AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಕ್ ಆದ IPL ಪ್ಲ್ಯಾನ್: ಕೊಹ್ಲಿ ವಿಕೆಟ್ ಪಡೆದ RCB ವೇಗಿ!

ವೆಲ್ಲಿಂಗ್ಟನ್​ನ ಹೆನ್ರಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಝಿಲೆಂಡ್​ ನಡುವಣ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ ಟೀಮ್ ಇಂಡಿಯಾ ಬೌಲರ್​ಗಳ ನಿಖರ ದಾಳಿಗೆ ತತ್ತರಿಸಿ 41 ಓವರ್​ಗಳಲ್ಲಿ ಕೇವಲ 134 ರನ್ ಗಳಿಸಿ ಆಲೌಟ್ ಆಯಿತು.

ವರ್ಕ್ ಆದ IPL ಪ್ಲ್ಯಾನ್: ಕೊಹ್ಲಿ ವಿಕೆಟ್ ಪಡೆದ RCB ವೇಗಿ!
Virat Kohli - Jacob DuffyImage Credit source: x.com
ಝಾಹಿರ್ ಯೂಸುಫ್
|

Updated on: Nov 07, 2026 | 1:09 PM

Share

ಮೊದಲ ಪಂದ್ಯದಲ್ಲಿ ನ್ಯೂಝಿಲೆಂಡ್​ ಬೌಲರ್‌ಗಳ ನೆಮ್ಮದಿ ಕೆಡಿಸಿದ್ದ ‘ಕಿಂಗ್ ಕೊಹ್ಲಿ’ ಆಟಕ್ಕೆ ಬ್ರೇಕ್ ಹಾಕುವಲ್ಲಿ ಕಿವೀಸ್ ವೇಗಿ ಜೇಕಬ್ ಡಫಿ ಕೊನೆಗೂ ಯಶಸ್ವಿಯಾಗಿದ್ದಾರೆ. ಐಪಿಎಲ್‌ನಲ್ಲಿ ಜೊತೆಯಾಗಿ ಆಡಿದ ಅನುಭವವಿದ್ದರೂ, ಮೊದಲ ಮ್ಯಾಚ್‌ನಲ್ಲಿ ಕೊಹ್ಲಿ ಬ್ಯಾಟಿಂಗ್ ತಮಗೆ ತೀವ್ರ ‘ಕಿರಿಕಿರಿ’ ತಂದಿತ್ತು ಮತ್ತು ತಮ್ಮ ಯಾವುದೇ ಐಪಿಎಲ್ ಪ್ಲ್ಯಾನ್‌ಗಳು ವರ್ಕ್ ಆಗಿರಲಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದ ಡಫಿ, ಇಂದಿನ ಎರಡನೇ ಏಕದಿನ ಪಂದ್ಯದಲ್ಲಿ ಕೇವಲ 7 ರನ್‌ಗಳಿಗೆ ಕೊಹ್ಲಿ ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಕೊಹ್ಲಿ ಬ್ಯಾಟಿಂಗ್ ‘ಕಿರಿಕಿರಿ’ ಎಂದಿದ್ದ ಡಫಿ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ವಿರಾಟ್ ಕೊಹ್ಲಿ ಅವರೊಂದಿಗೆ ಡ್ರೆಸ್ಸಿಂಗ್ ರೂಮ್ ಹಂಚಿಕೊಂಡಿದ್ದ ಜೇಕಬ್ ಡಫಿಗೆ, ಕೊಹ್ಲಿ ಅವರ ಬ್ಯಾಟಿಂಗ್ ಶೈಲಿ ಮತ್ತು ನೆಟ್ಸ್ ಪ್ರಾಕ್ಟೀಸ್ ರಹಸ್ಯಗಳು ಚೆನ್ನಾಗಿಯೇ ಗೊತ್ತಿದ್ದವು. ಆದರೆ ಬುಧವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ ಕೇವಲ 51 ಎಸೆತಗಳಲ್ಲಿ 74 ರನ್ ಸಿಡಿಸಿ ನ್ಯೂಝಿಲೆಂಡ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ್ದರು.

ಆ ಪಂದ್ಯದ ಬಳಿಕ ಮಾತನಾಡಿದ್ದ ಜೇಕಬ್ ಡಫಿ, “ಐಪಿಎಲ್‌ನಲ್ಲಿ ಕೊಹ್ಲಿ ಜೊತೆ ನೆಟ್ಸ್‌ನಲ್ಲಿ ಬೌಲಿಂಗ್ ಮಾಡಿದ ಅನುಭವದ ಆಧಾರದ ಮೇಲೆ ಕೆಲವು ಪ್ಲ್ಯಾನ್‌ಗಳನ್ನು ಮಾಡಿಕೊಂಡಿದ್ದೆ. ಆದರೆ ನನ್ನ ಯಾವುದೇ ಐಪಿಎಲ್ ಪ್ಲ್ಯಾನ್ ವರ್ಕ್ ಆಗಲಿಲ್ಲ. ಅವರು ಕ್ರೀಸ್‌ಗೆ ಬಂದು ಅಷ್ಟು ವೇಗವಾಗಿ ರನ್ ಗಳಿಸಲು ಆರಂಭಿಸಿದರೆ ಬೌಲರ್‌ಗಳಿಗೆ ತುಂಬಾ ‘ಕಿರಿಕಿರಿ’  ಎನಿಸುತ್ತದೆ. ಅವರ ಬ್ಯಾಟಿಂಗ್‌ನಲ್ಲಿ ತಪ್ಪುಗಳನ್ನು ಹುಡುಕುವುದು ಅಸಾಧ್ಯ” ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದರು.

ವೆಲ್ಲಿಂಗ್ಟನ್‌ನಲ್ಲಿ ವರ್ಕ್ ಆದ ಪ್ಲ್ಯಾನ್:

ಮೊದಲ ಪಂದ್ಯದಲ್ಲಿ ವಿಕೆಟ್ ಸಿಗದೆ ನಿರಾಸೆ ಅನುಭವಿಸಿದ್ದ ಜೇಕಬ್ ಡಫಿ, ಎರಡನೇ ಏಕದಿನ ಪಂದ್ಯದಲ್ಲಿ ಸರಿಯಾದ ಹೋಮ್‌ವರ್ಕ್‌ನೊಂದಿಗೆ ಕಣಕ್ಕಿಳಿದಿದ್ದರು. ಅದಕ್ಕೆ ತಕ್ಕಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾದ ಆರಂಭಿಕ ಬ್ಯಾಟರ್ ಶುಭ್​ಮನ್ ಗಿಲ್ (0) ಅವರನ್ನು ಮೊದಲ ಎಸೆತದಲ್ಲೇ ಶೂನ್ಯಕ್ಕೆ ಔಟ್ ಮಾಡಿದ ಡಫಿ, ಆ ಬಳಿಕ ವಿರಾಟ್ ಕೊಹ್ಲಿಯನ್ನು ಟಾರ್ಗೆಟ್ ಮಾಡಿದ್ದರು.

ಈ ಪ್ಲ್ಯಾನ್‌ನಂತೆಯೇ ದಾಳಿ ಮುಂದುವರಿಸಿದ ಜೇಕಬ್ ಡಫಿ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾದ ವಿರಾಟ್ ಕೊಹ್ಲಿ (7), ಫ್ರಂಟ್ ಫೀಲ್ಡರ್‌ಗೆ ಸುಲಭ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಮೊದಲ ಪಂದ್ಯದಲ್ಲಿ ತಮಗೆ ತಲೆನೋವಾಗಿದ್ದ ಬ್ಯಾಟರ್‌ಗಳನ್ನು ಆರಂಭದಲ್ಲೇ ಪೆವಿಲಿಯನ್‌ಗೆ ಅಟ್ಟುವಲ್ಲಿ ಡಫಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: CSK ಎಡವಟ್ಟು…? ಬ್ಯಾಟಿಂಗ್ ಜೋಶ್.. ಬೌಲಿಂಗ್ ಖಾಲಿ ಬಾಕ್ಸ್!

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಝಿಲೆಂಡ್ ತಂಡ, ಭಾರತೀಯ ಬೌಲರ್‌ಗಳ ನಿಖರ ದಾಳಿಗೆ ತತ್ತರಿಸಿ 41 ಓವರ್‌ಗಳಲ್ಲಿ ಕೇವಲ 134 ರನ್‌ಗಳಿಗೆ ಆಲೌಟ್ ಆಯಿತು. ಮಳೆ ಹಾಗೂ ಮೈದಾನದ ಸಮಸ್ಯೆಯಿಂದಾಗಿ ಪಂದ್ಯವನ್ನು ನಿಗದಿತ 47 ಓವರ್‌ಗಳಿಗೆ ಸೀಮಿತಗೊಳಿಸಲಾಗಿದ್ದು, ಟೀಮ್ ಇಂಡಿಯಾ ಗೆಲುವಿಗೆ 135 ರನ್‌ಗಳ ಸುಲಭ ಗುರಿ ಪಡೆದಿದೆ. ಈ ಸಾಧಾರಣ ಮೊತ್ತವನ್ನು ಬೆನ್ನಟ್ಟುತ್ತಿರುವ ಭಾರತ, 2 ವಿಕೆಟ್ ಕಳೆದುಕೊಂಡು ಬ್ಯಾಟಿಂಗ್ ಮುಂದುವರಿಸಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕೃಷ್ಣ ಭೈರೇಗೌಡ ಎದುರೇ ಕಾಂಗ್ರೆಸ್ ಮಾಜಿ MLC, ಬಿಜೆಪಿ MLA ​ಹೈಡ್ರಾಮಾ!
ಕೃಷ್ಣ ಭೈರೇಗೌಡ ಎದುರೇ ಕಾಂಗ್ರೆಸ್ ಮಾಜಿ MLC, ಬಿಜೆಪಿ MLA ​ಹೈಡ್ರಾಮಾ!
ಏರ್​ಪೋರ್ಟ್ ಪ್ರಯಾಣಿಕರಿಗೆ ಇಂದಿನಿಂದ ತಟ್ಟಲಿದೆ ಟ್ರಾಫಿಕ್ ಬಿಸಿ
ಏರ್​ಪೋರ್ಟ್ ಪ್ರಯಾಣಿಕರಿಗೆ ಇಂದಿನಿಂದ ತಟ್ಟಲಿದೆ ಟ್ರಾಫಿಕ್ ಬಿಸಿ
ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್
ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ