AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಬದಲಾಗಲಿದೆ ಐಪಿಎಲ್! ಕ್ರಿಕೆಟ್​ ಫ್ಯಾನ್ಸ್​ಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಬಿಸಿಸಿಐ

IPL Expansion: ಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಅವರು 2028ರಿಂದ ಐಪಿಎಲ್ ಪಂದ್ಯಗಳ ಸಂಖ್ಯೆಯನ್ನು 94ಕ್ಕೆ ಹೆಚ್ಚಿಸುವ ಯೋಜನೆ ಇರುವುದಾಗಿ ತಿಳಿಸಿದ್ದಾರೆ. ಪ್ರಸ್ತುತ 74 ಪಂದ್ಯಗಳಿರುವ ಲೀಗ್, ಹೆಚ್ಚುವರಿ ಪಂದ್ಯಗಳ ಮೂಲಕ ಪ್ರತಿ ತಂಡಕ್ಕೂ ಎಲ್ಲಾ ತಂಡಗಳ ವಿರುದ್ಧ ತವರು ಮತ್ತು ತವರಿನ ಹೊರಗೆ ಆಡಲು ಅವಕಾಶ ನೀಡಲಿದೆ. ಆದಾಗ್ಯೂ, ತಂಡಗಳ ಸಂಖ್ಯೆಯನ್ನು ಹೆಚ್ಚಿಸುವ ಯೋಜನೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

IPL 2025: ಬದಲಾಗಲಿದೆ ಐಪಿಎಲ್! ಕ್ರಿಕೆಟ್​ ಫ್ಯಾನ್ಸ್​ಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಬಿಸಿಸಿಐ
Ipl 2025 All Teams
ಪೃಥ್ವಿಶಂಕರ
|

Updated on:Apr 28, 2025 | 8:18 PM

Share

17 ಆವೃತ್ತಿಗಳನ್ನು ಅತ್ಯಂತ ಯಶಸ್ವಿಯಾಗಿ ಮುಗಿಸಿರುವ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್​ಗೆ (IPL 2025) ಪ್ರಸ್ತುತ ನಡೆಯುತ್ತಿರುವ 18ನೇ ಸೀಸನ್​ ಅಭಿಮಾನಿಗಳಿಗೆ ಮನರಂಜನೆಯ ರಸದೌತಣವನ್ನೇ ಉಣಬಡಿಸುತ್ತಿದೆ. ವರ್ಷದಿಂದ ವರ್ಷಕ್ಕೆ ಈ ಲೀಗ್​ನಲ್ಲಾಗುತ್ತಿರುವ ಬದಲಾವಣೆ ಕೂಡ ಈ ಲೀಗ್​ನ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಇದೀಗ ಕ್ರಿಕೆಟ್ ಅಭಿಮಾನಿಗಳು ಖುಷಿ ಪಡುವಂತಹ ಸುದ್ದಿಯೊಂದು ಹೊರಬಂದಿದೆ. ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ (Arun Dhumal) ಇದೀಗ ಈ ಲೀಗ್ ಅನ್ನು ಮತ್ತಷ್ಟು ವಿಸ್ತರಿಸಲು ಸಿದ್ಧತೆಗಳನ್ನು ಪ್ರಾರಂಭಿಸಿರುವುದಾಗಿ ತಿಳಿಸಿದ್ದಾರೆ.

ಐಪಿಎಲ್ ಅಭಿಮಾನಿಗಳಿಗೆ ಸಿಹಿ ಸುದ್ದಿ

ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿಯ ಪ್ರಕಾರ, ಬಿಸಿಸಿಐ 2028 ರಿಂದ ಐಪಿಎಲ್ ಪಂದ್ಯಗಳ ಸಂಖ್ಯೆಯನ್ನು ಹೆಚ್ಚಿಸಲಿದೆ. ಪ್ರಸ್ತುತ ಐಪಿಎಲ್‌ನಲ್ಲಿ ಫೈನಲ್ ಸೇರಿದಂತೆ ಒಟ್ಟು 74 ಪಂದ್ಯಗಳನ್ನು ಆಡಲಾಗುತ್ತದೆ. ಆದರೆ ಐಪಿಎಲ್ 2028 ರಿಂದ, ಅಭಿಮಾನಿಗಳು ಒಂದು ಸೀಸನ್‌ನಲ್ಲಿ 94 ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ. ಈ ಹಿಂದೆ, ಐಪಿಎಲ್ 2025 ರಲ್ಲಿ 84 ಪಂದ್ಯಗಳನ್ನು ನಡೆಸುವ ಬಗ್ಗೆ ಚಿಂತಿಸಲಾಗಿತ್ತು. ಆದರೆ ಟೂರ್ನಮೆಂಟ್ ವಿಂಡೋದ ಸುತ್ತಲಿನ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಪಂದ್ಯಗಳನ್ನು ಅಳವಡಿಸಲು ಸಾಧ್ಯವಾಗಲಿಲ್ಲ.

ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಹೇಳಿದ್ದೇನು?

2028 ರಲ್ಲಿ ಪ್ರಾರಂಭವಾಗುವ ಮುಂದಿನ ಮಾಧ್ಯಮ-ಹಕ್ಕುಗಳ ಆವೃತ್ತಿಯಿಂದ 94 ಪಂದ್ಯಗಳ ಸ್ವರೂಪಕ್ಕೆ ವಿಸ್ತರಿಸುವ ಬಗ್ಗೆ ಬಿಸಿಸಿಐ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಇಎಸ್‌ಪಿಎನ್‌ಕ್ರಿಕ್‌ಇನ್ಫೋಗೆ ತಿಳಿಸಿದ್ದಾರೆ. ನಾವು ಈ ಬಗ್ಗೆ ಐಸಿಸಿ ಜೊತೆ ಚರ್ಚಿಸುತ್ತಿದ್ದೇವೆ, ಬಿಸಿಸಿಐ ಜೊತೆಯೂ ಚರ್ಚಿಸುತ್ತಿದ್ದೇವೆ. ದ್ವಿಪಕ್ಷೀಯ ಮತ್ತು ಐಸಿಸಿ ಕಾರ್ಯಕ್ರಮಗಳು, ಫ್ರಾಂಚೈಸಿ ಕ್ರಿಕೆಟ್ ಮತ್ತು ಟಿ20 ಕ್ರಿಕೆಟ್‌ಗೆ ಸಂಬಂಧಿಸಿದಂತೆ ಅಭಿಮಾನಿಗಳ ಆಸಕ್ತಿ ಬದಲಾಗುತ್ತಿರುವ ರೀತಿಯನ್ನು ಗಮನಿಸಿದರೆ, ನಾವು ಇದರ ಬಗ್ಗೆ ಹೆಚ್ಚು ಗಂಭೀರವಾಗಿ ಚಿಂತಿಸಬೇಕಾಗಿದೆ.

IPL 2025: ಪ್ಲೇ ಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು? ಇಲ್ಲಿದೆ ವಿವರ

ಪ್ರತಿ ತಂಡಕ್ಕೂ ತವರು ಮತ್ತು ತವರಿನ ಹೊರಗಿನ ಮೈದಾನಗಳಲ್ಲಿ ಪ್ರತಿಯೊಂದು ತಂಡದ ವಿರುದ್ಧ ಆಡುವ ಅವಕಾಶ ಸಿಗುವಂತೆ ಮಾಡಬೇಕೆಂದರೆ ಪಂದ್ಯಗಳ ಸಂಖ್ಯೆಯನ್ನು 94 ಕ್ಕೆ ಏರಿಸಬೇಕು ಎಂದು ಅರುಣ್ ಧುಮಾಲ್ ಹೇಳಿದ್ದಾರೆ. ಅದೇ ಸಮಯದಲ್ಲಿ, ತಂಡಗಳ ಸಂಖ್ಯೆಯನ್ನು ಹೆಚ್ಚಿಸುವ ಬಗ್ಗೆ ಮಾತನಾಡಿದ ಅರುಣ್ ಧುಮಾಲ್, ‘ಪ್ರಸ್ತುತ ಇರುವ 10 ತಂಡಗಳ ಸಂಖ್ಯೆ ಉತ್ತಮವಾಗಿದೆ. ಟೂರ್ನಮೆಂಟ್‌ನಲ್ಲಿ ಆಸಕ್ತಿ ಮತ್ತು ನಾವು ಆಡುವ ಕ್ರಿಕೆಟ್‌ನ ಗುಣಮಟ್ಟವು ಅತ್ಯಂತ ಮುಖ್ಯವಾದ ವಿಷಯ ಎಂದಿದ್ದಾರೆ. ಇದರರ್ಥ ಐಪಿಎಲ್ ಆಡಳಿತ ಮಂಡಳಿಗೆ ತಂಡಗಳನ್ನು ಹೆಚ್ಚಿಸುವ ಯಾವುದೇ ಯೋಚನೆ ಇಲ್ಲ ಎಂಬುದು ಸ್ಪಷ್ಟವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:10 pm, Mon, 28 April 25

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ