AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ವಿಮಾನದಲ್ಲಿ ನಿಷೇಧಿತ ಇ-ಸಿಗರೇಟ್ ಸೇದಿದ ಯುಜ್ವೇಂದ್ರ ಚಾಹಲ್; ವಿಡಿಯೋ ವೈರಲ್

IPL E-Cigarette Controversy: ರಿಯಾನ್ ಪರಾಗ್ ಇ-ಸಿಗರೇಟ್ ಸೇದಿದ್ದಕ್ಕೆ ದಂಡ ತೆತ್ತ ಬೆನ್ನಲ್ಲೇ, ಯುಜ್ವೇಂದ್ರ ಚಾಹಲ್ ವಿಮಾನದಲ್ಲಿ ಇ-ಸಿಗರೇಟ್ ಸೇದಿ ವಿವಾದಕ್ಕೆ ಸಿಲುಕಿದ್ದಾರೆ. ವಿಮಾನದಲ್ಲಿ ಧೂಮಪಾನ ಕಟ್ಟುನಿಟ್ಟಾಗಿ ನಿಷಿದ್ಧವಾಗಿದ್ದು, ಈ ಕೃತ್ಯದಿಂದ ಚಾಹಲ್‌ಗೆ ಕಾನೂನು ಕ್ರಮ ಮತ್ತು ವಿಮಾನ ಪ್ರಯಾಣ ನಿಷೇಧದ ಭೀತಿ ಎದುರಾಗಿದೆ. ಈ ಘಟನೆ ಐಪಿಎಲ್ ಆಟಗಾರರ ವರ್ತನೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

IPL 2026: ವಿಮಾನದಲ್ಲಿ ನಿಷೇಧಿತ ಇ-ಸಿಗರೇಟ್ ಸೇದಿದ ಯುಜ್ವೇಂದ್ರ ಚಾಹಲ್; ವಿಡಿಯೋ ವೈರಲ್
Yuzvendra Chahal
ಪೃಥ್ವಿಶಂಕರ
|

Updated on:May 07, 2026 | 5:41 PM

Share

ಕೆಲವೇ ದಿನಗಳ ಹಿಂದಷ್ಟೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ (Riyan Parag) ಐಪಿಎಲ್ (IPL 2026) ಪಂದ್ಯದ ವೇಳೆ ತಂಡದ ಡ್ರೆಸ್ಸಿಂಗ್ ರೂಮ್ ಒಳಗೆ ಇ-ಸಿಗರೇಟ್ ಸೇದಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ನ್ಯೂ ಚಂಡೀಗಢದಲ್ಲಿ ನಡೆದಿದ್ದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಪರಾಗ್ ನಿಷೇಧಿತ ಇ- ಸಿಗರೇಟ್ ಸೇದಿ ಸಿಕ್ಕಿಬಿದ್ದಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಬಳಿಕ ಕ್ರಮಕ್ಕೆ ಮುಂದಾಗಿದ್ದ ಬಿಸಿಸಿಐ, ರಿಯಾನ್ ಪರಾಗ್​ಗೆ ಪಂದ್ಯ ಶುಲ್ಕ ಶೇಕಡಾ 25 ರಷ್ಟು ಮೊತ್ತವನ್ನು ದಂಡವಾಗಿ ವಿಧಿಸಿತ್ತು. ಈ ಪ್ರಕರಣ ಮಾಸುವ ಮುನ್ನವೇ ಪಂಜಾಬ್ ಕಿಂಗ್ಸ್ ತಂಡದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ( Yuzvendra Chahal) ಇದೇ ರೀತಿಯ ಕೃತ್ಯ ಎಸಗಿದ್ದು, ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ವಿಮಾನದಲ್ಲಿ ಇ-ಸಿಗರೇಟ್ ಸೇದಿದ ಚಾಹಲ್

ಯುಜ್ವೇಂದ್ರ ಚಾಹಲ್ ವಿಮಾನದಲ್ಲಿ ಇ-ಸಿಗರೇಟ್ ಸೇದುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರವಾಸದ ಸಮಯದಲ್ಲಿ ಈ ವಿಡಿಯೋ ತೆಗೆಯಲಾಗಿದೆ ಎಂದು ಹೇಳಲಾಗುತ್ತಿದೆ. ತಂಡವು ಸ್ವತಃ ಈ ವಿಡಿಯೋವನ್ನು ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ಚಾಹಲ್ ಇ-ಸಿಗರೇಟ್ ಸೇದುತ್ತಿರುವುದು ಕಂಡುಬಂದಿದೆ. ತಂಡಕ್ಕೆ ಘಟನೆಯ ಅರಿವಾದ ತಕ್ಷಣ, ವೀಡಿಯೊವನ್ನು ಸೋಶಿಯಲ್ ಮೀಡಿಯಾದಿಂದ ತೆಗೆದುಹಾಕಲಾಗಿದೆ. ಆದರೆ ಆ ಹೊತ್ತಿಗೆ, ಅನೇಕ ನೆಟ್ಟಿಗರು ಆ ವಿಡಿಯೋವನ್ನು ಡೌನ್‌ಲೋಡ್ ಮಾಡಿಕೊಂಡಿದ್ದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ವಿಮಾನಗಳಲ್ಲಿ ಧೂಮಪಾನ ಮಾಡುವುದು ಅಥವಾ ಇ-ಸಿಗರೇಟ್ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ನಿಯಮಗಳ ಪ್ರಕಾರ, ವಿಮಾನದಲ್ಲಿ ಎಲೆಕ್ಟ್ರಾನಿಕ್ ಸಿಗರೇಟ್‌ಗಳನ್ನು ಕೊಂಡೊಯ್ಯುವುದು ಅಥವಾ ಬಳಸುವುದು ಗಂಭೀರ ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ. ಇದು ಬೆಂಕಿಯ ಅಪಾಯವನ್ನುಂಟುಮಾಡುತ್ತದೆ, ಇದು ಇಡೀ ವಿಮಾನ ಮತ್ತು ಪ್ರಯಾಣಿಕರ ಸುರಕ್ಷತೆಗೆ ಅಪಾಯವನ್ನುಂಟುಮಾಡುತ್ತದೆ. ಹೀಗಾಗಿ ಯಾರಾದರೂ ಈ ಬಗ್ಗೆ ದೂರು ದಾಖಲಿಸಿದರೆ, ಚಾಹಲ್ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ. ಇದರಿಂದಾಗಿ ಚಾಹಲ್​ಗೆ ವಿಮಾನದಲ್ಲಿ ಪ್ರಯಾಣವನ್ನು ನಿಷೇಧಿಸುವ ಸಾಧ್ಯತೆಗಳು ಇವೆ.

IPL 2026: ವೃತ್ತಿಜೀವನಕ್ಕಾಗಿ ಮಹಾ ತ್ಯಾಗ ಮಾಡಿದ ಯುಜ್ವೇಂದ್ರ ಚಾಹಲ್

ಈ ಹಿಂದೆಯೂ ವಿವಾದಕ್ಕೀಡಾಗಿದ್ದ ಚಾಹಲ್​

ಐಪಿಎಲ್ ಆರಂಭಕ್ಕೂ ಮುನ್ನ ಚಾಹಲ್ ಇಂತಹದ್ದೇ ವಿವಾದಕ್ಕೆ ಗುರಿಯಾಗಿದ್ದರು. ವೈರಲ್ ಆದ ವೀಡಿಯೊವೊಂದರಲ್ಲಿ, ಚಾಹಲ್ ತನ್ನ BMW ಕಾರನ್ನು ಚಾಲನೆ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಅರ್ಧ ಸೇದಿದ್ದ ಸಿಗರೇಟನ್ನು ಕಾರಿನಿಂದ ಹೊರಗೆ ಎಸೆದಿದ್ದರು. ಈ ವೀಡಿಯೊ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅನೇಕ ನೆಟ್ಟಿಗರು, ಬೆಂಕಿ ಇರುವ ಸಿಗರೇಟ್ ಇತರರಿಗೆ ಸಮಸ್ಯೆಯನ್ನುಂಟು ಮಾಡಬಹುದು ಎಂಬ ಸಾಮಾನ್ಯ ಅರಿವು ಚಾಹಲ್​ಗೆ ಇಲ್ಲವಾ ಎಂದು ಪ್ರಶ್ನಿಸಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:35 pm, Thu, 7 May 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ