ಸಿಬ್ಬಂದಿಗೆ ಆಕ್ರಮಣಕಾರಿ ಬೌಲರ್‌ಗೆ ಸ್ವಾಗತ . ವರುಣ್ ಆರೋನ್ ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಹೊಸ ಬೌಲಿಂಗ್ ಕೋಚ್ ಆಗಿರುತ್ತಾರೆ’ ಎಂದು ಬರೆದುಕೊಂಡಿದೆ .

ಮಾಹಿತಿ ನೀಡಿದ ಎಸ್​ಆರ್​ಹೆಚ್

ದೇಶೀಯ ಕ್ರಿಕೆಟ್ ಮತ್ತು ಐಪಿಎಲ್‌ನಲ್ಲಿ ತಮ್ಮ ವೇಗದಿಂದ ಎಲ್ಲರನ್ನೂ ಮೆಚ್ಚಿಸಿದ್ದ ವರುಣ್​ಗೆ ಟೀಂ ಇಂಡಿಯಾದಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಇದಕ್ಕೆ ಕಾರಣ ಅವರ ಇಂಜುರಿ ಸಮಸ್ಯೆ. ಈ ಸಮಸ್ಯೆಯಿಂದ ಅವರ ಅಂತರರಾಷ್ಟ್ರೀಯ ವೃತ್ತಿಜೀವನ ಹೆಚ್ಚು ವರ್ಷ ನಡೆಯಲಿಲ್ಲ. ಆದಾಗ್ಯೂ ಸನ್‌ರೈಸರ್ಸ್ ಹೈದರಾಬಾದ್ ಅವರ ಅನುಭವದ ಲಾಭವನ್ನು ಪಡೆಯಲು ನಿರ್ಧರಿಸಿದೆ.

ಸೆನಾ ದೇಶಗಳಲ್ಲಿ ಟೆಸ್ಟ್ ಸರಣಿ ಗೆಲ್ಲುವುದು ಐಪಿಎಲ್ ಗೆಲ್ಲುವುದಕ್ಕಿಂತ ದೊಡ್ಡ ಸಾಧನೆ; ಶುಭ್​ಮನ್ ಗಿಲ್

ವರುಣ್ ವೃತ್ತಿಜೀವನ

2011 ರಲ್ಲಿ ಅಂತರರಾಷ್ಟ್ರೀಯ ವೃತ್ತಿಜೀವನ ಪ್ರಾರಂಭಿಸಿದ ವರುಣ್ ಆರೋನ್, 2015 ರಲ್ಲಿ ಟೀಂ ಇಂಡಿಯಾ ಪರ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು. ಈ ಸಮಯದಲ್ಲಿ, ಅವರು 9 ಟೆಸ್ಟ್ ಮತ್ತು 9 ಏಕದಿನ ಪಂದ್ಯಗಳಲ್ಲಿ ತಂಡವನ್ನು ಪ್ರತಿನಿಧಿಸಿದ್ದರು, ಆಡಿದ 9 ಟೆಸ್ಟ್‌ಗಳಲ್ಲಿ ಒಟ್ಟು 18 ವಿಕೆಟ್‌ಗಳನ್ನು ಕಬಳಿಸಿದ್ದ ವರುಣ್, ಏಕದಿನ ಮಾದರಿಯಲ್ಲಿ 11 ವಿಕೆಟ್‌ಗಳನ್ನು ಉರುಳಿಸಿದ್ದರು. ಇದಲ್ಲದೆ, ವರುಣ್ 52 ಐಪಿಎಲ್ ಪಂದ್ಯಗಳನ್ನು ಆಡಿದ್ದು 50 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:13 pm, Mon, 14 July 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ