AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs DC: 6,6,6,6,6,6,6,6,6..! ಡೆಲ್ಲಿ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಅಭಿಷೇಕ್ ಶರ್ಮಾ

Abhishek Sharma's Blazing 47-Ball Century: ಐಪಿಎಲ್ 2026 ರ 31ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಅಭಿಷೇಕ್ ಶರ್ಮಾ ಕೇವಲ 47 ಎಸೆತಗಳಲ್ಲಿ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಬೌಲಿಂಗ್ ಸ್ನೇಹಿ ಪಿಚ್‌ನಲ್ಲಿ, ನಿಧಾನಗತಿಯ ಆರಂಭದ ನಂತರ ಗೇರ್ ಬದಲಾಯಿಸಿ, ಈ ಆವೃತ್ತಿಯ ಮೊದಲ ಶತಕವನ್ನು ದಾಖಲಿಸಿದರು. ಇದು ಅವರ 9ನೇ ಟಿ20 ಶತಕವಾಗಿದೆ.

SRH vs DC: 6,6,6,6,6,6,6,6,6..! ಡೆಲ್ಲಿ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಅಭಿಷೇಕ್ ಶರ್ಮಾ
Abhishek
ಪೃಥ್ವಿಶಂಕರ
|

Updated on:Apr 21, 2026 | 8:56 PM

Share

ಐಪಿಎಲ್ 2026 (IPL 2026) ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ (SRH vs DC) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಪರ ಆರಂಭಿಕ ಅಭಿಷೇಕ್ ಶರ್ಮಾ (Abhishek Sharma) ಈ ಆವೃತ್ತಿಯಲ್ಲಿ ತಮ್ಮ ಮೊದಲ ಶತಕ ಬಾರಿಸಿ ಮಿಂಚಿದ್ದಾರೆ. ಬೌಲಿಂಗ್ ಸ್ನೇಹಿ ಪಿಚ್​ನಲ್ಲಿ ನಿಧಾನಗತಿಯ ಆರಂಭ ಪಡೆದುಕೊಂಡ ಅಭಿಷೇಕ್ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅದಾದ ಬಳಿಕ ತಮ್ಮ ಬ್ಯಾಟಿಂಗ್‌ ಗೇರ್ ಬದಲಿಸಿದ ಅಭಿಷೇಕ್ ಡೆಲ್ಲಿ ಬೌಲರ್​ಗಳ ವಿರುದ್ಧ ಬೌಂಡರಿಗಳ ಮಳೆಗರೆದು ಕೇವಲ 47 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ಇದು ಟಿ20 ಕ್ರಿಕೆಟ್​ನಲ್ಲಿ ಅಭಿಷೇಕ್ ಶರ್ಮಾ ಅವರ 9ನೇ ಶತಕವಾಗಿದೆ. ಈ ಮೂಲಕ ಅಭಿಷೇಕ್ ಅತಿ ಹೆಚ್ಚು ಟಿ20 ಶತಕಗಳನ್ನು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಜಂಟಿಯಾಗಿ ಅಗ್ರಸ್ಥಾನದಕ್ಕೇರಿದ್ದಾರೆ.

ಅಭಿಷೇಕ್​ಗೆ 2 ಜೀವದಾನ

ಅಭಿಷೇಕ್ ಶರ್ಮಾ 9 ನೇ ಓವರ್‌ನ ಮೊದಲ ಎಸೆತದಲ್ಲಿ ಅರ್ಧಶತಕ ಪೂರೈಸಿದರು. ಅಕ್ಷರ್ ಪಟೇಲ್ ಅವರ ಮೊದಲ ಎಸೆತವನ್ನು ಮಿಡ್ ವಿಕೆಟ್ ಕಡೆಗೆ ಹೊಡೆಯುವ ಮೂಲಕ 2 ರನ್ ಕಲೆಹಾಕಿ ಅಭಿಷೇಕ್ ತಮ್ಮ ಮೂರನೇ ಅರ್ಧಶತಕ ಪೂರೈಸಿದರು. ವಾಸ್ತವವಾಗಿ ಇಲ್ಲಿ ಅಭಿಷೇಕ್ ರನೌಟ್​ಗೆ ಬಲಿಯಾಗಬೇಕಿತ್ತು. ಆದರೆ ವಿಕೆಟ್ ಕೀಪರ್ ಕೆಎಲ್ ರಾಹುಲ್ ಮಾಡಿದ ಎಡವಟ್ಟಿನಿಂದ ಅವರಿಗೆ ಜೀವದಾನ ಸಿಕ್ಕಿತು. 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅಭಿಷೇಕ್ ಇಲ್ಲಿಂದ ತಮ್ಮ ಸ್ಫೋಟಕ ಆಟ ಮುಂದುವರೆಸಿದರು. ಶತಕದಂಚಿನಲ್ಲೂ ಅಭಿಷೇಕ್, ನಿತೀಶ್ ರಾಣಾಗೆ ಕ್ಯಾಚ್ ನೀಡಿದ್ದರು. ಆದರೆ ರಾಣಾ ಆ ಕ್ಯಾಚ್ ಕೈಚೆಲ್ಲಿದರು. ಇದರಿಂದಾಗಿ ಅಭಿಷೇಕ್ ತಮ್ಮ ಎರಡನೇ ಐಪಿಎಲ್ ಶತಕವನ್ನು ಪೂರೈಸಿದರು.

SRH vs DC IPL 2026 Live Score: ಶತಕ ಸಿಡಿಸಿದ ಅಭಿಷೇಕ್

ಒಂದೇ ಮೈದಾನದಲ್ಲಿ 2ನೇ ಶತಕ

ಅಭಿಷೇಕ್ ಶರ್ಮಾ ಹೈದರಾಬಾದ್‌ನಲ್ಲಿ ಶತಕ ಗಳಿಸುವ ಮೂಲಕ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ. ಮೇಲೆ ಹೇಳಿದಂತೆ ಇದು ಅಭಿಷೇಕ್ ಅವರ ಒಂಬತ್ತನೇ ಟಿ20 ಶತಕ. ವಿರಾಟ್ ಕೊಹ್ಲಿ ಕೂಡ ಟಿ20 ಕ್ರಿಕೆಟ್‌ನಲ್ಲಿ ಒಂಬತ್ತು ಶತಕಗಳನ್ನು ಬಾರಿಸಿದ್ದಾರೆ. ಇದೀಗ ಇವರಿಬ್ಬರು ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಭಾರತೀಯರನ್ನಾಗಿ ಮಾಡಿದೆ. ಇದು ಹೈದರಾಬಾದ್ ಪರ ಅಭಿಷೇಕ್ ಅವರ ಎರಡನೇ ಶತಕವಾಗಿದ್ದು, ಈ ಎರಡೂ ಶತಕಗಳನ್ನು ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಬಾರಿಸಿರುವುದು ಗಮನಿಸಬೇಕಾದ ಸಂಗತಿಯಾಗಿದೆ. ಇದಕ್ಕೂ ಮೊದಲು, ಕಳೆದ ವರ್ಷ, ಅಭಿಷೇಕ್ ಪಂಜಾಬ್ ವಿರುದ್ಧ ಕೇವಲ 40 ಎಸೆತಗಳಲ್ಲಿ ಶತಕ ಬಾರಿಸಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:47 pm, Tue, 21 April 26

Follow Us
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಇಡಿ ದಾಳಿ ನಂತರ ನಲಪಾಡ್ ಸ್ಫೋಟಕ ಹೇಳಿಕೆ
ಇಡಿ ದಾಳಿ ನಂತರ ನಲಪಾಡ್ ಸ್ಫೋಟಕ ಹೇಳಿಕೆ
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!