
ಮಾರ್ಚ್ 28 ರಂದು 2026 ರ ಐಪಿಎಲ್ (IPL 2026) ಆರಂಭವಾಗಲಿದ್ದು, 19 ನೇ ಸೀಸನ್ ಆರಂಭವಾಗುವ ಮುನ್ನ ಸನ್‌ರೈಸರ್ಸ್ ಹೈದರಾಬಾದ್ (SRH) ತನ್ನ ಹೊಸ ನಾಯಕನನ್ನು ಘೋಷಿಸಿದೆ. ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ (Ishan Kishan) ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡದ ಚುಕ್ಕಾಣಿ ಹಿಡಿದ 11 ನೇ ನಾಯಕ ಇಶಾನ್ ಕಿಶನ್. ಕೆಲವು ಫ್ರಾಂಚೈಸಿಗಳು ನಾಯಕರನ್ನು ಬದಲಿಸುವುದನ್ನೇ ಕಾಯಕ ಮಾಡಿಕೊಂಡಿವೆ. ಪ್ರತಿ ಸೀಸನ್ಗೂ ಒಬ್ಬೊಬ್ಬರನ್ನು ನಾಯಕನಾಗಿ ನೇಮಿಸಿದ ನಿದರ್ಶನಗಳು ಇವೆ. ಹಾಗಿದ್ದರೆ, 10 ಐಪಿಎಲ್ ಫ್ರಾಂಚೈಸಿಗಳಲ್ಲಿ ಯಾವ ಫ್ರಾಂಚೈಸಿ ತನ್ನ ತಂಡದ ನಾಯಕರನ್ನು ಅಧಿಕ ಬಾರಿ ಬದಲಿಸಿದೆ ಎಂಬುದನ್ನು ನೋಡುವುದಾದರೆ..
ಪಂಜಾಬ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ನಾಯಕರನ್ನು ಬದಲಿಸಿದ ಫ್ರಾಂಚೈಸಿಯಾಗಿದೆ. ಪಂಜಾಬ್ ಕಿಂಗ್ಸ್ ಇದುವರೆಗೆ 17 ನಾಯಕರನ್ನು ನೇಮಿಸಿದೆ. ಯುವರಾಜ್ ಸಿಂಗ್, ಸಂಗಕ್ಕಾರ, ಜಯವರ್ಧನೆ, ಗಿಲ್‌ಕ್ರಿಸ್ಟ್, ಡೇವಿಡ್ ಹಸ್ಸಿ, ಜಾರ್ಜ್ ಬೈಲಿ, ವೀರೇಂದ್ರ ಸೆಹ್ವಾಗ್, ಡೇವಿಡ್ ಮಿಲ್ಲರ್, ಮುರಳಿ ವಿಜಯ್, ಗ್ಲೆನ್ ಮ್ಯಾಕ್ಸ್‌ವೆಲ್, ಆರ್ ಅಶ್ವಿನ್, ಕೆಎಲ್ ರಾಹುಲ್, ಮಾಯಾಂಕ್ ಅಗರ್ವಾಲ್, ಶಿಖರ್ ಧವನ್, ಸ್ಯಾಮ್ ಕರನ್, ಜೀತೇಶ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಪಂಜಾಬ್ ತಂಡದ ನಾಯಕತ್ವ ವಹಿಸಿದ್ದಾರೆ.
ಐಪಿಎಲ್‌ನಲ್ಲಿ ಅತಿ ಹೆಚ್ಚು ನಾಯಕರನ್ನು ಬದಲಿಸಿದ ಎರಡನೇ ತಂಡ ಡೆಲ್ಲಿ ಕ್ಯಾಪಿಟಲ್ಸ್, ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ದಿನೇಶ್ ಕಾರ್ತಿಕ್, ಜೇಮ್ಸ್ ಹೋಪ್ಸ್, ಜಯವರ್ಧನೆ, ವಾರ್ನರ್, ಕೆವಿನ್ ಪೀಟರ್ಸನ್, ಜೆಪಿ ಡುಮಿನಿ, ಜಹೀರ್ ಖಾನ್, ಕರುಣ್ ನಾಯರ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಡು ಪ್ಲೆಸಿಸ್ ಮತ್ತು ಅಕ್ಷರ್ ಪಟೇಲ್ ಈ ತಂಡವನ್ನು ನಾಯಕರಾಗಿ ಮುನ್ನಡೆಸಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ಐಪಿಎಲ್‌ನಲ್ಲಿ 11 ನಾಯಕರನ್ನು ಬದಲಿಸಿದೆ. ಇವರಲ್ಲಿ ಸಂಗಕ್ಕಾರ, ಕ್ಯಾಮರೂನ್ ವೈಟ್, ಶಿಖರ್ ಧವನ್, ಡ್ಯಾರೆನ್ ಸ್ಯಾಮಿ, ಡೇವಿಡ್ ವಾರ್ನರ್, ಕೇನ್ ವಿಲಿಯಮ್ಸನ್, ಭುವನೇಶ್ವರ್ ಕುಮಾರ್, ಮನೀಶ್ ಪಾಂಡೆ, ಮಾರ್ಕ್ರಾಮ್, ಕಮ್ಮಿನ್ಸ್ ಮತ್ತು ಇಶಾನ್ ಕಿಶನ್ ಸೇರಿದ್ದಾರೆ.
ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಲಾ ಒಂಬತ್ತು ನಾಯಕರನ್ನು ನೇಮಿಸಿವೆ. ಆರ್‌ಸಿಬಿ ರಾಹುಲ್ ದ್ರಾವಿಡ್, ಕೆವಿನ್ ಪೀಟರ್ಸನ್, ಅನಿಲ್ ಕುಂಬ್ಳೆ, ಡೇನಿಯಲ್ ವೆಟ್ಟೋರಿ, ವಿರಾಟ್ ಕೊಹ್ಲಿ, ಶೇನ್ ವ್ಯಾಟ್ಸನ್, ಡು ಪ್ಲೆಸಿಸ್, ರಜತ್ ಪಟಿದಾರ್ ಮತ್ತು ಜಿತೇಶ್ ಶರ್ಮಾ ಅವರನ್ನು ನಾಯಕರನ್ನಾಗಿ ನೇಮಿಸಿದೆ. ಮುಂಬೈ ಇಂಡಿಯನ್ಸ್ ಸಚಿನ್ ತೆಂಡೂಲ್ಕರ್, ಹರ್ಭಜನ್ ಸಿಂಗ್, ಶಾನ್ ಪೊಲಾಕ್, ಡ್ವೇನ್ ಬ್ರಾವೋ, ರಿಕಿ ಪಾಂಟಿಂಗ್, ರೋಹಿತ್ ಶರ್ಮಾ, ಕೀರನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ನೇಮಿಸಿದೆ.
ಐಪಿಎಲ್ ಇತಿಹಾಸದಲ್ಲಿ ಒಂದೇ ಒಂದು ಸಿಕ್ಸ್ ಹೊಡೆಯದ ಐವರು ಆಟಗಾರರಿವರು
ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಸೌರವ್ ಗಂಗೂಲಿ, ಮೆಕಲಮ್, ಗಂಭೀರ್, ದಿನೇಶ್ ಕಾರ್ತಿಕ್, ಇಯೋನ್ ಮಾರ್ಗನ್, ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ಅಜಿಂಕ್ಯ ರಹಾನೆ ಸೇರಿದಂತೆ 8 ಆಟಗಾರರನ್ನು ನಾಯಕರನ್ನಾಗಿ ನೇಮಿಸಿದೆ. ರಾಜಸ್ಥಾನ ರಾಯಲ್ಸ್ ತಂಡವು ಶೇನ್ ವಾರ್ನ್, ಶೇನ್ ವ್ಯಾಟ್ಸನ್, ದ್ರಾವಿಡ್, ಸ್ಟೀವ್ ಸ್ಮಿತ್, ಅಜಿಂಕ್ಯ ರಹಾನೆ, ಸಂಜು ಸ್ಯಾಮ್ಸನ್ ಮತ್ತು ರಿಯಾನ್ ಪರಾಗ್ ಸೇರಿದಂತೆ 7 ಆಟಗಾರರನ್ನು ನಾಯಕರನ್ನಾಗಿ ನೇಮಿಸಿದೆ.
ಚೆನ್ನೈ ಮತ್ತು ಲಕ್ನೋ ತಲಾ 4 ನಾಯಕರನ್ನು ನೇಮಿಸಿವೆ. ಧೋನಿ, ರೈನಾ, ಜಡೇಜಾ ಮತ್ತು ಗೈಕ್ವಾಡ್ ಚೆನ್ನೈ ತಂಡವನ್ನು ಮುನ್ನಡೆಸಿದ್ದಾರೆ. ಕೆಎಲ್ ರಾಹುಲ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ ಮತ್ತು ಪಂತ್ ಲಕ್ನೋ ತಂಡವನ್ನು ನಾಯಕರಾಗಿ ಮುನ್ನಡೆಸಿದ್ದಾರೆ. ಹಾರ್ದಿಕ್ ಪಾಂಡ್ಯ, ರಶೀದ್ ಖಾನ್ ಮತ್ತು ಶುಭಮನ್ ಗಿಲ್ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿ ಕೆಲಸ ಮಾಡಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:38 pm, Wed, 18 March 26