AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​​ ಆರಂಭಕ್ಕೂ ಮುನ್ನ ಶಾಕ್​​​​​: ಈ ಬಾರಿ ಆರ್​ಸಿಬಿ ತಂಡದಲ್ಲಿರಲ್ಲ ಯಶ್ ದಯಾಳ್

ಮಾರ್ಚ್​ 28ರಿಂದ ಐಪಿಎಲ್​ ಹಬ್ಬ ಶುರುವಾಗಲಿದೆ. ಆದರೆ ಅದಕ್ಕೂ ಮೊದಲು ಆರ್‌ಸಿಬಿ ಅಭಿಮಾನಿಗಳಿಗೆ ಶಾಕ್​ ಎದುರಾಗಿದೆ. ಅದೇನೆಂದರೆ ಅತ್ಯಾಚಾರ ಆರೋಪ ಎದುರಿಸುತ್ತಿರುವ ವೇಗಿ ಯಶ್ ದಯಾಳ್ ಐಪಿಎಲ್ 2026ರ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುವುದಿಲ್ಲ ಎಂದು ಆರ್​ಸಿಬಿ ನಿರ್ದೇಶಕ ಮೋ ಬೋಬಾಟ್ ದೃಢಪಡಿಸಿದ್ದಾರೆ.

ಐಪಿಎಲ್​​ ಆರಂಭಕ್ಕೂ ಮುನ್ನ ಶಾಕ್​​​​​: ಈ ಬಾರಿ ಆರ್​ಸಿಬಿ ತಂಡದಲ್ಲಿರಲ್ಲ ಯಶ್ ದಯಾಳ್
ಯಶ್ ದಯಾಳ್Image Credit source: newsfirstprime.com
ಗಂಗಾಧರ​ ಬ. ಸಾಬೋಜಿ
|

Updated on:Mar 24, 2026 | 4:19 PM

Share

RCBಯ ಸ್ಟಾರ್ ಬೌಲರ್ ಯಶ್ ದಯಾಳ್ (Yash Dayal)​ ಅವರ ಮೇಲೆ ಎರಡೆರಡು ಅತ್ಯಾಚಾರದ ಆರೋಪಗಳಿವೆ. ಇತ್ತೀಚಿಗೆ ಹೊಸ ಸೀಸನ್ ಆರಂಭದ ಮುನ್ನ ನಡೆದ ತರಬೇತಿಯಲ್ಲೂ ಅವರು ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಆರ್​​ಸಿಬಿ ತಂಡದಿಂದ ಗೇಟ್‌ಪಾಸ್ ನೀಡಲಾಗಿದೆ ಎಂಬ ವದಂತಿಗಳು ಹಬ್ಬಿದ್ದವು. ಸದ್ಯ ಇದೆಲ್ಲದಕ್ಕೂ ಇದೀಗ ಉತ್ತರ ಸಿಕ್ಕಿದೆ. ಯಶ್ ದಯಾಳ್ ಈ ಬಾರಿ ಆರ್​ಸಿಬಿ ತಂಡದಲ್ಲಿ ಇರುವುದಿಲ್ಲ ಎಂದು ಆರ್​ಸಿಬಿ ನಿರ್ದೇಶಕ ಮೋ ಬೋಬಾಟ್ ದೃಢಪಡಿಸಿದ್ದಾರೆ.

ಆರ್​​ಸಿಬಿ ತಂಡದಲ್ಲಿ ಮಿಂಚಿರುವ ಸ್ಟಾರ್ ಬೌಲರ್ ಯಶ್ ದಯಾಳ್ ಕೋಟ್ಯಂತರ ಅಭಿಮಾನಿ ಬಳಗ ಹೊಂದಿದ್ದಾರೆ. 2025ರ ಐಪಿಎಲ್​​ನಲ್ಲಿ ಆರ್​ಸಿಬಿ ಗೆಲುವಿಗೆ ಕಾರಣರಾಗಿದ್ದರು. ಆದರೆ ಈ ಬಾರಿ ಆರ್​ಸಿಬಿ ತಂಡದಲ್ಲಿ ಇರುವುದಿಲ್ಲ ಎಂಬುವುದು ಇದೀಗ ದೃಢವಾಗಿದೆ. ಹೀಗಾಗಿ ಇದು ಅವರ ಮತ್ತು ಆರ್​​ಸಿಬಿ ಅಭಿಮಾನಿಗಳಿಗೆ ದೊಡ್ಡ ಶಾಕ್​​ ನೀಡಿದೆ.

ಆರ್​ಸಿಬಿ ನಿರ್ದೇಶಕ ಮೋ ಬೋಬಾಟ್ ಹೇಳಿದ್ದಿಷ್ಟು 

ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್​ಸಿಬಿ ನಿರ್ದೇಶಕ ಮೋ ಬೋಬಾಟ್, ಯಶ್ ದಯಾಳ್ ಈ ಬಾರಿ ಆರ್​ಸಿಬಿ ತಂಡದಲ್ಲಿ ಇರುವುದಿಲ್ಲ, ಆದರೆ ಅವರಿಗೆ ಏನು ಸಹಕಾರ ನೀಡಬೇಕು ಅದನ್ನು ಆರ್​ಸಿಬಿ ನೀಡುತ್ತದೆ. ಸದ್ಯ ಅವರು ತಮ್ಮ ವೈಯಕ್ತಿಕ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಐಪಿಎಲ್ ವೇಳೆ ದೈಹಿಕ ಕಿರುಕುಳ ನೀಡಿದ್ರು’; ಯಶ್ ದಯಾಳ್ ವಿರುದ್ಧ ದೂರು ನೀಡಿದ ಮತ್ತೋರ್ವ ಯುವತಿ

ಯಶ್ ದಯಾಳ್​​ರನ್ನ ನಾವು ತಂಡದಲ್ಲಿ ಉಳಿಸಿಕೊಳ್ಳಲು ಬಯಸಿದ್ದು, ಅವರು ಇನ್ನೂ ಒಪ್ಪಂದದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಅದೇ ಒಪ್ಪಂದದಡಿ ಮುಂದುವರೆಯಲಿದ್ದಾರೆ. ನಾವು ಅವರೊಂದಿಗೆ ಸಂಪರ್ಕದಲ್ಲಿದ್ದೇವೆ. ಇಂದು ಸಹ ನಾನು ಅವರೊಂದಿಗೆ ಮಾತನಾಡಿದ್ದೇನೆ. ಆದರೆ ಈ ಸಮಯದಲ್ಲಿ ತಂಡಕ್ಕೆ ಸೇರದಿರುವುದು ಅವರ ಮತ್ತು ಫ್ರಾಂಚೈಸಿಯ ಹಿತಕ್ಕೂ ಸರಿಯಲ್ಲ ಎಂದು ನಿರ್ಧರಿಸಲಾಗಿದೆ ಎಂದು ಆರ್​ಸಿಬಿ ನಿರ್ದೇಶಕ ಮೋ ಬೋಬಾಟ್ ತಿಳಿಸಿದ್ದಾರೆ.

ಇದನ್ನೂ ಓದಿ: IPL 2026: ಅಭ್ಯಾಸದಲ್ಲಿ ಕಾಣಿಸಿಕೊಳ್ಳದ ಯಶ್ ದಯಾಳ್; ತಂಡದಿಂದ ಹೊರಹಾಕಿತಾ ಆರ್​ಸಿಬಿ?

ರಾಜಸ್ಥಾನದ ಜೈಪುರದಲ್ಲಿ ಆರ್​ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. 19 ವರ್ಷದ ಕ್ರಿಕೆಟ್ ಆಟಗಾರ್ತಿಯಾಗಿದ್ದ ಸಂತ್ರಸ್ತೆ, ದಯಾಳ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ನನಗೆ 17 ವರ್ಷ ಇದ್ದಾಗ 2023ರಲ್ಲಿ, ದಯಾಳ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. 2025ರ ಏಪ್ರಿಲ್‌ ತಿಂಗಳಲ್ಲೂ ಜೈಪುರದ ಸೀತಾಪುರ ಪ್ರದೇಶದ ಹೋಟೆಲ್‌ನಲ್ಲಿ ಇದೇ ರೀತಿ ನನ್ನ ಬಳಸಿಕೊಂಡಿದ್ದ ಅಂತ ದೂರುದಾರ ಸಂತ್ರಸ್ತೆ ಆರೋಪಿಸಿದ್ದರು. ಈ ಪ್ರಕರಣ ಬೆನ್ನಲ್ಲೇ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Tue, 24 March 26

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ