AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಯಶಸ್ವಿ ಜೈಸ್ವಾಲ್ ರಾಜಸ್ಥಾನ್ ರಾಯಲ್ಸ್ ತಂಡ ತೊರೆಯಲಿ

Yashasvi Jaiswal: ರಾಜಸ್ಥಾನ್ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಅವರ ಅದ್ಭುತ ಪ್ರದರ್ಶನ ಯಶಸ್ವಿ ಜೈಸ್ವಾಲ್ ಅವರ ಸ್ಥಾನವನ್ನು ಅಲುಗಾಡಿಸಿದೆ. ಈ ಕುರಿತು ಅಂಬಟಿ ರಾಯುಡು, ಜೈಸ್ವಾಲ್ ರಾಜಸ್ಥಾನ್ ತೊರೆದು ಮುಂಬೈ ಇಂಡಿಯನ್ಸ್ ಸೇರಬೇಕು ಎಂದು ಸಲಹೆ ನೀಡಿದ್ದಾರೆ. ವೈಭವ್ ನೆರಳಿನಲ್ಲಿ ಸಿಲುಕದೆ, ಸ್ಟಾರ್ ಆಟಗಾರನಾಗಿ ಮುಂದುವರಿಯಲು ಹೊಸ ವೇದಿಕೆ ಅಗತ್ಯ ಎಂದು ರಾಯುಡು ಅಭಿಪ್ರಾಯಪಟ್ಟಿದ್ದಾರೆ. ಜೈಸ್ವಾಲ್ ಮುಂಬೈ ಇಂಡಿಯನ್ಸ್‌ಗೆ ಉತ್ತಮ ಆಯ್ಕೆ ಎಂದೂ ಅವರು ಸೂಚಿಸಿದ್ದಾರೆ.

IPL 2026: ಯಶಸ್ವಿ ಜೈಸ್ವಾಲ್ ರಾಜಸ್ಥಾನ್ ರಾಯಲ್ಸ್ ತಂಡ ತೊರೆಯಲಿ
Yashasvi Jaiswal
ಪೃಥ್ವಿಶಂಕರ
|

Updated on: May 28, 2026 | 8:03 PM

Share

ರಾಜಸ್ಥಾನ್ ರಾಯಲ್ಸ್ (RR) ತಂಡವು ಎಲಿಮಿನೇಟರ್ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಮಣಿಸುವ ಮೂಲಕ ಐಪಿಎಲ್ 2026 (IPL 2026) ರ ಎರಡನೇ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದುಕೊಂಡಿದೆ. ರಾಜಸ್ಥಾನ್ ತಂಡದ ಈ ಗೆಲುವಿನಲ್ಲಿ ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅವರ ಸಿಡಿಲಬ್ಬರದ 97 ರನ್​ಗಳ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತು. ಇದೀಗ ರಾಜಸ್ಥಾನ್ ತಂಡ ಫೈನಲ್​ಗೇರಬೇಕೆಂದರೆ ಇದೀಗ ಕ್ವಾಲಿಫೈಯರ್ 2 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಬೇಕಿದೆ. ಈ ಪಂದ್ಯದಲ್ಲೂ ವೈಭವ್ ಅಬ್ಬರಿಸಿದರೆ ತಂಡಕ್ಕೆ ಗೆಲುವು ಖಚಿತ. ಇದರ ನಡುವೆ ಅದೇ ರಾಜಸ್ಥಾನ್ ತಂಡದ ಮತ್ತೊಬ್ಬ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ಮುಂದಿನ ಆವೃತ್ತಿಯಲ್ಲಿ ತಂಡ ಬದಲಿಸಿದರೆ ಅವರಿಗೆ ಉಳಿಗಾಲ, ಇಲ್ಲದಿದ್ದರೆ ಅವರಿಗೆ ಸಿಗುವ ಸ್ಥಾನಮಾನ ಸಿಗುವುದಿಲ್ಲ ಎಂದು ಭಾರತದ ಮಾಜಿ ಬ್ಯಾಟ್ಸ್‌ಮನ್ ಅಂಬಟಿ ರಾಯುಡು ಸಲಹೆ ನೀಡಿದ್ದಾರೆ.

ಈ ಆವೃತ್ತಿಯ ಉದ್ದಕ್ಕೂ, ವೈಭವ್ ಸೂರ್ಯವಂಶಿ ಉತ್ತಮ ಪ್ರದರ್ಶನವನ್ನು ನೀಡಿ ತಂಡಕ್ಕೆ ಸ್ಫೋಟಕ ಆರಂಭವನ್ನು ಒದಗಿಸಿದ್ದಾರೆ. ಇದರಿಂದ ಎಲ್ಲರ ಗಮನ ವೈಭವ್ ಸೂರ್ಯವಂಶಿ ಮೇಲೆಯೇ ಇದೆ. ಆದರೆ ವೈಭವ್ ಬರುವುದಕ್ಕೂ ಮುನ್ನ ರಾಜಸ್ಥಾನ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಡುತ್ತಿದ್ದ ಯಶಸ್ವಿ ಇದೀಗ ಜನಮನದಿಂದ ಕಾಣೆಯಾಗಿರುವಂತೆ ತೋರುತ್ತಿದೆ.

ನೆರಳಿನಲ್ಲಿ ಉಳಿಯಲು ಸಾಧ್ಯವಿಲ್ಲ

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ನಂತರ, ಇಎಸ್‌ಪಿಎನ್-ಕ್ರಿಕ್‌ಇನ್ಫೋದಲ್ಲಿ ಜೈಸ್ವಾಲ್ ಬಗ್ಗೆ ಇದೇ ರೀತಿಯ ಹೇಳಿಕೆ ನೀಡಿದ ರಾಯುಡು, ಯಶಸ್ವಿ ಜೈಸ್ವಾಲ್ ತಂಡವನ್ನು ಬದಲಾಯಿಸಬೇಕು. ಯಶಸ್ವಿ ತಮ್ಮ ಆಟವನ್ನು ಬದಲಾಯಿಸುವ ಅಗತ್ಯವಿಲ್ಲ. ಸೂರ್ಯವಂಶಿಯೊಂದಿಗೆ ಬ್ಯಾಟಿಂಗ್ ಮಾಡುವ ಮೂಲಕ ಅವರ ನೆರಳಿನಲ್ಲಿ ಉಳಿಯಲು ಸಾಧ್ಯವಿಲ್ಲ. ಅವರು ಸ್ವತಃ ಒಬ್ಬ ಸ್ಟಾರ್ ಆಟಗಾರ. ಅವರು ಬೇರೆ ತಂಡಕ್ಕೆ ಹೋದರೆ, ಅವರು ಏಕಾಂಗಿಯಾಗಿ ಪಂದ್ಯಗಳನ್ನು ಗೆದ್ದುಕೊಡುತ್ತಾರೆ. ಅವರಿಗೆ ಇನ್ನೊಂದು ವೇದಿಕೆ ಬೇಕು. ಅದು ಸಾಧ್ಯವಾದರೆ, ಜೈಸ್ವಾಲ್ ಇತರ ಆಟಗಾರರನ್ನು ಮೀರಿಸುತ್ತಾರೆ.

ಮುಂಬೈ ಇಂಡಿಯನ್ಸ್ ಉತ್ತಮ ತಂಡ

ಜೈಸ್ವಾಲ್ ಯಾವ ತಂಡವನ್ನು ಸೇರಬೇಕು ಎಂಬುದನ್ನು ತಿಳಿಸಿರುವ ರಾಯುಡು, ‘ಜೈಸ್ವಾಲ್​ಗೆ ಮುಂಬೈ ಇಂಡಿಯನ್ಸ್ ಉತ್ತಮ ತಂಡವಾಗಿದೆ. ಏಕೆಂದರೆ ಅವರು ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ಪರ ಆಡುತ್ತಾರೆ. ಈ ತಂಡ ಅವರಿಗೆ ಮನೆಯಂತೆ ಭಾಸವಾಗುತ್ತದೆ ಮತ್ತು ಸ್ಥಳೀಯ ಅಭಿಮಾನಿಗಳಿಂದ ಅವರಿಗೆ ಉತ್ತಮ ಬೆಂಬಲ ಸಿಗುತ್ತದೆ. ಅವರು ಈಗಾಗಲೇ ವಾಂಖೆಡೆ ಕ್ರೀಡಾಂಗಣದಲ್ಲಿ ಹಲವಾರು ಉತ್ತಮ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಇದಲ್ಲದೆ, ರೋಹಿತ್ ಶರ್ಮಾ ಅವರ ಫಿಟ್‌ನೆಸ್ ಮತ್ತು ಫಾರ್ಮ್ ಅನ್ನು ಗಮನಿಸಿದರೆ, ಮುಂಬೈಗೆ ಯುವ ಭಾರತೀಯ ಆರಂಭಿಕ ಆಟಗಾರನ ಅಗತ್ಯವಿರಬಹುದು. ಇದನ್ನು ಗಮನಿಸಿದರೆ ಜೈಸ್ವಾಲ್‌ಗಿಂತ ಉತ್ತಮ ಆಯ್ಕೆ ಇಲ್ಲ ಎಂದು ರಾಯುಡು ಅಭಿಪ್ರಾಯಪಟ್ಟಿದ್ದಾರೆ.

MI vs RR: ಮೊದಲ ಓವರ್​ನಲ್ಲಿ ಸಿಕ್ಸರ್; ರೋಹಿತ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್

ರಾಜಸ್ಥಾನ ಪರ ಜೈಸ್ವಾಲ್ ದಾಖಲೆ

ಈ ಆವೃತ್ತಿಯಲ್ಲಿ ಜೈಸ್ವಾಲ್ ಅವರ ಪ್ರದರ್ಶನವು ಕಳೆದ ಸೀಸನ್​ಗೆ ಹೋಲಿಸಿದರೆ ಸ್ವಲ್ಪ ನೀರಸವಾಗಿದೆ. ಆದಾಗ್ಯೂ, ಅವರು ರಾಜಸ್ಥಾನ ಪರ ಕೆಲವು ನಿರ್ಣಾಯಕ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಐಪಿಎಲ್ 2026 ರಲ್ಲಿ ಇಲ್ಲಿಯವರೆಗೆ, ಜೈಸ್ವಾಲ್ 15 ಪಂದ್ಯಗಳಲ್ಲಿ 426 ರನ್ ಗಳಿಸಿದ್ದು, ಸರಾಸರಿ 32.77 ಮತ್ತು 153.23 ರ ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಇನ್ನು ಅವರ ಒಟ್ಟಾರೆ ಐಪಿಎಲ್ ವೃತ್ತಿಜೀವನಕ್ಕೆ ಸಂಬಂಧಿಸಿದಂತೆ, ಜೈಸ್ವಾಲ್ 2020 ರಿಂದ ರಾಜಸ್ಥಾನದ ಭಾಗವಾಗಿದ್ದ್ದು, ಈ ಫ್ರಾಂಚೈಸಿ ಪರ 82 ಪಂದ್ಯಗಳನ್ನು ಆಡಿದ್ದು, ಎರಡು ಶತಕಗಳು ಮತ್ತು 18 ಅರ್ಧಶತಕಗಳು ಸೇರಿದಂತೆ 2,592 ರನ್ ಗಳಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ