AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB: 6,6,6,6,6,6,6.. 15 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ವೈಭವ್

Vaibhav Suryavanshi fastest fifty: ಐಪಿಎಲ್ 2026 ರಲ್ಲಿ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಮಿಂಚಿದರು. 15 ವರ್ಷದ ವೈಭವ್ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ದಾಖಲೆ ಸೃಷ್ಟಿಸಿದರು. ಅವರ ಅಬ್ಬರದ 78 ರನ್ (26 ಎಸೆತ) ಗಳಿಕೆಯು ರಾಜಸ್ಥಾನ್ ರಾಯಲ್ಸ್‌ಗೆ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಪವರ್‌ಪ್ಲೇ ಸ್ಕೋರ್ (97/1) ಗಳಿಸಲು ನೆರವಾಯಿತು. ಈ ಯುವ ಪ್ರತಿಭೆಯ ಪ್ರದರ್ಶನವು ಎಲ್ಲರ ಗಮನ ಸೆಳೆದಿದೆ.

RR vs RCB: 6,6,6,6,6,6,6.. 15 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ವೈಭವ್
Vaibhav Sooryavanshi
ಪೃಥ್ವಿಶಂಕರ
|

Updated on:Apr 10, 2026 | 11:31 PM

Share

ಐಪಿಎಲ್ 2026 (IPL 2026) ರ 16 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (RCB vs RR) ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 201 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡದ ಪರ 15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ವಿಸ್ಫೋಟಕ ಇನ್ನಿಂಗ್ಸ್ ಆಡಿದರು. ಎಂದಿನಂತೆ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದ ವೈಭವ್ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ರಾಜಸ್ಥಾನ್ ಪರ ಈ ಆವೃತ್ತಿಯಲ್ಲೇ ಎರಡನೇ ವೇಗದ ಅರ್ಧಶತಕ ಬಾರಿಸಿದ ದಾಖಲೆ ನಿರ್ಮಿಸಿದರು.

15 ಎಸೆತಗಳಲ್ಲಿ ಅರ್ಧಶತಕ

ವಾಸ್ತವವಾಗಿ ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ತಂಡ 21 ರನ್​ಗಳಿದ್ದಾಗ ಯಶಸ್ವಿ ಜೈಸ್ವಾಲ್ ಅವರ ವಿಕೆಟ್ ಕಳೆದುಕೊಂಡಿತು. ಆದಾಗ್ಯೂ ತನ್ನ ಎಂದಿನ ಆಟವನ್ನು ಮುಂದುವರೆಸಿದ ವೈಭವ್ ಸೂರ್ಯವಂಶಿ ಆರ್‌ಸಿಬಿಯ ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹೇಜಲ್‌ವುಡ್ ಅವರಂತಹ ಅನುಭವಿ ಬೌಲರ್​ಗಳಿಗೆ ಸಿಕ್ಸರ್ ಹಾಗೂ ಬೌಂಡರಿಗಳ ಮಳೆ ಸುರಿಸಿದರು. ಇದರ ಪರಿಣಾಮವಾಗಿ ಪವರ್‌ಪ್ಲೇನಲ್ಲಿಯೇ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಪವರ್‌ಪ್ಲೇನಲ್ಲಿ ಅತ್ಯಧಿಕ ರನ್

ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 15 ಎಸೆತಗಳಲ್ಲಿ 7 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ ಈ ಅರ್ಧಶತಕ ಪೂರೈಸಿದರು. ಈ ಮೂಲಕ ಇದೇ ಐಪಿಎಲ್​ನಲ್ಲಿ ವೈಭವ್ ಸೂರ್ಯವಂಶಿ ಎರಡನೇ ಬಾರಿಗೆ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಸಾಧನೆ ಮಾಡಿದರು. ಇದಕ್ಕೂ ಮುನ್ನ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲೂ ವೈಭವ್ ಅರ್ಧಶತಕದ ಇನ್ನಿಂಗ್ಸ್ ಆಡಿದ್ದರು. ವೈಭವ್ ಅವರ ಈ ಅಬ್ಬರದ ಇನ್ನಿಂಗ್ಸ್​ನಿಂದಾಗಿ ರಾಜಸ್ಥಾನ್ ತಂಡ ಐಪಿಎಲ್ ಇತಿಹಾಸದಲ್ಲಿ ಪವರ್‌ಪ್ಲೇನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಮಾಡಿತು.

RR vs RCB IPL 2026 Live Score: ರಾಜಸ್ಥಾನ್ 4ನೇ ವಿಕೆಟ್ ಪತನ

26 ಎಸೆತಗಳಲ್ಲಿ  78 ರನ್

ರಾಜಸ್ಥಾನ್ ತಂಡ ಮೊದಲ 6 ಓವರ್​ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು 97 ರನ್ ಕಲೆಹಾಕಿತು. ಅರ್ಧಶತಕದ ಬಳಿಕವೂ ತನ್ನ ಹೊಡಿಬಡಿ ಆಟವನ್ನು ಮುಂದುವರೆಸಿದ ವೈಭವ್ 6.2 ಓವರ್‌ಗಳಲ್ಲಿ ತಂಡವನ್ನು 100 ರನ್​ಗಳ ಗಡಿ ದಾಟಿಸಿದರು. ಹಾಗೆಯೇ 7.4 ಓವರ್​ಗಳಲ್ಲಿ ಧೃವ್ ಜುರೇಲ್ ಅವರೊಂದಿಗೆ ಶತಕದ ಜೊತೆಯಾಟವನ್ನು ಹಂಚಿಕೊಂಡರು. ಶತಕದತ್ತ ಸಾಗುತ್ತಿದ್ದ ವೈಭವ್ 26 ಎಸೆತಗಳಲ್ಲಿ 8 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್ ಸಹಿತ 78 ರನ್ ಬಾರಿಸಿ ಔಟಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:28 pm, Fri, 10 April 26

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ