IPL 2022 Auction: 10 ಫ್ರಾಂಚೈಸಿ, 590 ಆಟಗಾರರು: ಇಂದಿನಿಂದ ಬಹುನಿರೀಕ್ಷಿತ ಐಪಿಎಲ್ 2022 ಮೆಗಾ ಹರಾಜು

IPL 2022: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಆಯೋಜನೆಯಾಗಿರುವ ಐಪಿಎಲ್ 2022 ಆಕ್ಷನ್​​ಗೆ (IPL 2022 Auction) ಈಗಾಗಲೇ ಬಹುತೇಕ ಎಲ್ಲ ಫ್ರಾಂಚೈಸಿ ಬಂದಿಳಿದಿದೆ. ಮಧ್ಯಾಹ್ನ 12 ಗಂಟೆಗೆ ಹರಾಜು ಪ್ರಕ್ರಿಯೆ ಪ್ರಾರಂಭವಾಗಲಿದ್ದು ಸಂಜೆ 5 ಗಂಟೆ ವರೆಗೂ ನಡೆಯುವ ಸಾಧ್ಯತೆ ಇದೆ.

IPL 2022 Auction: 10 ಫ್ರಾಂಚೈಸಿ, 590 ಆಟಗಾರರು: ಇಂದಿನಿಂದ ಬಹುನಿರೀಕ್ಷಿತ ಐಪಿಎಲ್ 2022 ಮೆಗಾ ಹರಾಜು
IPL 2022 Mega Auction
Follow us
TV9 Web
| Updated By: Vinay Bhat

Updated on: Feb 12, 2022 | 8:31 AM

ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (Indian Pre mier League) 15ನೇ ಆವೃತ್ತಿಯ ಮೆಗಾ ಹರಾಜು ಪ್ರಕ್ರಿಯೆ ಇಂದು ಮತ್ತು ನಾಳೆ ಎರಡು ದಿನಗಳ ಏರ್ಪಡಿಸಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಆಯೋಜನೆಯಾಗಿರುವ ಐಪಿಎಲ್ 2022 ಆಕ್ಷನ್​​ಗೆ (IPL 2022 Auction) ಈಗಾಗಲೇ ಬಹುತೇಕ ಎಲ್ಲ ಫ್ರಾಂಚೈಸಿ ಬಂದಿಳಿದಿದೆ. ಮಧ್ಯಾಹ್ನ 12 ಗಂಟೆಗೆ ಹರಾಜು ಪ್ರಕ್ರಿಯೆ ಪ್ರಾರಂಭವಾಗಲಿದ್ದು ಸಂಜೆ 5 ಗಂಟೆ ವರೆಗೂ ನಡೆಯುವ ಸಾಧ್ಯತೆ ಇದೆ. ಈ ಮೆಗಾ ಹರಾಜಿನಲ್ಲಿ ಒಟ್ಟು 590 ಆಟಗಾರರು ಅದೃಷ್ಟ ಪರೀಕ್ಷೆಗೆ ಇಳಿದಿದ್ದು ಇವರಲ್ಲಿ ಬಲಿಷ್ಠ ತಂಡವನ್ನು ಕಟ್ಟಲು ಎಲ್ಲಾ ಫ್ರಾಂಚೈಸಿಗಳು ಲೆಕ್ಕಾಚಾರವನ್ನು ನಡೆಸುತ್ತಿದೆ. ಎರಡು ದಿನಗಳ ಕಾಲ ಹರಾಜು ಪ್ರಕ್ರಿಯೆ ನಡೆಯಲಿದ್ದು 370 ಭಾರತೀಯರು ಹಾಗೂ 220 ವಿದೇಶಿ ಆಟಗಾರರು ಹರಾಜಿಗಾಗಿ ಎದುರು ನೋಡುತ್ತಿದ್ದಾರೆ. ಈ ಪೈಕಿ ಇಂದು ನಡೆಯುತ್ತಿರುವಂತ ಐಪಿಎಲ್ ಆಟಗಾರರ ಮೆಗಾ ಹರಾಜಿನಲ್ಲಿ (Mega Auction) 97 ಆಟಗಾರರ ಹರಾಜು ನಡೆಯಲಿದ್ದು, ಭಾನುವಾರ ಭೋಜನ ವಿರಾಮಕ್ಕೂ ಮುನ್ನ 98 ರಿಂದ 161ನೇ ಆಟಗಾರರ ಹರಾಜು ನಡೆಯಲಿದೆ ಎನ್ನಲಾಗುತ್ತಿದೆ. ಈ ಬಳಿಕ ಉಳಿದ ಆಟಗಾರರ ಪೈಕಿ ಫ್ರಾಂಚೈಸಿಗಳು ಪಟ್ಟಿ ಮಾಡುವ ಆಟಗಾರರನ್ನಷ್ಟೇ ಹರಾಜು ಹಾಕಲಾಗುತ್ತದೆ.

370 ಭಾರತೀಯ ಮತ್ತು 220 ವಿದೇಶಿ ಸಹಿತ ಒಟ್ಟು 590 ಆಟಗಾರರ ಪೈಕಿ 228 ಮಂದಿ ಅಂತರರಾಷ್ಟ್ರೀಯ ಕ್ರಿಕೆಟ್ ಆಡಿರುವವರಾದರೆ, 355 ದೇಶೀಯ ಆಟಗಾರರು. 7 ಅಸೋಸಿಯೇಟ್ ದೇಶಗಳ ಆಟಗಾರರು. ಈ ಬಾರಿ 10ಕ್ಕೂ ಅಧಿಕ ಕ್ರಿಕೆಟಿಗರಿಗೆ 10 ಕೋಟಿ ರೂ.ಗೂ ಅಧಿಕ ಮೊತ್ತ ಬಿಡ್ ಸಲ್ಲಿಕೆಯಾಗುವ ನಿರೀಕ್ಷೆ ಇದೆ. ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಆಟಗಾರರ ಮೌಲ್ಯ 20 ಕೋಟಿ ರೂ ತಪುಪಿದರೂ ಅಚ್ಚರಿಯಿಲ್ಲ ಎಂದು ಹೇಳಲಾಗುತ್ತಿದೆ.

ಡೇವಿಡ್ ವಾರ್ನರ್, ಶ್ರೇಯಸ್ ಅಯ್ಯರ್, ಶಿಖರ್ ಧವನ್, ಕಗಿಸೊ ರಬಾಡಾ, ಕ್ವಿಂಟನ್ ಡಿಕಾಕ್, ಪ್ಯಾಟ್ ಕಮಿನ್ಸ್, ಮಿಚ್ ಮಾರ್ಶ್, ಇಶಾನ್ ಕಿಶನ್, ಮೊಹಮ್ಮದ್ ಶಮಿ ಮುಂತಾದವರು ಹರಾಜಿನಲ್ಲಿ ಮಿಂಚುವ ಸಾಧ್ಯೆತೆಯಿದೆ. ಇತ್ತೀಚೆಗಷ್ಟೇ ವಿಶ್ವಕಪ್ ಗೆದ್ದ ಭಾರತೀಯ ಅಂಡರ್ 19 ಆಟಗಾರರೂ ಹರಾಜು ಪಟ್ಟಿಯಲ್ಲಿ ಹೆಸರು ನಮೂದಿಸಿದ್ದಾರೆ. ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ಅವರಿಗೆ ಈ ಐಪಿಎಲ್‌ನಲ್ಲಿ ₹ 20 ಲಕ್ಷ ಮೂಲಬೆಲೆ ನಿಗದಿ ಮಾಡಲಾಗಿದೆ. ಆಲ್‌ರೌಂಡರ್ ಅರ್ಜುನ್ ಕೆಲವು ವರ್ಷಗಳ ಕಾಲ ಮುಂಬೈ ಇಂಡಿಯನ್ಸ್ ತಂಡದಲ್ಲಿ ನೆಟ್ ಬೌಲರ್ ಆಗಿ ತರಬೇತಿ ಪಡೆದಿದ್ದಾರೆ. ಹೋದ ಸಲವೂ ಅವರು ಪಟ್ಟಿಯಲ್ಲಿದ್ದರು.

19 ವರ್ಷದೊಳಗಿನವರ ವಿಶ್ವಕಪ್ ಗೆದ್ದು ಬಂದಿರುವ ಭಾರತ ತಂಡದ ನಾಯಕ ಯಶ್ ಧುಳ್ ಮತ್ತು ಸಹ ಆಟಗಾರರಿಗೆ ಈ ಹರಾಜಿನಲ್ಲಿ ಉತ್ತಮ ಮೌಲ್ಯ ಲಭಿಸುವ ನಿರೀಕ್ಷೆ ಇದೆ. ಅದರಲ್ಲೂ ರನ್ ಗಳ ಹೊಳೆ ಹರಿಸಿದ್ದ ಯಶ್‌ ಮೇಲೆ ಫ್ರ್ಯಾಂಚೈಸಿಗಳ ಕಣ್ಣಿದೆ. ಇದೇ ತಂಡದಲ್ಲಿದ್ದ ಕನ್ನಡಿಗ ಅನೀಶ್ವರ್ ಗೌತಮ್ ಕೂಡ ಸ್ಪರ್ಧೆಯಲ್ಲಿದ್ದಾರೆ.

ವಿದೇಶದ ಕೆಲವು ಆಟಗಾರರು ಈ ಬಾರಿಯ ಐಪಿಎಲ್‌ನಿಂದ ಹಿಂದೆ ಸರಿದಿದ್ದಾರೆ. ತಮ್ಮ ದೇಶಗಳ ತಂಡಗಳಿಗೆ ಆಡಲು ಮತ್ತು ಕುಟುಂಬಕ್ಕಾಗಿ ಸಮಯ ಮೀಸಲಿಡಲು ಈ ನಿರ್ಧಾರ ಕೈಗೊಂಡಿದ್ದಾರೆ. ಕ್ರಿಸ್ ಗೇಲ್ (ವಿಂಡೀಸ್), ಜೋ ರೂಟ್, ಬೆನ್ ಸ್ಟೋಕ್ಸ್ (ಇಂಗ್ಲೆಂಡ್), ಕೈಲ್ ಜೆಮಿಸನ್,  (ನ್ಯೂಜಿಲೆಂಡ್), ಸ್ಯಾಮ್ ಕರನ್, ಮಿಚೆಲ್ ಸ್ಟಾರ್ಕ್ ಕಣಕ್ಕಿಳಿಯುತ್ತಿಲ್ಲ.

ಬ್ರಿಟನ್‌ನ ಹ್ಯೂ ಎಡ್‌ಮೀಡ್ಸ್ ಹರಾಜುಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು 2018ರಿಂದಲೂ ಐಪಿಎಲ್ ಹರಾಜು ಪ್ರಕ್ರಿಯೆ ನಡೆಸಿಕೊಡುತ್ತಿದ್ದಾರೆ. ಕಳೆದ 3 ದಶಕಗಳಲ್ಲಿ ವಿಶ್ವದೆಲೆಡೆ 2,500ಕ್ಕೂ ಅಧಿಕ ಹರಾಜು ಪ್ರಕ್ರಿಯೆಗಳನ್ನು ನಡೆಸಿಕೊಟ್ಟ ಅನುಭವ ಅವರಿಗೆ ಇದೆ.

Rohit Sharma: ವೈಟ್​​ವಾಷ್ ಸಾಧನೆ ಗೈದು ಭಾರತ ಪರ ಇತಿಹಾಸ ನಿರ್ಮಿಸಿದ ನಾಯಕ ರೋಹಿತ್ ಶರ್ಮಾ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ