ಐಪಿಎಲ್ ಹರಾಜಿಗೆ ಸೆಹ್ವಾಗ್ ಪುತ್ರನ ಎಂಟ್ರಿ; ದ್ರಾವಿಡ್ ಮಗನ ಹೆಸರೇ ನಾಪತ್ತೆ

ಐಪಿಎಲ್ 2027ರ ಆಟಗಾರರ ಹರಾಜು ಡಿಸೆಂಬರ್ 16ರಂದು ಗೋವಾದಲ್ಲಿ ನಡೆಯಲಿದೆ. ಒಟ್ಟು 1,220 ಆಟಗಾರರು ನೋಂದಾಯಿಸಿಕೊಂಡಿದ್ದು, ವೀರೇಂದ್ರ ಸೆಹ್ವಾಗ್ ಪುತ್ರ ಆರ್ಯವೀರ್ ಸೆಹ್ವಾಗ್ ವಿಶೇಷ ಗಮನ ಸೆಳೆದಿದ್ದಾರೆ. ಅಂಡರ್-19 ಏಷ್ಯಾಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆರ್ಯವೀರ್ ಮೂಲ ಬೆಲೆ 30 ಲಕ್ಷ ರೂಪಾಯಿ ನಿಗದಿಯಾಗಿದೆ. ಮೋಹಿತ್ ಉಲ್ವಾ, ಕಾವ್ಯ ಪಟೇಲ್ ಕೂಡ ಇದ್ದು, ಅನ್ವಯ್ ದ್ರಾವಿಡ್ ಭಾಗವಹಿಸಿಲ್ಲ. ಯುವ ಪ್ರತಿಭೆಗಳ ಮೇಲೆ ತಂಡಗಳ ಕಣ್ಣಿದೆ.

ಐಪಿಎಲ್ ಹರಾಜಿಗೆ ಸೆಹ್ವಾಗ್ ಪುತ್ರನ ಎಂಟ್ರಿ; ದ್ರಾವಿಡ್ ಮಗನ ಹೆಸರೇ ನಾಪತ್ತೆ
ಆರ್ಯವೀರ್ ಸೆಹ್ವಾಗ್, ಅನ್ವಯ್ ದ್ರಾವಿಡ್

Updated on: Nov 25, 2026 | 10:04 PM

ಐಪಿಎಲ್ 2027ರ ಆಟಗಾರರ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಬಾರಿಯ ಹರಾಜಿಗಾಗಿ ಒಟ್ಟು 1,220 ಆಟಗಾರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 798 ಮಂದಿ ಅನ್‌ಕ್ಯಾಪ್ಡ್ ಭಾರತೀಯ ಆಟಗಾರರು ಕೂಡ ಸೇರಿದ್ದಾರೆ. ಕಳೆದ ಐಪಿಎಲ್​ನಲ್ಲಿ ಆಡಿದ್ದ 127 ಅನ್‌ಕ್ಯಾಪ್ಡ್ ಭಾರತೀಯ ಆಟಗಾರರು ಹಾಗೂ 69 ಅನ್‌ಕ್ಯಾಪ್ಡ್ ವಿದೇಶಿ ಆಟಗಾರರು ಹರಾಜಿಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಟೀಂ ಇಂಡಿಯಾದ ಮಾಜಿ ಸ್ಫೋಟಕ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ಪುತ್ರ ಆರ್ಯವೀರ್ ಸೆಹ್ವಾಗ್ ಹೆಸರು ಕೂಡ ಇರುವುದು ವಿಶೇಷ. ಹೀಗಾಗಿ ಮುಂಬರುವ ಹರಾಜಿನಲ್ಲಿ ಎಲ್ಲರ ಕಣ್ಣು ಆರ್ಯವೀರ್ ಮೇಲಿರಲಿದೆ.

ಆರ್ಯವೀರ್ ಸೆಹ್ವಾಗ್ ಮೂಲ ಬೆಲೆ 30 ಲಕ್ಷ ರೂ.

ಐಪಿಎಲ್ 2027ರ ಹರಾಜಿನಲ್ಲಿ ಆರ್ಯವೀರ್ ಸೆಹ್ವಾಗ್ ಅವರ ಮೂಲ ಬೆಲೆಯನ್ನು 30 ಲಕ್ಷ ರೂಪಾಯಿಗಳೆಂದು ನಿಗದಿಪಡಿಸಲಾಗಿದೆ. ಇತ್ತೀಚೆಗೆ ನಡೆದ ಅಂಡರ್-19 ಏಷ್ಯಾಕಪ್‌ನಲ್ಲಿ ಆರ್ಯವೀರ್ ಭಾರತ ತಂಡದ ಪರ ಉತ್ತಮ ಪ್ರದರ್ಶನ ನೀಡಿದ್ದರು. ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿದಿದ್ದ ಅವರು, ತಮ್ಮ ಆಕರ್ಷಕ ಬ್ಯಾಟಿಂಗ್ ಶೈಲಿ ಹಾಗೂ ಸ್ಫೋಟಕ ಹೊಡೆತಗಳ ಮೂಲಕ ಗಮನ ಸೆಳೆದಿದ್ದರು. ಹೀಗಾಗಿ ಮುಂಬರುವ ಐಪಿಎಲ್ ಹರಾಜಿನಲ್ಲಿ ಯಾವ ತಂಡ ಅವರನ್ನು ಖರೀದಿಸಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

Loading...

ಇನ್ನು ಅಂಡರ್-19 ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಮಿಂಚಿದ್ದ ಮೋಹಿತ್ ಉಲ್ವಾ ಕೂಡ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಬೌಲಿಂಗ್ ಜೊತೆಗೆ ಕೆಳಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಮರ್ಥ್ಯ ಹೊಂದಿರುವ ಮೋಹಿತ್ ಮೇಲೂ ಫ್ರಾಂಚೈಸಿಗಳ ಕಣ್ಣಿದೆ.

ಐಪಿಎಲ್ ಮಿನಿ ಹರಾಜು: 2 ಕೋಟಿ ರೂ. ಮೂಲ ಬೆಲೆ ಘೋಷಿಸಿರುವ 29 ಆಟಗಾರರಿವರು

ಹೆಸರು ನೋಂದಾಯಿಸದ ಅನ್ವಯ್ ದ್ರಾವಿಡ್

ಒಂದೆಡೆ ವೀರೇಂದ್ರ ಸೆಹ್ವಾಗ್ ಪುತ್ರ ಆರ್ಯವೀರ್ ತಮ್ಮ ಪ್ರದರ್ಶನದ ಮೂಲಕ ಗಮನ ಸೆಳೆಯುತ್ತಿದ್ದರೆ, ಮತ್ತೊಂದೆಡೆ ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಅನ್ವಯ್ ದ್ರಾವಿಡ್ ಐಪಿಎಲ್ ಹರಾಜಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿಲ್ಲ. ಅಂಡರ್-19 ಭಾರತ ಏಕದಿನ ತಂಡದ ನಾಯಕ ಲಕ್ಷ್ಯ ರಾಜೇಶ್ ರೈಚಂದಾನಿ ಕೂಡ ಹರಾಜಿಗೆ ಹೆಸರು ನೋಂದಾಯಿಸದಿರುವುದು ವಿಶೇಷ.

ಆದರೆ ಆರ್ಯವೀರ್ ಸೆಹ್ವಾಗ್ ಹಾಗೂ ಮೋಹಿತ್ ಉಲ್ವಾ ಜೊತೆಗೆ ಅಂಡರ್-19 ತಂಡದ ಕಾವ್ಯ ಪಟೇಲ್ ಕೂಡ ಈ ಬಾರಿಯ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಎಲ್ಲಾ ಅಂಡರ್-19 ಆಟಗಾರರ ಮೂಲ ಬೆಲೆಯನ್ನು 30 ಲಕ್ಷ ರೂಪಾಯಿಗಳೆಂದು ನಿಗದಿಪಡಿಸಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More
Loading...
Unable to load recommendations.
Follow Us