AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂದ್ಯದ ವೇಳೆ ಮೊಬೈಲ್ ಬಳಸಿದ್ದ ರೋಮಿ ಭಿಂದರ್​ಗೆ ದಂಡ; ಮೊಬೈಲ್ ಬಳಸಲು ಕಾರಣ ಬಹಿರಂಗ

Romi Bhinder Fined for IPL Dugout Phone Use: ಐಪಿಎಲ್ ಪಂದ್ಯದ ವೇಳೆ ಡಗೌಟ್‌ನಲ್ಲಿ ಮೊಬೈಲ್ ಬಳಸಿದ ರಾಜಸ್ಥಾನ್ ರಾಯಲ್ಸ್ ವ್ಯವಸ್ಥಾಪಕ ರೋಮಿ ಭಿಂದರ್‌ಗೆ ಬಿಸಿಸಿಐ ದಂಡ ವಿಧಿಸಿದೆ. ಆರೋಗ್ಯ ಕಾರಣಗಳಿಗಾಗಿ ಫೋನ್ ಬಳಸಿದರೂ, ಇದು ನಿಯಮ ಉಲ್ಲಂಘನೆಯಾಗಿದೆ. ತನಿಖೆ ನಂತರ ದಂಡ ಮತ್ತು ಎಚ್ಚರಿಕೆ ನೀಡಲಾಗಿದ್ದು, ವೈಭವ್ ಸೂರ್ಯವಂಶಿ ಶಿಕ್ಷೆಯಿಂದ ಪಾರಾಗಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ನೀಡಲಾಗಿದೆ.

ಪಂದ್ಯದ ವೇಳೆ ಮೊಬೈಲ್ ಬಳಸಿದ್ದ ರೋಮಿ ಭಿಂದರ್​ಗೆ ದಂಡ; ಮೊಬೈಲ್ ಬಳಸಲು ಕಾರಣ ಬಹಿರಂಗ
Romi Bhinder
ಪೃಥ್ವಿಶಂಕರ
|

Updated on: Apr 17, 2026 | 5:27 PM

Share

ಐಪಿಎಲ್ (IPL 2026) ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ವ್ಯವಸ್ಥಾಪಕ ರೋಮಿ ಭಿಂದರ್ (Romi Bhinder) ಡಗೌಟ್‌ನಲ್ಲಿ ಕುಳಿತು ಫೋನ್ ಬಳಸಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಬಿಸಿಸಿಐ (BCCI) ಈ ಆರೋಪದ ಬಗ್ಗೆ ತನಿಖೆಗೆ ಆದೇಶ ಹೊರಡಿಸಿತ್ತು. ಇದೀಗ ತನಿಖೆ ಪೂರ್ಣವಾಗಿದ್ದು, ಐಪಿಎಲ್ ನಿಯಮಗಳನ್ನು ಉಲ್ಲಂಘಿಸಿ ಮೊಬೈಲ್ ಬಳಿಸಿದ್ದ ಭಿಂದರ್‌ಗೆ ದಂಡ ವಿಧಿಸಲಾಗಿದೆ. ಇದರ ಜೊತೆಗೆ ಈ ಕೃತ್ಯವನ್ನು ಪುನರಾವರ್ತಿಸದಂತೆ ಎಚ್ಚರಿಕೆ ನೀಡಲಾಗಿದೆ. ಅದೃಷ್ಟವೆಂಬಂತೆ ಭಿಂದರ್‌ ಪಕ್ಕ ಕುಳಿತು ಅವರು ಮೊಬೈಲ್ ಬಳಸುವುದನ್ನು ನೋಡುತ್ತಾ ಕುಳಿತಿದ್ದ 15 ವರ್ಷದ ವೈಭವ್ ಸೂರ್ಯವಂಶಿ ಶಿಕ್ಷೆಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ.

ನಿಯಮ ಉಲ್ಲಂಘಿಸಿದ ರೋಮಿ ಭಿಂದರ್

ಏಪ್ರಿಲ್ 10 ರಂದು ಗುವಾಹಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಸಮಯದಲ್ಲಿ, ರೋಮಿ ಭಿಂದರ್ ಡಗೌಟ್‌ನಲ್ಲಿ ಕುಳಿತು ತಮ್ಮ ಫೋನ್ ಬಳಸುತ್ತಿದ್ದರು. ಐಪಿಎಲ್ ನಿಯಮದ ಪ್ರಕಾರ, ತಂಡದ ಆಟಗಾರರು ಹಾಗೂ ಸದಸ್ಯರಿಗೆ ಡ್ರೆಸ್ಸಿಂಗ್ ಕೋಣೆಗೆ ಫೋನ್‌ಗಳನ್ನು ಕೊಂಡೊಯ್ಯಲು ಅನುಮತಿಸಲಾಗಿದೆ. ಆದರೆ ಡಗೌಟ್‌ನಲ್ಲಿ ಮೊಬೈಲ್​ಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಅದಕ್ಕಾಗಿಯೇ ರೋಮಿ ಭಿಂದರ್ ವಿರುದ್ಧ ತನಿಖೆ ನಡೆಸಬೇಕಾಯಿತು.

IPL 2026: ಐಪಿಎಲ್‌ನಲ್ಲಿ ವಿಶೇಷ ತ್ರಿಶತಕ ಬಾರಿಸುವ ಹೊಸ್ತಿಲಿನಲ್ಲಿ ವಿರಾಟ್ ಕೊಹ್ಲಿ

ರೋಮಿ ಭಿಂದರ್ ಫೋನ್ ಬಳಸಿದ್ದು ಏಕೆ?

ರೋಮಿ ಭಿಂದರ್ ಡಗೌಟ್‌ನಲ್ಲಿ ಫೋನ್ ಬಳಸುವುದಕ್ಕೆ ಬಿಸಿಸಿಐನಿಂದ ವಿನಾಯಿತಿ ಪಡೆದಿದ್ದಾರೆ ಎಂಬುದು ತಿಳಿದುಬಂದಿದೆ. ಇದಕ್ಕೆ ಕಾರಣ ಅವರ ಆರೋಗ್ಯ. ವಾಸ್ತವವಾಗಿ, ಭಿಂದರ್ ಐಪಿಎಲ್‌ಗೆ ಮೊದಲು ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಆರೋಗ್ಯ ಕಾರಣಗಳಿಂದಾಗಿ, ಅವರು ಆಗಾಗ್ಗೆ ತಮ್ಮ ವೈದ್ಯರೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಆದಾಗ್ಯೂ ಭಿಂದರ್ ಫೋನ್ ಬಳಕೆ ಮಾಡಿದ್ದು ಐಪಿಎಲ್ ನಿಯಮಗಳ ಉಲ್ಲಂಘನೆ ಎಂದು ಪರಿಗಣಿಸಲಾಗಿದ್ದು, ಇದರ ಪರಿಣಾಮವಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್