IPL 2021 Teams Points Table: ಟೂರ್ನಿಯಿಂದ ಹೊರಬಿದ್ದ ಹೈದರಾಬಾದ್, ಪ್ಲೇ ಆಫ್​ಗೆ ಡೆಲ್ಲಿ: ಪಾಯಿಂಟ್ ಟೇಬಲ್​ನಲ್ಲಾಗಿದೆ ಬದಲಾವಣೆ

ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈವರೆಗೆ ಒಟ್ಟು 9 ಪಂದ್ಯಗಳನ್ನು ಆಡಿದ್ದು ಏಳರಲ್ಲಿ ಗೆಲುವು ಕಂಡಿದೆ. ಕೇವಲ ಎರಡು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 14 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +1.185 ನೆಟ್​ರೇಟ್​ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಚೆನ್ನೈ ಇನ್ನೊಂದು ಪಂದ್ಯ ಗೆದ್ದರೆ ದಾಖಲೆಯ 11ನೇ ಬಾರಿ ಪ್ಲೇ ಆಫ್ ಪ್ರವೇಶಿಸಿದ ಸಾಧನೆ ಮಾಡಲಿದೆ.

IPL 2021 Teams Points Table: ಟೂರ್ನಿಯಿಂದ ಹೊರಬಿದ್ದ ಹೈದರಾಬಾದ್, ಪ್ಲೇ ಆಫ್​ಗೆ ಡೆಲ್ಲಿ: ಪಾಯಿಂಟ್ ಟೇಬಲ್​ನಲ್ಲಾಗಿದೆ ಬದಲಾವಣೆ
IPL 2021 Point Table
Follow us
TV9 Web
| Updated By: Vinay Bhat

Updated on:Sep 26, 2021 | 8:46 AM

ಭಾರತದಲ್ಲಿ ಅರ್ಧಕ್ಕೆ ನಿಂತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ 2021 (IPL 2021) ಟೂರ್ನಿ ಯುಎಇನಲ್ಲಿ ಮುಂದುವರೆಯುತ್ತಿದ್ದು ರೋಚಕ ಘಟ್ಟದತ್ತ ತಲುಪುತ್ತಿದೆ. ಈಗಾಗಲೇ ಕೇನ್ ವಿಲಿಯಮ್ಸನ್ ನಾಯಕತ್ವದ ಸನ್​ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ಟೂರ್ನಿಯಿಂದ ಹೊರಬಿದ್ದಿದೆ. ರಿಷಭ್ ಪಂತ್ (Rishabh Pant) ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ ಪ್ಲೇ ಆಫ್ ಪ್ರವೇಶಿಸಿದೆ. ಇದು ಖಚಿತವಾಗಿದ್ದು ಅಧಿಕೃತವಾಗಬೇಕಷ್ಟೆ. ಹೈದರಾಬಾದ್ ತಂಡ ಶನಿವಾರದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ಸೋತು ಟೂರ್ನಿಯಲ್ಲಿ 8ನೇ ಸೋಲನುಭವಿಸಿತು. ಇತ್ತ ಡೆಲ್ಲಿ ತಂಡ ರಾಜಸ್ಥಾನ್ (Rajasthan Royals) ವಿರುದ್ಧ ಗೆದ್ದು 8ನೇ ಗೆಲುವು ತನ್ನದಾಗಿಸಿತು. ಸದ್ಯ ಪಾಯಿಂಟ್ ಟೇಬಲ್​ನಲ್ಲಿ (IPL 2021 Points Table) ಸಾಕಷ್ಟು ಬದಲಾವಣೆಗಳಾಗಿವೆ.

ಸದ್ಯ ಪಾಯಿಂಟ್ ಟೇಬಲ್ ಅನ್ನು ನೋಡಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು ಎಂಟರಲ್ಲಿ ಗೆಲುವು ಕಂಡಿದೆ. ಕೇವಲ ಎರಡು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 16 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.711 ನೆಟ್​ರೇಟ್​ನೊಂದಿಗೆ ಮೊದಲ ಸ್ಥಾನದಲ್ಲಿದೆ.

ಎಂ. ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈವರೆಗೆ ಒಟ್ಟು 9 ಪಂದ್ಯಗಳನ್ನು ಆಡಿದ್ದು ಏಳರಲ್ಲಿ ಗೆಲುವು ಕಂಡಿದೆ. ಕೇವಲ ಎರಡು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 14 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +1.185 ನೆಟ್​ರೇಟ್​ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಚೆನ್ನೈ ಇನ್ನೊಂದು ಪಂದ್ಯ ಗೆದ್ದರೆ ದಾಖಲೆಯ 11ನೇ ಬಾರಿ ಪ್ಲೇ ಆಫ್ ಪ್ರವೇಶಿಸಿದ ಸಾಧನೆ ಮಾಡಲಿದೆ.

ಐಪಿಎಲ್ ಎರಡನೇ ಚರಣವನ್ನು ಕೆಟ್ಟದಾಗಿ ಪ್ರಾರಂಭಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ ಒಟ್ಟು 9 ಪಂದ್ಯಗಳನ್ನು ಆಡಿದ್ದು ಐದರಲ್ಲಿ ಗೆಲುವು ಕಂಡಿದೆ. ನಾಲ್ಕರಲ್ಲಿ ಸೋತಿದೆ. ಒಟ್ಟು 10 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.720 ನೆಟ್​ರೇಟ್​ನೊಂದಿಗೆ ಮೂರನೇ ಸ್ಥಾನದಲ್ಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಒಟ್ಟು 9 ಪಂದ್ಯಗಳನ್ನು ಆಡಿದ್ದು ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಐದು ಪಂದ್ಯಗಳಲ್ಲಿ ಸೋತಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.363 ನೆಟ್​ರೇಟ್​ನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಇನ್ನೂ ಕೆ. ಎಲ್ ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಪ್ಲೇ ಆಫ್​ಗೆ ಲಗ್ಗೆಯಿಡಲು ಹರಸಾಹಸ ಪಡುತ್ತಿದೆ. ಈವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು ಕೇವಲ 4 ಪಂದ್ಯಗಳನ್ನಷ್ಟೆ ಗೆದ್ದಿದೆ. ಆರು ಪಂದ್ಯಗಳಲ್ಲಿ ಸೋಲುಂಡಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.271 ನೆಟ್​ರೇಟ್​ನೊಂದಿಗೆ ಐದನೇ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್ ತಂಡದ ಪ್ಲೇ ಆಫ್ ಹಾದಿ ತುಂಬಾನೇ ಕಠಿಣವಾಗಿದೆ. ಒಟ್ಟು 9 ಪಂದ್ಯಗಳನ್ನು ಆಡಿದ್ದು ಸೋಲನ್ನು ಹೆಚ್ಚು ಕಂಡಿದೆ. ಕೇವಲ ನಾಲ್ಕರಲ್ಲಿ ಗೆಲುವು ಸಾಧಿಸಿದ್ದು, 5 ಪಂದ್ಯಗಳಲ್ಲಿ ಸೋತಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.310 ನೆಟ್​ರೇಟ್​ನೊಂದಿಗೆ ಆರನೇ ಸ್ಥಾನದಲ್ಲಿದೆ.

ರಾಜಸ್ಥಾನ್ ರಾಯಲ್ಸ್ ತಂಡ ಈವರೆಗೆ ಒಟ್ಟು 9 ಪಂದ್ಯಗಳನ್ನು ಆಡಿದ್ದು ಮುಂಬೈ ರೀತಿಯಲ್ಲೇ ಇದೆ. ನಾಲ್ಕರಲ್ಲಿ ಗೆಲುವು ಕಂಡರೆ ಐದರಲ್ಲಿ ಸೋತಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.319 ನೆಟ್​ರೇಟ್​ನೊಂದಿಗೆ ಏಳನೇ ಸ್ಥಾನದಲ್ಲಿದೆ.

ಸನ್​ರೈಸರ್ಸ್ ಹೈದಬಾದ್ ತಂಡ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ಆಡಿದ ಒಂಬತ್ತು ಪಂದ್ಯಗಳಲ್ಲಿ ಕೇವಲ ಒಂದರಲ್ಲಷ್ಟೆ ಗೆದ್ದಿದೆ. ಎಂಟು ಪಂದ್ಯಗಳಲ್ಲಿ ಸೋಲುಂಡಿದೆ. ಪಾಯಿಂಟ್ ಪಟ್ಟಿಯಲ್ಲಿ -0.637 ನೆಟ್​ರೇಟ್​ನೊಂದಿಗೆ ಕೊನೇಯ ಎಂಟನೇ ಸ್ಥಾನದಲ್ಲಿದೆ.

IPL 2021, RCB vs MI: ಆರ್​ಸಿಬಿ-ಮುಂಬೈ ನಡುವೆ ಹೈವೋಲ್ಟೇಜ್ ಪಂದ್ಯ: ಗೆಲುವಿನ ಲಯಕ್ಕೆ ಮರಳಲು ಹರಸಾಹಸ

IPL 2021, CSK vs KKR: ಪ್ಲೇ ಆಫ್ ಸನಿಹದಲ್ಲಿರುವ ಸಿಎಸ್​ಕೆಗೆ ಕೋಲ್ಕತ್ತಾ ಸವಾಲು: ಸೂಪರ್ ಸಂಡೇ ಪಂದ್ಯದಲ್ಲಿ ಯಾರಿಗೆ ಗೆಲುವು?

(SRH crash out Delhi Capitals near to playoffs Here are the the IPL 2021 Points Table)

Published On - 8:44 am, Sun, 26 September 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ