IPL Final 2021: ಟಾಸ್ ಗೆದ್ದರೆ ಧೋನಿ ಬೌಲಿಂಗ್ ಆಯ್ಕೆ ಮಾಡಲಿದ್ದಾರೆ: ಯಾಕೆ ಗೊತ್ತಾ?

IPL 2021: ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ಇದುವರೆಗೆ 24 ಪಂದ್ಯಗಳನ್ನು ಆಡಿದೆ. ಇದರಲ್ಲಿ ಸಿಎಸ್​ಕೆ ತಂಡ 16 ಬಾರಿ ಗೆದ್ದಿದೆ.

IPL Final 2021: ಟಾಸ್ ಗೆದ್ದರೆ ಧೋನಿ ಬೌಲಿಂಗ್ ಆಯ್ಕೆ ಮಾಡಲಿದ್ದಾರೆ: ಯಾಕೆ ಗೊತ್ತಾ?
ಚೆನ್ನೈ ತಂಡ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 15, 2021 | 3:07 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ (IPL 2021) 14ಗೆ ಇಂದು ತೆರೆ ಬೀಳಲಿದೆ. ಫೈನಲ್ ಹಣಾಹಣಿಯಲ್ಲಿ ಸಿಎಸ್​ಕೆ ಹಾಗೂ ಕೆಕೆಆರ್​ (CSK vs KKR) ಮುಖಾಮುಖಿಯಾಗಲಿದೆ. ಈ ಪಂದ್ಯವು ದುಬೈ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇಲ್ಲಿ ಟಾಸ್ ಗೆದ್ದ ತಂಡವು ಮೊದಲು ಬೌಲಿಂಗ್ ಆಯ್ದುಕೊಳ್ಳಲಿದ್ದಾರೆ. ಏಕೆಂದರೆ ಇದೇ ಮೈದಾನದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಚೇಸ್ ಮಾಡಿ ಗೆದ್ದುಕೊಂಡಿತು. ಹೀಗಾಗಿ ಸಿಎಸ್​ಕೆ ನಾಯಕ ಧೋನಿ ಟಾಸ್ ಗೆದ್ದರೆ ಇಂದು ಕೂಡ ಬೌಲಿಂಗ್ ಆಯ್ದುಕೊಳ್ಳಲಿದ್ದಾರೆ.

ಇನ್ನು ದುಬೈ ಮೈದಾನದಲ್ಲಿ ಆಡಿದ ಕಳೆದ ಎಂಟು ಪಂದ್ಯಗಳಲ್ಲಿ ಚೇಸ್ ಮಾಡಿದ ತಂಡವು ಗೆದ್ದಿದೆ. ಅದರಲ್ಲೂ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ನೀಡಿದ 173 ರನ್​ಗಳ ಬೃಹತ್ ಟಾರ್ಗೆಟ್​ ಅನ್ನು ಸಿಎಸ್​ಕೆ ಅಂತಿಮ ಓವರ್​ನಲ್ಲಿ ಚೇಸ್ ಮಾಡಿ ವಿಜಯ ಸಾಧಿಸಿತ್ತು. ಹೀಗಾಗಿ ಈ ಮೈದಾನದಲ್ಲಿ ಚೇಸ್​ ಮೂಲಕ ಬೃಹತ್ ಗುರಿಯನ್ನು ಬೆನ್ನಟ್ಟಬಹುದು.

ಹಾಗೆಯೇ ಚೆನ್ನೈ ತಂಡವು ಪ್ರತಿ ಬಾರಿಯ ಐಪಿಎಲ್ ಸೀಸನ್​ನಲ್ಲಿ ಯಶಸ್ವಿಯಾಗಿ ಗುರಿಯನ್ನು ಬೆನ್ನಟ್ಟಿದೆ. ಈ ಬಾರಿ ಕೂಡ 6 ಬಾರಿ ಚೇಸಿಂಗ್ ಮಾಡಿ ಗೆಲುವು ಸಾಧಿಸಿದೆ. ಹೀಗಾಗಿ ಫೈನಲ್​ನಲ್ಲೂ ಸಿಎಸ್​ಕೆ ಚೇಸ್ ಮಾಡೋದು ಬಹುತೇಕ ಖಚಿತ.

ಕೆಕೆಆರ್ ವಿರುದ್ಧ ಚೆನ್ನೈ ಮೇಲುಗೈ: ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ಇದುವರೆಗೆ 24 ಪಂದ್ಯಗಳನ್ನು ಆಡಿದೆ. ಇದರಲ್ಲಿ ಸಿಎಸ್​ಕೆ ತಂಡ 16 ಬಾರಿ ಗೆದ್ದಿದೆ. 2019 ರ ಸೀಸನ್​ನಿಂದ ಚೆನ್ನೈ ತಂಡವು ಕೆಕೆಆರ್ ಅನ್ನು ಐದು ಬಾರಿ ಸೋಲಿಸಿದೆ. ಅಂದರೆ ಕಳೆದ 3 ಸೀಸನ್​ನಲ್ಲಿ ಕೋಲ್ಕತ್ತಾ ಒಮ್ಮೆ ಮಾತ್ರ ಸಿಎಸ್​ಕೆ ವಿರುದ್ದ ಗೆದ್ದಿದೆ.

ಆರೆಂಜ್ ಕ್ಯಾಪ್​ ಮೇಲೆ ಗಾಯಕ್ವಾಡ್ ಕಣ್ಣು: ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಓಪನರ್ ರುತುರಾಜ್ ಗಾಯಕ್ವಾಡ್ 15 ಪಂದ್ಯಗಳಲ್ಲಿ 603 ರನ್ ಗಳಿಸಿ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಗಾಯಕ್ವಾಡ್ ಒಂದು ಶತಕ ಮತ್ತು ನಾಲ್ಕು ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಇದಾಗ್ಯೂ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಈ ಸೀಸನ್ ನಲ್ಲಿ ಅತೀ ಹೆಚ್ಚು ರನ್​ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ರಾಹುಲ್ 13 ಪಂದ್ಯಗಳಲ್ಲಿ 626 ರನ್ ಗಳಿಸಿದ್ದಾರೆ. ಹೀಗಾಗಿ ಫೈನಲ್​ನಲ್ಲಿ 24 ರನ್​ಗಳಿಸಿದರೆ ಆರೆಂಜ್ ಕ್ಯಾಪ್ ರುತುರಾಜ್ ಪಾಲಾಗಲಿದೆ.

ಇದನ್ನೂ ಓದಿ: 1985 ರಿಂದ 2021: 25 ಕ್ಕೂ ಹೆಚ್ಚು ಬಾರಿ ಬದಲಾದ ಟೀಮ್ ಇಂಡಿಯಾ ಜೆರ್ಸಿ

(IPL Final 2021: Dhoni’s CSK will have the upper hand in Dubai)

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ