‘ಐಪಿಎಲ್‌ನಲ್ಲಿ ಆಡಿದ ಅನುಭವ ಪ್ರಯೋಜನಕ್ಕೆ ಬಂತು’; ಗಾಯದ ಮೇಲೆ ಉಪ್ಪು ಸುರಿದ ಜೋಸ್ ಬಟ್ಲರ್

T20 World Cup 2022: ನಾವು ಭಾರತದಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ್ದೇವೆ. ಅದು ಭಾರತೀಯ ಕ್ರಿಕೆಟ್ ಅಭಿಮಾನಿಗಳ ಗದ್ದಲವನ್ನು ಅರ್ಥಮಾಡಿಕೊಳ್ಳಲು ನಮಗೆ ಸಹಾಯ ಮಾಡಿತು.

‘ಐಪಿಎಲ್‌ನಲ್ಲಿ ಆಡಿದ ಅನುಭವ ಪ್ರಯೋಜನಕ್ಕೆ ಬಂತು’; ಗಾಯದ ಮೇಲೆ ಉಪ್ಪು ಸುರಿದ ಜೋಸ್ ಬಟ್ಲರ್
Jos Buttler
Follow us
TV9 Web
| Updated By: ಪೃಥ್ವಿಶಂಕರ

Updated on: Nov 11, 2022 | 1:15 PM

2022 ರ ಟಿ20 ವಿಶ್ವಕಪ್​ (T20 World Cup 2022) ಅನ್ನು ಟೀಂ ಇಂಡಿಯಾ ಆರಂಭಿಸಿದ ರೀತಿ ಎಲ್ಲರಲ್ಲೂ ಭರವಸೆ ಮೂಡಿಸಿತ್ತು. ಅದರೆ ಕೇವಲ 18 ದಿನಗಳಲ್ಲಿ, ಈ ಭರವಸೆ ಸಂಪೂರ್ಣವಾಗಿ ನಾಶವಾಗಿದೆ. ನವೆಂಬರ್ 10 ರ ಗುರುವಾರ ಅಡಿಲೇಡ್‌ನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ 10 ವಿಕೆಟ್‌ಗಳಿಂದ ಟೀಮ್ ಇಂಡಿಯಾವನ್ನು ಸೋಲಿಸಿ, ವಿಶ್ವಕಪ್​ನಿಂದ ಹೊರಹಾಕಿದೆ. ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ (Jos Buttler) ಮತ್ತು ಅಲೆಕ್ಸ್ ಹೇಲ್ಸ್ (Alex Hales) ಅವರ ಅಬ್ಬರದ ಬ್ಯಾಟಿಂಗ್ ಇಂಗ್ಲೆಂಡ್‌ಗೆ ಈ ಜಯವನ್ನು ತಂದುಕೊಟ್ಟಿತು. ಫೈನಲ್ ತಲುಪಿದ ತಕ್ಷಣ, ಭಾರತೀಯರ ಸೋಲಿನ ಗಾಯದ ಮೇಲೆ ಉಪ್ಪು ಸುರಿಯುವ ಕೆಲಸ ಮಾಡಿದ ಇಂಗ್ಲೆಂಡ್ ನಾಯಕ ಬಟ್ಲರ್, ನನ್ನ ಈ ಆಟಕ್ಕೆ ಐಪಿಎಲ್ (IPL) ಸಹಾಯ ಮಾಡಿತು ಎಂದಿದ್ದಾರೆ.

ಗುರುವಾರ ಅಡಿಲೇಡ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 168 ರನ್ ಗಳಿಸಲಷ್ಟೇ ಶಕ್ತವಾಯಿತು. ಅದೇ ಪಿಚ್‌ನಲ್ಲಿ ಇಂಗ್ಲೆಂಡ್‌ ಆರಂಭಿಕ ಜೋಡಿ ಬಟ್ಲರ್ ಮತ್ತು ಹೇಲ್ಸ್ ಕೇವಲ 16 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಈ ಗುರಿಯನ್ನು ಸಾಧಿಸಿದರು. ಈ ಇಡೀ ಪಂದ್ಯದಲ್ಲಿ ಭಾರತದ ಬೌಲರ್‌ಗಳಿಗೆ ಆಂಗ್ಲ ಬ್ಯಾಟರ್​ಗಳು ವಿಕೆಟ್ ಪಡೆಯುವ ಯಾವುದೇ ಅವಕಾಶಗಳನ್ನು ನೀಡಲಿಲ್ಲ. ಅಲ್ಲದೆ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳನ್ನು ಯಾವುದೇ ರೀತಿಯ ಒತ್ತಡಕ್ಕೆ ಸಿಲುಕಿಸಲು ಟೀಂ ಇಂಡಿಯಾ ಬೌಲರ್​ಗಳಿಗೆ ಸಾಧ್ಯವಾಗಲಿಲ್ಲ. ಅಡಿಲೇಡ್ ಓವಲ್ ಸ್ಟೇಡಿಯಂನಲ್ಲಿ ಭಾರತೀಯ ಅಭಿಮಾನಿಗಳು ಕೂಡ ತಂಡಕ್ಕೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ.

ಐಪಿಎಲ್‌ನಲ್ಲಿ ಆಡಿದ ಅನುಭವ ಪ್ರಯೋಜನಕ್ಕೆ ಬಂತು

ಏಕಪಕ್ಷೀಯ ರೀತಿಯಲ್ಲಿ ಭಾರತವನ್ನು ಸೋಲಿಸಿದ ನಂತರ ಮಾತನಾಡಿದ ಇಂಗ್ಲೆಂಡ್ ನಾಯಕ ಬಟ್ಲರ್, ಇಂಡಿಯನ್ ಪ್ರೀಮಿಯರ್ ಲೀಗ್‌ನ ಅನುಭವವನ್ನು ಉಲ್ಲೇಖಿಸಿದರು. ಐಪಿಎಲ್‌ನಲ್ಲಿ ಒತ್ತಡದ ಪಂದ್ಯವನ್ನು ಆಡಿದ ಅನುಭವ ಮತ್ತು ಅಭಿಮಾನಿಗಳು ತೋರುವ ಅಪಾರ ಬೆಂಬಲದಿಂದ ಇದು ಸಾಧ್ಯವಾಯಿತು. ನಾವು ಭಾರತದಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ್ದೇವೆ. ಅದು ಭಾರತೀಯ ಕ್ರಿಕೆಟ್ ಅಭಿಮಾನಿಗಳ ಗದ್ದಲವನ್ನು ಅರ್ಥಮಾಡಿಕೊಳ್ಳಲು ನಮಗೆ ಸಹಾಯ ಮಾಡಿತು. ವಿಶೇಷವಾಗಿ ನಿರ್ದಿಷ್ಟ ಆಟಗಾರನು ಮೈದಾನಕ್ಕೆ ಬಂದಾಗ ಅಥವಾ ಅವರು ಬ್ಯಾಟ್ ಮಾಡುವಾಗ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿರುತ್ತದೆ ಎಂಬುದು ನಮಗೆ ಐಪಿಎಲ್​ನಲ್ಲಿ ಅರಿವಿಗೆ ಬಂದಿದೆ ಎಂದು ಬಟ್ಲರ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಟಿ20 ವಿಶ್ವಕಪ್​ನಿಂದ ಔಟ್; ದ್ರಾವಿಡ್​ ಟೀಂಗೆ ವಿಶ್ರಾಂತಿ, ಲಕ್ಷ್ಮಣ್​ಗೆ ಕೋಚಿಂಗ್ ಜವಾಬ್ದಾರಿ

ಬಿಬಿಎಲ್ ಅನುಭವದ ಧಾರೆ ಎರೆದ ಹೇಲ್ಸ್

ಕ್ಯಾಪ್ಟನ್ ಬಟ್ಲರ್ ಸೇರಿದಂತೆ ಪ್ರಸ್ತುತ ಇಂಗ್ಲೆಂಡ್ ತಂಡದ ಹಲವು ಆಟಗಾರರು ಐಪಿಎಲ್‌ನಲ್ಲಿ ದೀರ್ಘಕಾಲದಿಂದ ಆಡುತ್ತಿದ್ದಾರೆ. ಐಪಿಎಲ್ ಮಾತ್ರವಲ್ಲ, ಬಿಗ್ ಬ್ಯಾಷ್ ಲೀಗ್, ಪಾಕಿಸ್ತಾನ್ ಸೂಪರ್ ಲೀಗ್ ಅಥವಾ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡಿದ ಅನುಭವವೂ ಈ ತಂಡದ ಆಟಗಾರರಿಗೆ ನೆರವಾಗಿದೆ. ಅಲೆಕ್ಸ್ ಹೇಲ್ಸ್ ಆಸ್ಟ್ರೇಲಿಯಾದ ಬಿಬಿಎಲ್​ ಲೀಗ್​ನಲ್ಲಿ ನಿರಂತರವಾಗಿ ಆಡುತ್ತಿದ್ದಾರೆ. ಅಲ್ಲದೆ ವಿಶೇಷವಾಗಿ ಕಳೆದ ಕೆಲವು ಸೀಸನ್​ಗಳಲ್ಲಿ ಹೇಲ್ಸ್ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾದ ಪರಿಸ್ಥಿತಿಗಳಲ್ಲಿ ಆಡಿದ ಅದೇ ಅನುಭವವು ಈ ವಿಶ್ವಕಪ್‌ನಲ್ಲಿ ಅವರಿಗೆ ತುಂಬಾ ಸಹಾಯ ಮಾಡಿದೆ. ಹೇಲ್ಸ್ ಭಾರತದ ವಿರುದ್ಧ ಕೇವಲ 47 ಎಸೆತಗಳಲ್ಲಿ 86 ರನ್ ಗಳಿಸಿ ಅಜೇಯರಾಗಿ ಉಳಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು