IPL ನಲ್ಲಿ ಮಹತ್ವದ ಬದಲಾವಣೆ ತರಲು ಮುಂದಾದ ಬಿಸಿಸಿಐ

IPL 2022: ಐಪಿಎಲ್ 2022 ಮುಗಿದ ಬಳಿಕ ಮುಂದಿನ 5 ವರ್ಷಗಳ (2023-2027) ಪ್ರಸಾರದ ಹಕ್ಕುಗಳಿಗಾಗಿ ಜೂನ್ 12 ರಂದು ಹರಾಜು ಮಾಡಲಾಗುತ್ತದೆ. ಈಗಾಗಲೇ ಸ್ಟಾರ್ ಇಂಡಿಯಾ, ವಯಾಕಾಮ್ 18, ಅಮೆಜಾನ್, ಝೀ, ಡ್ರೀಮ್ XI, ದಕ್ಷಿಣ ಆಫ್ರಿಕಾದ ಸೂಪರ್‌ಸ್ಪೋರ್ಟ್ಸ್ ಚಾನೆಲ್ ಗ್ರೂಪ್ ಮತ್ತು ಯುಕೆಯ ಸ್ಕೈ ಸ್ಪೋರ್ಟ್ಸ್ ಪ್ರಸಾರ ಹಕ್ಕುಗಳನ್ನು ಖರೀದಿಸುವ ರೇಸ್‌ನಲ್ಲಿವೆ.

IPL ನಲ್ಲಿ ಮಹತ್ವದ ಬದಲಾವಣೆ ತರಲು ಮುಂದಾದ ಬಿಸಿಸಿಐ
IPL
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 19, 2022 | 6:09 PM

IPL 2022: ಐಪಿಎಲ್ ಸೀಸನ್ 15 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 66 ಲೀಗ್ ಪಂದ್ಯಗಳು ಮುಗಿದಿದ್ದು, ಇನ್ನು ಕೆಲವೇ ಕೆಲವು ಪಂದ್ಯಗಳು ಮಾತ್ರ ಉಳಿದಿವೆ. ಈ ಪಂದ್ಯಗಳ ಬಳಿಕ ಪ್ಲೇಆಫ್ ಪಂದ್ಯಗಳು ಜರುಗಲಿದೆ. ಇದರೊಂದಿಗೆ ಐಪಿಎಲ್​ನ ಮತ್ತೊಂದು ಸೀಸನ್​ಗೆ ತೆರೆ ಬೀಳಲಿದೆ. ಆದರೆ ಇದಕ್ಕೂ ಮುನ್ನ ಐಪಿಎಲ್​ನ ಮುಂದಿನ ಸೀಸನ್​ನಲ್ಲಿ ಮಹತ್ವದ ಬದಲಾವಣೆ ತರಲು ಬಿಸಿಸಿಐ ಮುಂದಾಗಿದೆ. ಐಪಿಎಲ್ 2023 ಪಂದ್ಯಗಳ ಸಮಯವನ್ನು ಬದಲಾಯಿಸಲು ಬಿಸಿಸಿಐ ನಿರ್ಧರಿಸಿದೆ. ಕಳೆದ ಕೆಲ ಸೀಸನ್​ಗಳಿಂದ ಐಪಿಎಲ್​ ಪಂದ್ಯಗಳು ಸಂಜೆ 3.30 ಮತ್ತು ರಾತ್ರಿ 7.30 ರಿಂದ ಪ್ರಾರಂಭವಾಗುತ್ತಿದ್ದವು. ಆದರೆ ಮುಂದಿನ ಸೀಸನ್​ನಲ್ಲಿ ಅರ್ಧ ಗಂಟೆ ತಡವಾಗಿ ಐಪಿಎಲ್ ಶುರುವಾಗಲಿದೆ.

ಕ್ರಿಕ್‌ಬಜ್ ವರದಿಯ ಪ್ರಕಾರ, ಐಪಿಎಲ್​ 2023 ರಲ್ಲಿ ಡಬಲ್ ಹೆಡರ್ ಪಂದ್ಯ ಸಂಜೆ 4 ಗಂಟೆಗೆ ಪ್ರಾರಂಭವಾಗಲಿದೆ. ಹಾಗೆಯೇ 2ನೇ ಪಂದ್ಯವು ರಾತ್ರಿ 8 ಗಂಟೆಗೆ ಶುರುವಾಗಲಿದೆ. ಅಷ್ಟೇ ಅಲ್ಲದೆ ಡಬಲ್ ಹೆಡರ್ ಪಂದ್ಯಗಳ ಸಂಖ್ಯೆಯನ್ನು ಕಡಿತಗೊಳಿಸುವುದಾಗಿ ಬಿಸಿಸಿಐ ಸ್ಪಷ್ಟಪಡಿಸಿದೆ. ಮುಂದಿನ ಸೀಸನ್​ಗಾಗಿ ಐಪಿಎಲ್ ನೇರ ಪ್ರಸಾರ ಹಕ್ಕಿಗಾಗಿ ಹರಾಜು ನಡೆಯಲಿದ್ದು, ಇದಕ್ಕೂ ಮುನ್ನ ಪ್ರಮುಖ ಕಂಪೆನಿಗಳಿಗೆ ಬಿಸಿಸಿಐ ಈ ಮಾಹಿತಿ ನೀಡಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಐಪಿಎಲ್​ನಲ್ಲಿ ಪಂದ್ಯಗಳು ಸಂಜೆ 4 ಮತ್ತು 8 ಗಂಟೆಗೆ ಆರಂಭವಾಗುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು ಇದೇ ಸಮಯದಲ್ಲಿ ಪಂದ್ಯಗಳು ನಡೆದಿವೆ. ಐಪಿಎಲ್ ಆರಂಭಿಕ ವರ್ಷಗಳಲ್ಲಿ ಪಂದ್ಯಗಳು 4 ಗಂಟೆ ಮತ್ತು 8 ಗಂಟೆಗೆ ಆರಂಭವಾಗುತ್ತಿದ್ದವು. ಸ್ಟಾರ್ ಸ್ಪೋರ್ಟ್ಸ್ ಪ್ರಸಾರದ ಹಕ್ಕನ್ನು ಖರೀದಿಸಿದ ಬಳಿಕ ಸಮಯದಲ್ಲಿ ಬದಲಾವಣೆ ಮಾಡಲಾಯಿತು. ಅಂದರೆ 2018 ರಿಂದ ಐಪಿಎಲ್​ನ ಸಮಯವು 3.30 ಮತ್ತು ರಾತ್ರಿ 7.30 ಆಗಿ ಬದಲಾಯಿತು. ಇದೀಗ ಮತ್ತೆ ಐಪಿಎಲ್​ ಸಮಯದಲ್ಲಿ ಬದಲಾವಣೆ ತರಲು ಬಿಸಿಸಿಐ ಮುಂದಾಗಿದೆ.

ಇದನ್ನೂ ಓದಿ
Image
Virat Kohli: ಕೊಹ್ಲಿ ಕಡೆಯಿಂದ ರಶೀದ್ ಖಾನ್​​ಗೆ ಸ್ಪೆಷಲ್ ಗಿಫ್ಟ್​: ಸೇಫ್ ಆಗಿ ಇಟ್ಟಿರಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ
Image
KL Rahul: ಐಪಿಎಲ್​ನಲ್ಲಿ ರಾಹುಲ್ ಅಬ್ಬರ: ಸತತ 5ನೇ ಬಾರಿ ಕೆಎಲ್ ಕಿಂಗ್
Image
IPL 2022: RCB ಗೆದ್ದರೂ ಡೆಲ್ಲಿ ಕ್ಯಾಪಿಟಲ್ಸ್​ ಚಾನ್ಸ್, ಯಾಕೆ ಗೊತ್ತಾ?
Image
IPL 2022: ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲಿಕ್

ಐಪಿಎಲ್ 2022 ಮುಗಿದ ಬಳಿಕ ಮುಂದಿನ 5 ವರ್ಷಗಳ (2023-2027) ಪ್ರಸಾರದ ಹಕ್ಕುಗಳಿಗಾಗಿ ಜೂನ್ 12 ರಂದು ಹರಾಜು ಮಾಡಲಾಗುತ್ತದೆ. ಈಗಾಗಲೇ ಸ್ಟಾರ್ ಇಂಡಿಯಾ, ವಯಾಕಾಮ್ 18, ಅಮೆಜಾನ್, ಝೀ, ಡ್ರೀಮ್ XI, ದಕ್ಷಿಣ ಆಫ್ರಿಕಾದ ಸೂಪರ್‌ಸ್ಪೋರ್ಟ್ಸ್ ಚಾನೆಲ್ ಗ್ರೂಪ್ ಮತ್ತು ಯುಕೆಯ ಸ್ಕೈ ಸ್ಪೋರ್ಟ್ಸ್ ಪ್ರಸಾರ ಹಕ್ಕುಗಳನ್ನು ಖರೀದಿಸುವ ರೇಸ್‌ನಲ್ಲಿವೆ. ಇದಲ್ಲದೇ ಐಪಿಎಲ್ ಪ್ರಸಾರ ಹಕ್ಕುಗಳನ್ನು ಖರೀದಿಸಲು ಗೂಗಲ್ ಕೂಡ ಆಸಕ್ತಿ ತೋರಿದೆ. ಹೀಗಾಗಿ ಮುಂದಿನ 5 ವರ್ಷಗಳ ಪ್ರಸಾರ ಹಕ್ಕು ಯಾವ ಕಂಪೆನಿಯ ಪಾಲಾಗಲಿದೆ ಕಾದು ನೋಡಬೇಕಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್