15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) ಕಿಚ್ಚು ಹತ್ತಿದ್ದು ದಿನದಿಂದ ದಿನಕ್ಕೆ ಟೂರ್ನಿ ರೋಚಕತೆ ಪಡೆಯುತ್ತಿದೆ. ದುರ್ಬಲ ಅಂದುಕೊಂಡಿದ್ದ ತಂಡವೆಲ್ಲ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಗೆಲುವಿಗಾಗಿ ಹಾತೊರೆಯುತ್ತಿದೆ. ಕಳೆದ ಬಾರಿಯ ವಿನ್ನರ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿದ ಮೂರೂ ಪಂದ್ಯಗಳಲ್ಲಿ ಸೋಲುಂಡು ಕಟ್ಟ ದಾಖಲೆ ಬರೆದಿದೆ. ಎರಡು ಹೊಸ ತಂಡಗಳಾದ ಲಖನೌ ಸೂಪರ್ ಜೇಂಟ್ಸ್ ಮತ್ತು ಗುಜರಾತ್ ಟೈಟನ್ಸ್ ಟೀಮ್ ಕೂಡ ನಿರೀಕ್ಷೆಗೆ ತಕ್ಕ ಆಟವಾಡುತ್ತಿದೆ. ಲೀಗ್ ಪಂದ್ಯಗಳು ಮುಕ್ತಾಯಗೊಂಡ ಬಳಿಕ ಪಾಯಿಂಟ್ ಪಟ್ಟಿಯಲ್ಲಿರುವ ಮೊದಲ ನಾಲ್ಕು ತಂಡಗಳು ಟೂರ್ನಿಯ ಪ್ಲೇ-ಆಫ್‌ನಲ್ಲಿ ಆಡುವ ಅವಕಾಶವನ್ನು ಪಡೆಯುತ್ತವೆ. ಅದರ ನಂತರ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯ ಇರುತ್ತದೆ. ವಿಜೇತ ತಂಡವು ಪ್ರತಿ ಪಂದ್ಯದಲ್ಲಿ 2 ಅಂಕಗಳನ್ನು ಪಡೆಯುತ್ತದೆ. ಇದರ ಜೊತೆಗೆ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.
ಪಾಯಿಂಟ್ ಟೇಬಲ್:
ಆರೆಂಜ್ ಕ್ಯಾಪ್:
ಆಡಿದ ಎರಡೂ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ತೋರಿರುವ ಮುಂಬೈ ಇಂಡಿಯನ್ಸ್ ಬ್ಯಾಟರ್ ಇಶಾನ್ ಕಿಶನ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಒಟ್ಟು 135 ರನ್ ಸಿಡಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಆಕರ್ಷಕ ಶತಕ ಸಿಡಿಸಿದ ಜೋಸ್ ಬಟ್ಲರ್ ಇದ್ದು ಇವರು ಕೂಡ 2 ಪಂದ್ಯಗಳಿಂದ 135 ರನ್ ಕಲೆಹಾಕಿದ್ದಾರೆ. ಮೂರನೇ ಸ್ಥಾನದಲ್ಲಿ ಸಿಎಸ್ಕೆ ತಂಡದ ಶಿವಂ ದುಬೆ ಅವರಿದ್ದು 109 ರನ್ ಗಳಿಸಿದ್ದಾರೆ. ಲಿವಿಂಗ್ಸ್ಟೋನ್ 98 ರನ್ ಗಳಿಸಿ ನಾಲ್ಕನೇ ಸ್ಥಾನ ಮತ್ತು ಆಂಡ್ರೆ ರಸೆಲ್ ಒಟ್ಟು 95 ರನ್ ಸಿಡಿಸಿ ಐದನೇ ಸ್ಥಾನದಲ್ಲಿದ್ದಾರೆ.
ಪರ್ಪಲ್ ಕ್ಯಾಪ್:
ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಉಮೇಶ್ ಯಾದವ್ ಅಗ್ರಸ್ಥಾನದಲ್ಲಿ ಭದ್ರವಾಗಿದ್ದಾರೆ. ಆಡಿದ ಮೂರು ಪಂದ್ಯಗಳಲ್ಲಿ ಇವರು ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 8 ವಿಕೆಟ್ ಕಬಳಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ ತಂಡದ ರಾಹುಲ್ ಚಹಾರ್ ಅವರಿದ್ದು ಮೂರು ಪಂದ್ಯಗಳಿಂದ 6 ವಿಕೆಟ್ ಕಬಳಿಸಿದ್ದಾರೆ. ರಾಜಸ್ಥಾನ್ ತಂಡದ ಯುಜ್ವೇಂದ್ರ ಚಹಲ್ 5 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ. ಇವರ ಜೊತೆಗೆ ಮೊಹಮ್ಮದ್ ಶಮಿ, ಕೆಕೆಆರ್ ತಂಡದ ಟಿಮ್ ಸೌಥೀ 5 ವಿಕೆಟ್ ಕಿತ್ತು ಕ್ರಮವಾಗಿ ನಾಳ್ಕು ಮತ್ತು ಐದನೇ ನಂತರದ ಸ್ಥಾನದಲ್ಲಿದ್ದಾರೆ.
SRH vs LSG: ಐಪಿಎಲ್ನಲ್ಲಿಂದು ಹೈದರಾಬಾದ್- ಲಖನೌ ಮುಖಾಮುಖಿ: ಖಾತೆ ತೆರೆಯುತ್ತಾ ಎಸ್ಆರ್ಹೆಚ್
CSK vs PBKS: ಐಪಿಎಲ್ ಇತಿಹಾಸದಲ್ಲೇ ಭಾರೀ ಮುಖಭಂಗ: ದೊಡ್ಡ ಬದಲಾವಣೆಗೆ ಸಿಎಸ್ಕೆ ಸಜ್ಜು?