AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ ಕದನ ಶುರು: 70 ಲೀಗ್ ಪಂದ್ಯಗಳು, 10 ತಂಡಗಳು: ಯಾರು ಬಲಿಷ್ಠ?

Ipl all team squad 2022: ಈ ಬಾರಿ ಮೆಗಾ ಹರಾಜು ನಡೆದಿರುವುದರಿಂದ ಬಹುತೇಕ ತಂಡಗಳ ಆಟಗಾರರು ಬದಲಾಗಿದ್ದಾರೆ. ಇದಾಗ್ಯೂ ಪ್ರತಿ ಫ್ರಾಂಚೈಸಿ ಬಲಿಷ್ಢ ಪಡೆಯನ್ನೇ ರೂಪಿಸಿಕೊಂಡಿದೆ.

IPL 2022: ಐಪಿಎಲ್ ಕದನ ಶುರು: 70 ಲೀಗ್ ಪಂದ್ಯಗಳು, 10 ತಂಡಗಳು: ಯಾರು ಬಲಿಷ್ಠ?
IPL 2022
TV9 Web
| Updated By: ಝಾಹಿರ್ ಯೂಸುಫ್|

Updated on:Mar 26, 2022 | 8:42 PM

Share

ರಂಗು ರಂಗಿನ ಕ್ರಿಕೆಟ್ ಟೂರ್ನಿ IPL 2022 ಇಂದು ರಂಗೇರಲಿದೆ. ಈ ಬಾರಿ ಒಟ್ಟು 10 ತಂಡಗಳು ಕಣಕ್ಕಿಳಿಯುತ್ತಿರುವುದು ವಿಶೇಷ. ಹಾಗೆಯೇ ಲೀಗ್ ಹಂತದ ಪಂದ್ಯಗಳು ಕೇವಲ ನಾಲ್ಕು ಸ್ಟೇಡಿಯಂಗಳಲ್ಲಿ ನಡೆಯಲಿದೆ. ಅದರಂತೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿನ 20 ಪಂದ್ಯಗಳು, ಬ್ರಬೋರ್ನ್ ಸ್ಟೇಡಿಯಂ (CCI)ನಲ್ಲಿ 15 ಪಂದ್ಯಗಳು, ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ 20 ಪಂದ್ಯಗಳು ಹಾಗೂ ಪುಣೆಯ ಎಂಸಿಎ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿನ 15 ಪಂದ್ಯಗಳು ನಡೆಯಲಿದೆ. 70 ಲೀಗ್ ಹಂತದ ಪಂದ್ಯಗಳು ನಡೆಯಲಿದ್ದು, ಇದಾದ ಬಳಿಕ 4 ಪ್ಲೇ ಆಫ್ ಪಂದ್ಯ ಜರುಗಲಿದೆ. ಇನ್ನು ಮೊದಲ ಪಂದ್ಯದಲ್ಲಿ ಸಿಎಸ್​ಕೆ ಹಾಗೂ ಕೆಕೆಆರ್​ ಮುಖಾಮುಖಿಯಾಗುತ್ತಿದ್ದು, ಉಭಯ ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸುತ್ತಿರುವುದು ಮತ್ತೊಂದು ವಿಶೇಷ. ಅದರಂತೆ ಇದೇ ಮೊದಲ ಬಾರಿಗೆ ರವೀಂದ್ರ ಜಡೇಜಾ ಚೆನ್ನೈ ತಂಡದ ಸಾರಥ್ಯವಹಿಸಿದರೆ, ಶ್ರೇಯಸ್ ಅಯ್ಯರ್ ಕೆಕೆಆರ್ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಈ ಬಾರಿ ಮೆಗಾ ಹರಾಜು ನಡೆದಿರುವುದರಿಂದ ಬಹುತೇಕ ತಂಡಗಳ ಆಟಗಾರರು ಬದಲಾಗಿದ್ದಾರೆ. ಇದಾಗ್ಯೂ ಪ್ರತಿ ಫ್ರಾಂಚೈಸಿ ಬಲಿಷ್ಢ ಪಡೆಯನ್ನೇ ರೂಪಿಸಿಕೊಂಡಿದೆ. 10 ತಂಡಗಳಲ್ಲೂ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ಮೊದಲ ಸುತ್ತಿನವರೆಗೆ ಬಲಿಷ್ಠರು ಯಾರೆಂಬುದನ್ನು ನಿರ್ಧರಿಸಲಾಗುವುದಿಲ್ಲ. ಹಾಗಿದ್ರೆ ಹತ್ತು ತಂಡಗಳಲ್ಲಿರುವ ಆಟಗಾರರು ಯಾರೆಲ್ಲಾ ನೋಡೋಣ…

ಚೆನ್ನೈ ಸೂಪರ್ ಕಿಂಗ್ಸ್ (CSK): ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಮೊಯಿನ್ ಅಲಿ,  ಶಿವಂ ದುಬೆ, ದೀಪಕ್ ಚಹರ್, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಎನ್ ಜಗದೀಶನ್, ಹರಿ ನಿಶಾಂತ್, ಸುಭ್ರಂಶು ಸೇನಾಪತಿ , ರಾಜವರ್ಧನ್ ಹಂಗರ್ಗೇಕರ್, ಭಗತ್ ವರ್ಮಾ, ಪ್ರಶಾಂತ್ ಸೋಲಂಕಿ, ಕ್ರಿಸ್ ಜೋರ್ಡನ್, ಡ್ವೈನ್ ಪ್ರಿಟೋರಿಯಸ್, ಡೆವೊನ್ ಕಾನ್ವೇ, ಆಡಮ್ ಮಿಲ್ನೆ, ಮಿಚೆಲ್ ಸ್ಯಾಂಟ್ನರ್.

ಮುಂಬೈ ಇಂಡಿಯನ್ಸ್ (MI): ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೆವಿಸ್, ಕೀರಾನ್ ಪೊಲಾರ್ಡ್, ಜಸ್ಪ್ರೀತ್ ಬುಮ್ರಾ, ಮುರುಗನ್ ಅಶ್ವಿನ್, ಬಾಸಿಲ್ ಥಂಪಿ, ಜಯದೇವ್ ಉನದ್ಕತ್, ಮಯಾಂಕ್ ಮಾರ್ಕಂಡೆ, ಸಂಜಯ್ ಯಾದವ್, ರಮಣ್‌ದೀಪ್ ಸಿಂಗ್, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ತಿಲಕ್ ವರ್ಮಾ, ರಾಹುಲ್ ಬುಮ್ರಾ, ಹೃತಿಕ್ ಶೋಕೀನ್ , ಅರ್ಷದ್ ಖಾನ್, ಟೈಮಲ್ ಮಿಲ್ಸ್, ಜೋಫ್ರಾ ಆರ್ಚರ್, ಫ್ಯಾಬಿಯನ್ ಅಲೆನ್, ಡೇನಿಯಲ್ ಸ್ಯಾಮ್ಸ್, ಅನ್ಮೋಲ್ಪ್ರೀತ್ ಸಿಂಗ್, ಟಿಮ್ ಡೇವಿಡ್, ರಿಲೆ ಮೆರೆಡಿತ್.

ಡೆಲ್ಲಿ ಕ್ಯಾಪಿಟಲ್ಸ್ (DC)​: ರಿಷಭ್ ಪಂತ್ (ನಾಯಕ), ಡೇವಿಡ್ ವಾರ್ನರ್, ಪೃಥ್ವಿ ಶಾ, ಮಿಚೆಲ್ ಮಾರ್ಷ್, ಸರ್ಫರಾಜ್ ಖಾನ್, ಕೆಎಸ್ ಭರತ್, ಮನದೀಪ್ ಸಿಂಗ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ, ಕಮಲೇಶ್ ನಾಗರಕೋಟಿ, ಮುಸ್ತಾಫಿಜುರ್ ರೆಹಮಾನ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್, ಅಶ್ವಿನ್ ಹೆಬ್ಬಾರ್, ಅಶ್ವಿನ್ ಹೆಬ್ಬಾರ್ , ಯಶ್ ಧುಲ್, ವಿಕ್ಕಿ ಓಸ್ಟ್ವಾಲ್, ಲುಂಗಿ ಎನ್‌ಗಿಡಿ, ಟಿಮ್ ಸೀಫರ್ಟ್, ಪ್ರವೀಣ್ ದುಬೆ, ರೋವ್‌ಮನ್ ಪೊವೆಲ್, ಲಲಿತ್ ಯಾದವ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಲುವ್ನಿತ್ ಸಿಸೋಡಿಯಾ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.

ಕೋಲ್ಕತ್ತಾ ನೈಟ್ ರೈಡರ್ಸ್ (KKR): ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಶೆಲ್ಡನ್ ಜಾಕ್ಸನ್, ಅಜಿಂಕ್ಯ ರಹಾನೆ, ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮ್ಮಿನ್ಸ್, ಶಿವಂ ಮಾವಿ, ವರುಣ್ ಚಕ್ರವರ್ತಿ, ಸ್ಯಾಮ್ ಬಿಲ್ಲಿಂಗ್ಸ್, ಅನುಕುಲ್ ರಾಯ್, ರಸಿಖ್ ಸಲಾಮ್, ಅಭಿಜಿತ್ ಸಿಂಗ್ , ರಮೇಶ್ ಕುಮಾರ್, ಅಶೋಕ್ ಶರ್ಮಾ, ಟಿಮ್ ಸೌಥಿ, ಆರೋನ್ ಫಿಂಚ್, ಮೊಹಮ್ಮದ್ ನಬಿ, ಉಮೇಶ್ ಯಾದವ್, ಬಿ ಇಂದ್ರಜಿತ್, ಚಾಮಿಕಾ ಕರುಣಾರತ್ನೆ.

ಸನ್ ರೈಸರ್ಸ್ ಹೈದರಾಬಾದ್ (SRH): ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್, ಐಡೆನ್ ಮಾರ್ಕ್ರಾಮ್, ಪ್ರಿಯಮ್ ಗರ್ಗ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಜೆ ಸುಚಿತ್, ಶ್ರೇಯಸ್ ಗೋಪಾಲ್, ಕಾರ್ತಿಕ್ ತ್ಯಾಗಿ, ಟಿ ನಟರಾಜನ್, ಉಮ್ರಾನ್ ಮಲಿಕ್, ಸೌರಭ್ ದುಬೆ, ಸೀನ್ ಅಬಾಟ್, ಆರ್ ಸಮರ್ಥ್, ಜೆ ಸುಚಿತ್, ರೊಮಾರಿಯೋ ಶೆಫರ್ಡ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ.

ಪಂಜಾಬ್ ಕಿಂಗ್ಸ್ (PBKS): ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಪ್ರಭಾಸಿಮ್ರಾನ್ ಸಿಂಗ್, ಒಡಿಯನ್ ಸ್ಮಿತ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಕಗಿಸೊ ರಬಾಡ, ರಾಹುಲ್ ಚಹರ್, ಅರ್ಷ್‌ದೀಪ್ ಸಿಂಗ್, ಇಶಾನ್ ಪೊರೆಲ್, ಸಂದೀಪ್ ಶರ್ಮಾ, ಅಥರ್ವ ಪತ್ರಾ, ವೈಭವ್‌, ರಾಜ್ ಅಂಗದ್ ಬಾವಾ, ಬೆನ್ನಿ ಹೋವೆಲ್, ರಿಷಿ ಧವನ್, ಭಾನುಕಾ ರಾಜಪಕ್ಸೆ, ಬಲ್ತೇಜ್ ಸಿಂಗ್, ರಿತಿಕ್ ಚಟರ್ಜಿ, ನಾಥನ್ ಎಲ್ಲಿಸ್, ಪ್ರೇರಕ್ ಮಂಕಡ್.

ರಾಜಸ್ಥಾನ್ ರಾಯಲ್ಸ್ (RR): ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಆರ್ ಅಶ್ವಿನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಹಾಲ್, ಪ್ರಸಿದ್ಧ್ ಕೃಷ್ಣ, ಕೆಸಿ ಕಾರ್ಯಪ್ಪ, ನವದೀಪ್ ಸೈನಿ, ತೇಜಸ್ ಬರೋಕಾ, ಅನುನಯ್ ಸಿಂಗ್, ಕುಲದೀಪ್ ಸೇನ್, ಧ್ರುವ್ ಜುರೆಲ್, ಕುಲ್ದ್ರುವ್ ಜುರೆಲ್ , ಶುಭಂ ಗರ್ವಾಲ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವಾನ್ ಡೆರ್ ಡುಸ್ಸೆನ್, ಜೇಮ್ಸ್ ನೀಶಮ್, ಡೇರಿಲ್ ಮಿಚೆಲ್, ಕರುಣ್ ನಾಯರ್, ಒಬೆಡ್ ಮೆಕಾಯ್.

ಲಕ್ನೋ ಸೂಪರ್ ಜೈಂಟ್ಸ್ (LSG): ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ಮನೀಶ್ ಪಾಂಡೆ, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಕೆ ಗೌತಮ್, ರವಿ ಬಿಷ್ಣೋಯ್, ಅವೇಶ್ ಖಾನ್, ಆ್ಯಂಡ್ರ್ಯೂ ಟೈ, ದುಷ್ಮಂತ ಚಮೀರಾ, ಅಂಕಿತ್ ರಾಜ್‌ಪೂತ್, ಶಹಬಾಜ್ ನದೀಮ್, ಮನನ್ ವೋಹ್ರಾ, ಮೊಹ್ಸಿನ್ ಬದೋನಿ, ಕರಣ್ ಶರ್ಮಾ, ಮಯಾಂಕ್ ಯಾದವ್, ಕೈಲ್ ಮೇಯರ್ಸ್, ಕೆ ಗೌತಮ್, ಎವಿನ್ ಲೂಯಿಸ್.

ಗುಜರಾತ್ ಟೈಟನ್ಸ್ (GT): ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಹಮಾನುಲ್ಲಾ ಗುರ್ಬಾಜ್, ವೃದ್ಧಿಮಾನ್ ಸಹಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ಡೊಮಿನಿಕ್ ಡ್ರೇಕ್ಸ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಯಶ್ ದಯಾಳ್, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ಗುರುಕೀರತ್ ಸಿಂಗ್, ಬಿ ಸಾಯಿ ಸುದರ್ಶನ್.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

Published On - 2:23 pm, Sat, 26 March 22