
ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2027ರ ಐಪಿಎಲ್ ಮಿನಿ ಹರಾಜಿಗೂ ಮುನ್ನ ತಾನು ಉಳಿಸಿಕೊಂಡಿರುವ ಮತ್ತು ಬಿಡುಗಡೆ ಮಾಡಿರುವ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಮುಂಬರುವ ಆವೃತ್ತಿಗಾಗಿ ತನ್ನ ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಆರ್‌ಸಿಬಿ, ಇಂಗ್ಲೆಂಡ್ ಬ್ಯಾಟರ್ ಜೇಕಬ್ ಬೆಥೆಲ್ ಸೇರಿದಂತೆ ಐವರು ಆಟಗಾರರನ್ನು ತಂಡದಿಂದ ಬಿಡುಗಡೆ ಮಾಡಿದೆ. ಕಳೆದ ಆವೃತ್ತಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಆರ್‌ಸಿಬಿ, ಮುಂಬರುವ ಆವೃತ್ತಿಯಲ್ಲೂ ತನ್ನ ಬಲಿಷ್ಠ ತಂಡವನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದೆ. ಅದರಲ್ಲೂ ಕಳೆದ ಹರಾಜಿನಲ್ಲಿ ದುಬಾರಿ ಮೊತ್ತಕ್ಕೆ ಖರೀದಿಸಿದ್ದ ಮಂಗೇಶ್ ಯಾದವ್ ಅವರನ್ನು ಬಿಡುಗಡೆ ಮಾಡಿರುವುದು ಗಮನಾರ್ಹವಾಗಿದೆ.
2027ರ ಐಪಿಎಲ್ (IPL) ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇಂಗ್ಲೆಂಡ್ ಬ್ಯಾಟರ್ ಜೇಕಬ್ ಬೆಥೆಲ್ ಅವರನ್ನು ತಂಡದಿಂದ ಬಿಡುಗಡೆ ಮಾಡಿದೆ. 2026ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗಿಂತ ಐಪಿಎಲ್‌ಗೆ ಹೆಚ್ಚಿನ ಆದ್ಯತೆ ನೀಡುವ ನಿರ್ಧಾರದಿಂದಾಗಿ ಬೆಥೆಲ್ ಎಲ್ಲರ ಗಮನ ಸೆಳೆದಿದ್ದರು. ಎರಡು ಬಾರಿಯ ಹಾಲಿ ಚಾಂಪಿಯನ್ ತಂಡವಾದ ಆರ್‌ಸಿಬಿ, ಕಳೆದ ಹರಾಜಿನಲ್ಲಿ 5.2 ಕೋಟಿ ರೂಪಾಯಿಗಳ ಭಾರಿ ಮೊತ್ತಕ್ಕೆ ಖರೀದಿಸಿದ್ದ ಅನ್‌ಕ್ಯಾಪ್ಡ್ ವೇಗದ ಬೌಲರ್ ಮಂಗೇಶ್ ಯಾದವ್ ಅವರನ್ನೂ ಸಹ ಕೈಬಿಟ್ಟಿದೆ. ಇದರೊಂದಿಗೆ, ಈ ವರ್ಷದ ಆರಂಭದಲ್ಲಿ ಭಾರತದೊಂದಿಗೆ ಅಂಡರ್-19 (U19) ವಿಶ್ವಕಪ್ ಗೆದ್ದಿದ್ದ ಎಡಗೈ ಆಟಗಾರ ವಿಹಾನ್ ಮಲ್ಹೋತ್ರಾ ಅವರನ್ನೂ ಸಹ ತಂಡದಿಂದ ಬಿಡುಗಡೆ ಮಾಡಲಾಗಿದೆ.
ಯುವ ವೇಗಿ ಮಂಗೇಶ್ ಯಾದವ್ ಅವರನ್ನು ಬಿಡುಗಡೆ ಮಾಡಿರುವುದು ಆರ್‌ಸಿಬಿಯ ಪ್ರಮುಖ ನಿರ್ಧಾರಗಳಲ್ಲಿ ಒಂದಾಗಿದೆ. ಕಳೆದ ಹರಾಜಿನಲ್ಲಿ ಬರೋಬ್ಬರಿ 5.2 ಕೋಟಿ ರು ನೀಡಿ ಅವರನ್ನು ತಂಡಕ್ಕೆ ಖರೀದಿಸಲಾಗಿತ್ತು. ಅನ್‌ಕ್ಯಾಪ್ಡ್ ಆಟಗಾರನಾಗಿದ್ದ ಮಂಗೇಶ್ ಮೇಲೆ ಆರ್‌ಸಿಬಿ ದೊಡ್ಡ ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ಇದೀಗ ಅವರನ್ನು ತಂಡದಿಂದ ರಿಲೀಸ್ ಮಾಡಿದ್ದು, 2027ರ ಐಪಿಎಲ್‌ಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಪ್ರಮುಖ ಆಟಗಾರರನ್ನು ಉಳಿಸಿಕೊಳ್ಳುವತ್ತ ಹೆಚ್ಚಿನ ಗಮನಹರಿಸಿದೆ.
ಅನುಭವಿ ಆಟಗಾರರು ಮತ್ತು ಯುವ ಪ್ರತಿಭೆಗಳು ತಂಡದಲ್ಲಿ ಮುಂದುವರಿಯಲಿದ್ದಾರೆ. ನಾಯಕ ರಜತ್ ಪಾಟಿದಾರ್ ಅವರ ನಾಯಕತ್ವ ಮತ್ತು ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ ಅನುಭವವನ್ನು ತಂಡವು ಹೆಚ್ಚಾಗಿ ನೆಚ್ಚಿಕೊಂಡಿದೆ. ಫಿಲ್ ಸಾಲ್ಟ್, ಜಿತೇಶ್ ಶರ್ಮಾ ಮತ್ತು ಟಿಮ್ ಡೇವಿಡ್ ಅವರಂತಹ ಆಟಗಾರರು ತಂಡದ ಬ್ಯಾಟಿಂಗ್ ವಿಭಾಗಕ್ಕೆ ಬಲ ತುಂಬಿದರೆ, ಜೋಶ್ ಹ್ಯಾಜಲ್‌ವುಡ್, ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ ಬೌಲಿಂಗ್ ವಿಭಾಗಕ್ಕೆ ಅನುಭವವನ್ನು ನೀಡಲಿದ್ದಾರೆ.
ರಜತ್ ಪಾಟೀದರ್ (ನಾಯಕ), ವಿರಾಟ್ ಕೊಹ್ಲಿ, ಜಿತೇಶ್ ಶರ್ಮಾ, ಭುವನೇಶ್ವರ್ ಕುಮಾರ್, ಕೃಣಾಲ್ ಪಾಂಡ್ಯ, ಜಾಶ್ ಹೇಝಲ್‌ವುಡ್, ಟಿಮ್ ಡೇವಿಡ್, ದೇವದತ್ ಪಡಿಕ್ಕಲ್,ಫಿಲ್ ಸಾಲ್ಟ್, ರೊಮ್ಯಾರಿಯೊ ಶೆಫರ್ಡ್, ನುವಾನ್ ತುಷಾರ, ವೆಂಕಟೇಶ್ ಅಯ್ಯರ್, ಜೇಕಬ್ ಡಫಿ, ಜೋರ್ಡನ್ ಕಾಕ್ಸ್, ರಸಿಖ್ ದಾರ್ ಸಲಾಮ್, ಸುಯಾಶ್ ಶರ್ಮಾ, ವಿಕ್ಕಿ ಒಸ್ತ್ವಾಲ್, ಅಭಿನಂದನ್ ಸಿಂಗ್, ಕಾನಿಷ್ಕ್ ಚೌವ್ಹಾಣ್, ಯಶ್ ದಯಾಳ್.
ಮುಂಬರುವ ಐಪಿಎಲ್ ಆವೃತ್ತಿಗೆ ಇದೇ ಡಿಸೆಂಬರ್‌ನಲ್ಲಿ ನಡೆಯಲಿರುವ ಮಿನಿ ಹರಾಜಿನಲ್ಲಿ ಪ್ರಮುಖ ಆಟಗಾರರ ಮೇಲೆ ಕಣ್ಣಿಟ್ಟಿದೆ. ಐವರು ಆಟಗಾರರನ್ನು ಬಿಡುಗಡೆ ಮಾಡಿರುವುದರಿಂದ ಹರಾಜಿನಲ್ಲಿ ತಂಡಕ್ಕೆ ಅಗತ್ಯವಿರುವ ಸ್ಥಾನಗಳನ್ನು ತುಂಬಿಕೊಳ್ಳಲು ಅವಕಾಶ ಸಿಕ್ಕಿದ್ದು, ಮಿನಿ ಹರಾಜಿನಲ್ಲಿ ಯಾವೆಲ್ಲಾ ಆಟಗಾರರನ್ನು ಖರೀದಿ ಮಾಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
Published On - 8:48 pm, Tue, 17 November 26