
ಐಪಿಎಲ್ 2026 (IPL 2026) ರ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (PBKS vs DC) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 211 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಪಂಜಾಬ್ ತಂಡ ಇಷ್ಟು ದೊಡ್ಡ ಮೊತ್ತ ಕಲೆಹಾಕುವಲ್ಲಿ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಪ್ರಮುಖ ಪಾತ್ರವಹಿಸಿದರು. ಈ ಪಂದ್ಯದಲ್ಲಿ ಶ್ರೇಯಸ್ 36 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 59 ರನ್ ಬಾರಿಸಿ ಅಜೇಯರಾಗಿ ಉಳಿದರು. ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಅಯ್ಯರ್, ಈ ಬಾರಿಯ ಐಪಿಎಲ್‌ನಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿದ ನಾಯಕ ಎನಿಸಿಕೊಂಡಿದ್ದು ಮಾತ್ರವಲ್ಲದೆ, ವಿರಾಟ್ ಕೊಹ್ಲಿಯ ವಿಶೇಷ ದಾಖಲೆಯನ್ನು ಮುರಿದರು.
ಡೆಲ್ಲಿ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ಶ್ರೇಯಸ್ ಅಯ್ಯರ್, ಈ ಆವೃತ್ತಿಯಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿದ ನಾಯಕ ಎನಿಸಿಕೊಂಡಿದ್ದಾರೆ. ಅಯ್ಯರ್ ಈ ಆವೃತ್ತಿಯಲ್ಲಿ ಇಲ್ಲಿಯವರೆಗೆ ಐದು ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಯ್ಯರ್, ಚೆನ್ನೈ ಸೂಪರ್ ಕಿಂಗ್ಸ್, ಸನ್‌ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್ ವಿರುದ್ಧ ತಲಾ ಒಂದೊಂದು ಅರ್ಧಶತಕವನ್ನು ಬಾರಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಎರಡು ಅರ್ಧಶತಕಗಳನ್ನು ಸಿಡಿಸಿದ್ದಾರೆ. ಈ ಆವೃತ್ತಿಯಲ್ಲಿ ಇಲ್ಲಿಯವರೆಗೆ 10 ಇನ್ನಿಂಗ್ಸ್‌ಗಳನ್ನಾಡಿರುವ ಶ್ರೇಯಸ್ ಅಯ್ಯರ್ 56 ಸರಾಸರಿಯಲ್ಲಿ 392 ರನ್ ಗಳಿಸಿದ್ದಾರೆ. ಇದರಲ್ಲಿ 25 ಸಿಕ್ಸರ್‌ಗಳು ಮತ್ತು 27 ಬೌಂಡರಿಗಳು ಸೇರಿವೆ.
ಇಷ್ಟೇ ಅಲ್ಲ, ಶ್ರೇಯಸ್ ಅಯ್ಯರ್ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸರಿಗಟ್ಟಿದರು. ಐಪಿಎಲ್ 2025 ರಿಂದೀಚೆಗೆ, ಅತ್ಯಧಿಕ ಅರ್ಧಶತಕಗಳನ್ನು ಬಾರಿಸಿದವರ ಪಟ್ಟಿಯಲ್ಲಿ ಶ್ರೇಯಸ್ ಅಯ್ಯರ್ 11 ಅರ್ಧಶತಕಗಳೊಂದಿಗೆ ವಿರಾಟ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಸಾಧನೆಯನ್ನು 12 ಬಾರಿ ಮಾಡಿರುವ ಸಾಯಿ ಸುದರ್ಶನ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
10 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಶ್ರೇಯಸ್ ಅಯ್ಯರ್
ಶ್ರೇಯಸ್ ಅಯ್ಯರ್ ಅವರ ಅತ್ಯುತ್ತಮ ಬ್ಯಾಟಿಂಗ್ ನೆರವಿನಿಂದ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 210 ರನ್ ಗಳಿಸಿತು. ಅಯ್ಯರ್ ಹೊರತುಪಡಿಸಿ ಪ್ರಿಯಾಂಶ್ ಆರ್ಯ 56 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಕೂಪರ್ ಓನ್ಲಿ 38 ರನ್ ಮತ್ತು ಸೂರ್ಯಾಂಶ್ ಶೆಡ್ಜ್ 8 ಎಸೆತಗಳಲ್ಲಿ 21 ರನ್ ಗಳಿಸಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ