AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2026 ರ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ನಾಯಕ ಶ್ರೇಯಸ್ ಅಯ್ಯರ್

Shreyas Iyer's IPL 2026 Heroics: ಐಪಿಎಲ್ 2026ರ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಅರ್ಧಶತಕ ಬಾರಿಸಿದರು. ಅವರ 59 ರನ್‌ಗಳ ಅಜೇಯ ಇನ್ನಿಂಗ್ಸ್ ನೆರವಿನಿಂದ ಪಂಜಾಬ್ 211 ರನ್ ಗಳಿಸಿತು. ಅಯ್ಯರ್ ಈ ಆವೃತ್ತಿಯ 5ನೇ ಅರ್ಧಶತಕ ಬಾರಿಸಿ, ಐಪಿಎಲ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ಅವರ ಪ್ರಮುಖ ದಾಖಲೆಯನ್ನು ಸರಿಗಟ್ಟಿದರು. ಈ ಮೂಲಕ ಅವರು ಈ ಆವೃತ್ತಿಯ ಅತಿ ಹೆಚ್ಚು ಅರ್ಧಶತಕ ಗಳಿಸಿದ ನಾಯಕರಾದರು.

2026 ರ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ನಾಯಕ ಶ್ರೇಯಸ್ ಅಯ್ಯರ್
Shreyas Iyer
ಪೃಥ್ವಿಶಂಕರ
|

Updated on: May 11, 2026 | 10:16 PM

Share

ಐಪಿಎಲ್ 2026 (IPL 2026) ರ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (PBKS vs DC) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ 211 ರನ್​ಗಳ ಬೃಹತ್ ಮೊತ್ತ ಕಲೆಹಾಕಿತು. ಪಂಜಾಬ್ ತಂಡ ಇಷ್ಟು ದೊಡ್ಡ ಮೊತ್ತ ಕಲೆಹಾಕುವಲ್ಲಿ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಪ್ರಮುಖ ಪಾತ್ರವಹಿಸಿದರು. ಈ ಪಂದ್ಯದಲ್ಲಿ ಶ್ರೇಯಸ್ 36 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 59 ರನ್ ಬಾರಿಸಿ ಅಜೇಯರಾಗಿ ಉಳಿದರು. ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಅಯ್ಯರ್, ಈ ಬಾರಿಯ ಐಪಿಎಲ್‌ನಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿದ ನಾಯಕ ಎನಿಸಿಕೊಂಡಿದ್ದು ಮಾತ್ರವಲ್ಲದೆ, ವಿರಾಟ್ ಕೊಹ್ಲಿಯ ವಿಶೇಷ ದಾಖಲೆಯನ್ನು ಮುರಿದರು.

ಅತಿ ಹೆಚ್ಚು ಅರ್ಧಶತಕಗಳು

ಡೆಲ್ಲಿ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ಶ್ರೇಯಸ್ ಅಯ್ಯರ್, ಈ ಆವೃತ್ತಿಯಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿದ ನಾಯಕ ಎನಿಸಿಕೊಂಡಿದ್ದಾರೆ. ಅಯ್ಯರ್ ಈ ಆವೃತ್ತಿಯಲ್ಲಿ ಇಲ್ಲಿಯವರೆಗೆ ಐದು ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಯ್ಯರ್, ಚೆನ್ನೈ ಸೂಪರ್ ಕಿಂಗ್ಸ್, ಸನ್‌ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್ ವಿರುದ್ಧ ತಲಾ ಒಂದೊಂದು ಅರ್ಧಶತಕವನ್ನು ಬಾರಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಎರಡು ಅರ್ಧಶತಕಗಳನ್ನು ಸಿಡಿಸಿದ್ದಾರೆ. ಈ ಆವೃತ್ತಿಯಲ್ಲಿ ಇಲ್ಲಿಯವರೆಗೆ 10 ಇನ್ನಿಂಗ್ಸ್‌ಗಳನ್ನಾಡಿರುವ ಶ್ರೇಯಸ್ ಅಯ್ಯರ್ 56 ಸರಾಸರಿಯಲ್ಲಿ 392 ರನ್ ಗಳಿಸಿದ್ದಾರೆ. ಇದರಲ್ಲಿ 25 ಸಿಕ್ಸರ್‌ಗಳು ಮತ್ತು 27 ಬೌಂಡರಿಗಳು ಸೇರಿವೆ.

ಕೊಹ್ಲಿ ದಾಖಲೆ ಸರಿಗಟ್ಟಿದ ಅಯ್ಯರ್

ಇಷ್ಟೇ ಅಲ್ಲ, ಶ್ರೇಯಸ್ ಅಯ್ಯರ್ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸರಿಗಟ್ಟಿದರು. ಐಪಿಎಲ್ 2025 ರಿಂದೀಚೆಗೆ, ಅತ್ಯಧಿಕ ಅರ್ಧಶತಕಗಳನ್ನು ಬಾರಿಸಿದವರ ಪಟ್ಟಿಯಲ್ಲಿ ಶ್ರೇಯಸ್ ಅಯ್ಯರ್ 11 ಅರ್ಧಶತಕಗಳೊಂದಿಗೆ ವಿರಾಟ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಸಾಧನೆಯನ್ನು 12 ಬಾರಿ ಮಾಡಿರುವ ಸಾಯಿ ಸುದರ್ಶನ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

10 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಶ್ರೇಯಸ್ ಅಯ್ಯರ್

ಶ್ರೇಯಸ್ ಅಯ್ಯರ್ ಅವರ ಅತ್ಯುತ್ತಮ ಬ್ಯಾಟಿಂಗ್ ನೆರವಿನಿಂದ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 210 ರನ್ ಗಳಿಸಿತು. ಅಯ್ಯರ್ ಹೊರತುಪಡಿಸಿ ಪ್ರಿಯಾಂಶ್ ಆರ್ಯ 56 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಕೂಪರ್ ಓನ್ಲಿ 38 ರನ್ ಮತ್ತು ಸೂರ್ಯಾಂಶ್ ಶೆಡ್ಜ್ 8 ಎಸೆತಗಳಲ್ಲಿ 21 ರನ್ ಗಳಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ