AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs KKR: ಕಿಂಗ್ ಕೊಹ್ಲಿ ಶತಕ; ಕೆಕೆಆರ್​ ವಿರುದ್ಧ ಗೆದ್ದ ಆರ್​ಸಿಬಿಗೆ ಅಗ್ರಸ್ಥಾನ

IPL 2026, RCB vs KKR: ಐಪಿಎಲ್ 2026 ರಾಯ್‌ಪುರ ಪಂದ್ಯದಲ್ಲಿ, ವಿರಾಟ್ ಕೊಹ್ಲಿಯ ಶತಕದ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಈ ಭರ್ಜರಿ ಗೆಲುವಿನೊಂದಿಗೆ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ಇತ್ತ ಕೆಕೆಆರ್ ಪ್ಲೇಆಫ್ ರೇಸ್‌ನಿಂದ ಹೊರಬಿದ್ದ ಮೂರನೇ ತಂಡವಾಗಿದೆ.

RCB vs KKR: ಕಿಂಗ್ ಕೊಹ್ಲಿ ಶತಕ; ಕೆಕೆಆರ್​ ವಿರುದ್ಧ ಗೆದ್ದ ಆರ್​ಸಿಬಿಗೆ ಅಗ್ರಸ್ಥಾನ
Virat Kohli
ಪೃಥ್ವಿಶಂಕರ
|

Updated on:May 14, 2026 | 12:38 AM

Share

ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 57ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs KKR) ತಂಡ ಈ ಆವೃತ್ತಿಯಲ್ಲಿ 8ನೇ ಗೆಲುವು ದಾಖಲಿಸುವ ಮೂಲಕ ಅಂಕಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಸ್ಥಾನಕ್ಕೇರಿದೆ. ಇತ್ತ ಆರ್​​ಸಿಬಿ ವಿರುದ್ಧ ಸೋತ ಕೆಕೆಆರ್ ಮೂರನೇ ತಂಡವಾಗಿ ಪ್ಲೇಆಫ್‌ನಿಂದ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ 192 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿಯ (Virat Kohli) ಅಬ್ಬರದ ಶತಕದ ನೆರವಿನಿಂದ ಸುಲಭವಾಗಿ ಜಯದ ನಗೆ ಬೀರಿತು. ಕಳೆದ 2 ಪಂದ್ಯಗಳಲ್ಲಿ ಸೊನ್ನೆಗೆ ಔಟಾಗಿದ್ದ ಕೊಹ್ಲಿ ಈ ಪಂದ್ಯದಲ್ಲಿ ಸ್ಮರಣೀಯ ಇನ್ನಿಂಗ್ಸ್ ಆಡಿ ಆರ್​ಸಿಬಿ ಗೆಲುವಿನ ರೂವಾರಿ ಎನಿಸಿಕೊಂಡರು.

ರಘುವಂಶಿ- ರಿಂಕು ಜೊತೆಯಾಟ

ಮಳೆ ಪೀಡಿತ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಕೋಲ್ಕತ್ತಾ ತಂಡಕ್ಕೆ ಆರಂಭದಲ್ಲೇ ಆಘಾತ ಕಾದಿತ್ತು. ಓಪನರ್ ಫಿನ್ ಅಲೆನ್ (18) ಅವರನ್ನು ಭುವನೇಶ್ವರ್ ಕುಮಾರ್ ಬೇಗನೆ ಪೆವಿಲಿಯನ್‌ಗೆ ಕಳುಹಿಸಿದರು. ನಂತರ ನಾಯಕ ಅಜಿಂಕ್ಯ ರಹಾನೆ (19) ಕೂಡ ಕಡಿಮೆ ಸ್ಕೋರ್‌ಗೆ ಔಟಾದರು. ಆದಾಗ್ಯೂ, ಈ ಹಂತದಲ್ಲಿ ಅಂಗ್‌ಕ್ರಿಶ್ ರಘುವಂಶಿ ಇನ್ನಿಂಗ್ಸ್ ನಿಭಾಯಿಸುವ ಕೆಲಸ ಮಾಡಿದರು. ಅವರೊಂದಿಗೆ, ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ (32) ಅತ್ಯುತ್ತಮ ಪ್ರದರ್ಶನ ನೀಡಿದರು. ಕೊನೆಯಲ್ಲಿ, ರಿಂಕು ಸಿಂಗ್ (49*) ತಮ್ಮದೇ ಆದ ಶೈಲಿಯಲ್ಲಿ ಸಿಕ್ಸರ್‌ಗಳೊಂದಿಗೆ ತಂಡಕ್ಕೆ ಬೃಹತ್ ಸ್ಕೋರ್ ಒದಗಿಸಿದರು. ದುರದೃಷ್ಟವಶಾತ್, ರಿಂಕು ತಮ್ಮ ಅರ್ಧಶತಕವನ್ನು ತಪ್ಪಿಸಿಕೊಂಡರು.

ಇತ್ತ ಆರ್​​ಸಿಬಿ ಪರ ಭುವನೇಶ್ವರ್ ಕುಮಾರ್ ಭಿಗಿ ಬೌಲಿಂಗ್ ಮಾಡಿ ಪ್ರಮುಖ ವಿಕೆಟ್ ಪಡೆದರು. ಜೋಶ್ ಹ್ಯಾಜಲ್‌ವುಡ್ ಕೂಡ ರಹಾನೆ ಅವರನ್ನು ಔಟ್ ಮಾಡುವ ಮೂಲಕ ಅದ್ಭುತ ಪ್ರದರ್ಶನ ನೀಡಿದರು. ರಸಿಕ್ ಸಲಾಂ ದಾರ್ ಕೂಡ ಒಂದು ವಿಕೆಟ್ ಪಡೆದರೂ, ಆರ್‌ಸಿಬಿ ಬೌಲರ್‌ಗಳು ಡೆತ್ ಓವರ್‌ಗಳಲ್ಲಿ ಕೋಲ್ಕತ್ತಾ ಬ್ಯಾಟ್ಸ್‌ಮನ್‌ಗಳನ್ನು ತಡೆಯಲು ಹೆಣಗಾಡಿದರು. ವಿಶೇಷವಾಗಿ ಕೊನೆಯ 5 ಓವರ್‌ಗಳಲ್ಲಿ, ಕೆಕೆಆರ್ ಬ್ಯಾಟ್ಸ್‌ಮನ್‌ಗಳು ರನ್‌ಗಳ ಪ್ರವಾಹವನ್ನು ಸುರಿಸಿ 190 ರನ್​ಗಳ ಗಡಿ ದಾಟಿಸಿದರು.

ಕೊಹ್ಲಿ- ಪಡಿಕ್ಕಲ್ ಶತಕದ ಜೊತೆಯಾಟ

ಈ ಗುರಿ ಬೆನ್ನಟ್ಟಿದ ಆರ್​ಸಿಬಿಗೂ ಸಾಧಾರಣ ಆರಂಭ ಸಿಕ್ಕಿತು. ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಆರಂಭಿಕ ಜಾಕೋಬ್ ಬೆಥೆಲ್ ಕೇವಲ 15 ರನ್‌ಗಳಿಗೆ ಔಟಾದರು. ಆದರೆ ಆ ಬಳಿಕ ಜೊತೆಯಾದ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಶತಕದ ಜೊತೆಯಾಟವನ್ನಾಡುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಇದೇ ಹಂತದಲ್ಲಿ ಕೊಹ್ಲಿ 32 ಎಸೆತಗಳಲ್ಲಿ ಅರ್ಧಶತಕವನ್ನು ಪೂರೈಸಿದರು. ಆದರೆ 39 ರನ್‌ಗಳಿಗೆ ದೇವದತ್ ಪಡಿಕ್ಕಲ್ ಔಟಾಗುವ ಮೂಲಕ ಈ ಜೊತೆಯಾಟ ಮುರಿದುಬಿತ್ತು.

RCB vs KKR IPL 2026 Highlights: ಕೊಹ್ಲಿಗೆ ಜೀವದಾನ ನೀಡಿ ಸೋತ ಕೆಕೆಆರ್​​

ಅಜೇಯ ಶತಕ ಬಾರಿಸಿದ ಕೊಹ್ಲಿ

ಆ ನಂತರ ಬಂದ ನಾಯಕ ರಜತ್ ಪಾಟಿದರ್ 11 ರನ್​ಗಳಿಗೆ ಔಟಾದರೆ, ಟಿಮ್ ಡೇವಿಡ್ ಇನ್ನಿಂಗ್ಸ್ 2 ರನ್​ಗಳಿಗೆ ಅಂತ್ಯವಾಯಿತು. ಇತ್ತ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವ ಕೆಲಸ ಮಾಡಿದ ವಿರಾಟ್ ಕೊಹ್ಲಿ 58 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ಈ ಆವೃತ್ತಿಯಲ್ಲಿ ಕೊಹ್ಲಿಯ ಮೊದಲ ಶತಕವಾದರೆ, ಐಪಿಎಲ್ ವೃತ್ತಿಜೀವನದ 9ನೇ ಶತಕವಾಗಿತ್ತು. ಈ ಶತಕದ ಇನ್ನಿಂಗ್ಸ್ ಮೂಲಕ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 14000 ರನ್​ಗಳ ಗಡಿ ಕೂಡ ದಾಟಿದರು. ಈ ಪಂದ್ಯದಲ್ಲಿ ಅಜೇಯರಾಗಿ ಉಳಿದ ಕೊಹ್ಲಿ 60 ಎಸೆತಗಳಲ್ಲಿ 105 ರನ್ ಬಾರಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:20 am, Thu, 14 May 26

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು