AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ತುರ್ತು ಸಭೆ ನಡೆಸಿದ ಬಿಸಿಸಿಐ; ಐಪಿಎಲ್ ಉಳಿದ ಪಂದ್ಯಗಳು ಮರು ನಿಗದಿ?

IPL 2025 postponement: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ ಐಪಿಎಲ್ 2025ರ ಉಳಿದ ಪಂದ್ಯಗಳ ಭವಿಷ್ಯ ಅನಿಶ್ಚಿತವಾಗಿದೆ. ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ರದ್ದಾದ ನಂತರ, ಬಿಸಿಸಿಐ ತುರ್ತು ಸಭೆ ನಡೆಸಿದೆ. ಶುಕ್ರವಾರ ಐಪಿಎಲ್‌ನ ಉಳಿದ ಪಂದ್ಯಗಳ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ. ಯುದ್ಧದಂತಹ ಪರಿಸ್ಥಿತಿಯಿಂದಾಗಿ ಪಂದ್ಯಾವಳಿಯನ್ನು ಮುಂದೂಡುವ ಅಥವಾ ರದ್ದುಗೊಳಿಸುವ ಸಾಧ್ಯತೆಯಿದೆ.

IPL 2025: ತುರ್ತು ಸಭೆ ನಡೆಸಿದ ಬಿಸಿಸಿಐ; ಐಪಿಎಲ್ ಉಳಿದ ಪಂದ್ಯಗಳು ಮರು ನಿಗದಿ?
Ipl 2025
ಪೃಥ್ವಿಶಂಕರ
|

Updated on:May 08, 2025 | 11:19 PM

Share

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದಂತಹ ಪರಿಸ್ಥಿತಿ ಉದ್ಭವಿಸಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲಿ ನಡೆಯುತ್ತಿರುವ ಐಪಿಎಲ್ 2025 (IPL 2025) ರ ಉಳಿದ ಪಂದ್ಯಗಳನ್ನು ಮರು ನಿಗದಿಪಡಿಸುವ ಬಗ್ಗೆ ಚರ್ಚೆಗಳು ಪ್ರಾರಂಭವಾಗಿವೆ. ಮೇ 8 ರಂದು ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ (PBKS vs DC) ನಡುವಿನ ಪಂದ್ಯ ರದ್ದಾದ ನಂತರ, ಬಿಸಿಸಿಐ (BCCI) ಮತ್ತು ಐಪಿಎಲ್ ಆಡಳಿತ ಮಂಡಳಿಯ ತುರ್ತು ಸಭೆ ನಡೆಸಿದ್ದು ಈ ಬಗ್ಗೆ ಚರ್ಚಿಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ವರದಿಯ ಪ್ರಕಾರ, ಬಿಸಿಸಿಐ ಮೇ 9 ರ ಶುಕ್ರವಾರದಂದು ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ಧರ್ಮಶಾಲಾ ಪಂದ್ಯ ರದ್ದು

ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ವಿರುದ್ಧ ಭಾರತ ಮೇ 6-7ರ ರಾತ್ರಿ ನಡೆಸಿದ ಆಪರೇಷನ್ ಸಿಂಧೂರ್ ನಂತರ ಎರಡೂ ದೇಶಗಳ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ನಂತರ, ಗುರುವಾರ ಸಂಜೆ, ಪಾಕಿಸ್ತಾನ ಕೂಡ ಇದ್ದಕ್ಕಿದ್ದಂತೆ ಭಾರತದ ಮೇಲೆ ಡ್ರೋನ್‌ ಮತ್ತು ಕ್ಷಿಪಣಿ ದಾಳಿ ಮಾಡಿತು, ಆದರೆ ಭಾರತೀಯ ಭದ್ರತಾ ಪಡೆಗಳು ಅವುಗಳನ್ನು ಸಂಪೂರ್ಣವಾಗಿ ವಿಫಲಗೊಳಿಸಿವೆ. ಅಲ್ಲದೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಶುಕ್ರವಾರ ನಿರ್ಧಾರ

ಪಂದ್ಯದ ಸಮಯದಲ್ಲಿ ಹಾಜರಿದ್ದ ಐಪಿಎಲ್ ಅಧ್ಯಕ್ಷ ಅರುಣ್ ಸಿಂಗ್ ಧುಮಾಲ್ ಕ್ರೀಡಾಂಗಣಕ್ಕೆ ಪ್ರವೇಶಿಸಿ ಪ್ರೇಕ್ಷಕರನ್ನು ಮನೆಗೆ ತೆರಳುವಂತೆ ಮನವಿ ಮಾಡಿದರು. ಹೀಗಾಗಿ ಎಲ್ಲಾ ಪ್ರೇಕ್ಷಕರು ಎಚ್‌ಪಿಸಿಎ ಕ್ರೀಡಾಂಗಣದಿಂದ ಹೊರನಡೆದರು. ಇದಾದ ಸ್ವಲ್ಪ ಸಮಯದ ನಂತರ ಬಿಸಿಸಿಐ ಮತ್ತು ಐಪಿಎಲ್ ಆಡಳಿತ ಮಂಡಳಿಯ ಸಭೆ ನಡೆದಿದ್ದು, ಐಪಿಎಲ್‌ನ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಮತ್ತು ಪಂದ್ಯಾವಳಿಯನ್ನು ಮುಂದೆ ನಡೆಸಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆ. ವರದಿಗಳ ಪ್ರಕಾರ, ಈ ವಿಷಯದ ಬಗ್ಗೆ ಶುಕ್ರವಾರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿದುಬಂದಿದೆ.

IPL 2025: ಪ್ರಿಯಾಂಶ್ ಸಿಡಿಲಬ್ಬರದ ಬ್ಯಾಟಿಂಗ್; ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿ

ಐಪಿಎಲ್ 2025 ರಲ್ಲಿ ಒಟ್ಟು 74 ಪಂದ್ಯಗಳು ನಡೆಯಲಿದ್ದು, ಈ ಪೈಕಿ ಇಲ್ಲಿಯವರೆಗೆ 58 ಪಂದ್ಯಗಳು ಪೂರ್ಣಗೊಂಡಿವೆ. ಟೂರ್ನಿಯಲ್ಲಿ ಲೀಗ್ ಹಂತದ ಕೆಲವು ಪಂದ್ಯಗಳು ಮಾತ್ರ ಉಳಿದಿವೆ, ಅದರ ನಂತರ ಫೈನಲ್ ಸೇರಿದಂತೆ 4 ಪ್ಲೇಆಫ್ ಪಂದ್ಯಗಳು ಇನ್ನೂ ನಡೆಯಬೇಕಿದೆ. ಅಂತಹ ಪರಿಸ್ಥಿತಿಯಲ್ಲಿ, ಪಂದ್ಯಾವಳಿಯನ್ನು ಮುಂದೂಡಲಾಗುತ್ತದೆಯೇ ಅಥವಾ ಈ ಸೀಸನ್ ರದ್ದಾಗುತ್ತದೆಯೇ ಎಂದು ಕಾದು ನೋಡಬೇಕಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:16 pm, Thu, 8 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ