Irani Cup 2022: ಇರಾನಿ ಕಪ್​ ಗೆದ್ದ ಶೇಷ ಭಾರತ ತಂಡ

Irani Cup 2022: ರಣಜಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಬಿಸಿಸಿಐ ಆಯ್ಕೆ ಮಾಡುತ್ತದೆ. ಅದರಂತೆ ಈ ಬಾರಿಯ ರಣಜಿ ಚಾಂಪಿಯನ್ ಸೌರಾಷ್ಟ್ರ ವಿರುದ್ಧ ಶೇಷ ಭಾರತ ತಂಡ ಮುಖಾಮುಖಿಯಾಗಿದೆ.

Irani Cup 2022: ಇರಾನಿ ಕಪ್​ ಗೆದ್ದ ಶೇಷ ಭಾರತ ತಂಡ
Irani Cup 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on:Oct 04, 2022 | 3:36 PM

Irani Cup 2022: ರಾಜ್‌ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ ನಡೆದ ಇರಾನಿ ಕಪ್​ ಪಂದ್ಯದಲ್ಲಿ ರಣಜಿ ಚಾಂಪಿಯನ್ ಸೌರಾಷ್ಟ್ರ ವಿರುದ್ಧ ಗೆಲ್ಲುವ ಮೂಲಕ ಶೇಷ ಭಾರತ ತಂಡವು (Saurashtra vs Rest of India) ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶೇಷ ಭಾರತ (Rest of India) ತಂಡದ ನಾಯಕ ಹನುಮ ವಿಹಾರಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌರಾಷ್ಟ್ರ ತಂಡವು ಮೊದಲ ಇನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿತ್ತು. ರೆಸ್ಟ್ ಆಫ್ ಇಂಡಿಯಾ ತಂಡದ ವೇಗಿಗಳಾದ ಮುಖೇಶ್ ಕುಮಾರ್, ಉಮ್ರಾನ್ ಮಲಿಕ್ ಹಾಗೂ ಕುಲ್ದೀಪ್ ಸೇನ್ ದಾಳಿಗೆ ತತ್ತರಿಸಿದ ಸೌರಾಷ್ಟ್ರ ತಂಡವು ಮೊದಲ ಇನಿಂಗ್ಸ್​ನಲ್ಲಿ ಕೇವಲ 98 ರನ್​ಗಳಿಗೆ ಆಲೌಟ್ ಆಗಿತ್ತು. ಆ ಬಳಿಕ ಮೊದಲ ಇನಿಂಗ್ಸ್ ಆಡಿದ್ದ ಶೇಷ ಭಾರತ ತಂಡದ ಪರ ಸರ್ಫರಾಜ್ ಖಾನ್ (138) ಭರ್ಜರಿ ಶತಕ ಸಿಡಿಸಿದ್ದರು. ಈ ಶತಕದ ನೆರವಿನಿಂದ ಶೇಷ ಭಾರತ ತಂಡವು 374 ರನ್​ಗಳನ್ನು ಕಲೆಹಾಕಿತು.

ಮೊದಲ ಇನಿಂಗ್ಸ್​ನ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಸೌರಾಷ್ಟ್ರ ತಂಡವು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಶೆಲ್ಡನ್ ಜಾಕ್ಸನ್ (71), ವಸವಾಡ (55), ಪ್ರೇರಕ್ (72) ಹಾಗೂ ನಾಯಕ ಜಯದೇವ್ ಉನಾದ್ಕಟ್ (89) ಅರ್ಧಶತಕ ಬಾರಿಸಿ ಬೃಹತ್ ಮೊತ್ತ ಪೇರಿಸುವ ಸೂಚನೆ ನೀಡಿದ್ದರು. ಆದರೆ ಮೂರನೇ ದಿನದಾಟದ ಅಂತ್ಯದಲ್ಲಿ ಭರ್ಜರಿ ಬೌಲಿಂಗ್ ದಾಳಿ ಸಂಘಟಿಸಿದ ಶೇಷ ಭಾರತ ತಂಡವು ಅಂತಿಮವಾಗಿ ಸೌರಾಷ್ಟ್ರವನ್ನು 380 ರನ್​ಗಳಿಗೆ ಆಲೌಟ್ ಮಾಡಿತು.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಮೊದಲ ಇನಿಂಗ್ಸ್​ನ ಮುನ್ನಡೆಯೊಂದಿಗೆ 2ನೇ ಇನಿಂಗ್ಸ್​ನಲ್ಲಿ ಕೇವಲ 105 ರನ್​ಗಳ ಟಾರ್ಗೆಟ್ ಪಡೆದ ಶೇಷ ಭಾರತ ತಂಡದ ಪರ ಅಭಿಮನ್ಯು ಈಶ್ವರನ್ (63) ಅರ್ಧಶತಕ ಬಾರಿಸಿದರು. ಅಲ್ಲದೆ ಕೇವಲ 2 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟುವ ಮೂಲಕ 8 ವಿಕೆಟ್​ಗಳಿಂದ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಹನುಮ ವಿಹಾರಿ ನಾಯಕತ್ವದಲ್ಲಿ ಶೇಷ ಭಾರತ ತಂಡವು ಈ ಬಾರಿಯ ಇರಾನಿ ಕಪ್​ ಅನ್ನು ತನ್ನದಾಗಿಸಿಕೊಂಡಿದೆ.

ಏನಿದು ಇರಾನಿ ಕಪ್?

Z.R ಇರಾನಿ ಅಥವಾ ಝಲ್ ಇರಾನಿ ಎಂಬುದು ಬಿಸಿಸಿಐನ ಮಾಜಿ ಅಧ್ಯಕ್ಷರ ಹೆಸರು. ಲಂಡನ್‌ನಲ್ಲಿ ಚಾರ್ಟರ್ಡ್ ಅಕೌಂಟೆನ್ಸಿ ಅಧ್ಯಯನ ಮಾಡಿದ್ದ ಇರಾನಿ ಅವರು ಸ್ವಾತಂತ್ರ್ಯ ಪೂರ್ವದಲ್ಲಿ ದೆಹಲಿಯ ರೋಶನಾರಾ ಕ್ಲಬ್ ಮತ್ತು ಮುಂಬೈನ ಪಾರ್ಸಿ ಜಿಮ್ಖಾನಾ ಕ್ಲಬ್ ಪರ ಕ್ರಿಕೆಟ್ ಆಡುತ್ತಿದ್ದರು. ಅಷ್ಟೇ ಅಲ್ಲದೆ 1928-29 ರಿಂದ 1945-46 ಮತ್ತು 1948-49 ರಿಂದ 1961-62 ಅವರು ಭಾರತ ಕ್ರಿಕೆಟ್ ಮಂಡಳಿಯ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು. ಅಷ್ಟೇ ಅಲ್ಲದೆ 1966ರಲ್ಲಿ ಬಿಸಿಸಿಐ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಭಾರತೀಯ ಕ್ರಿಕೆಟ್​ ಅನ್ನು ಪ್ರಗತಿಪಥದತ್ತ ಸಾಗಿಸಿದ್ದರು. ಈ ಮೂಲಕ ಸ್ವಾತಂತ್ರ ಭಾರತದಲ್ಲಿ ಕ್ರಿಕೆಟ್ ಅನ್ನು ಬೆಳೆಸುವಲ್ಲಿ ತಮ್ಮದೆಯಾದ ಕೊಡುಗೆ ನೀಡಿದ್ದಾರೆ. ಅವರ ಸ್ಮರಾರ್ಥ ಇರಾನಿ ಕಪ್​ ಅನ್ನು ಆಯೋಜಿಸಲಾಗುತ್ತದೆ.

ಈ ವಿಶೇಷ ಕಪ್​ಗಾಗಿ ರಣಜಿ ಚಾಂಪಿಯನ್ ತಂಡ ಹಾಗೂ ಶೇಷ ಭಾರತ ತಂಡ ಏಕೈಕ ಟೆಸ್ಟ್ ಪಂದ್ಯದಲ್ಲಿ ಸೆಣಸುತ್ತದೆ. ಅಂದರೆ ಇಲ್ಲಿ ಶೇಷ ಭಾರತ ತಂಡದಲ್ಲಿ ರಣಜಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಬಿಸಿಸಿಐ ಆಯ್ಕೆ ಮಾಡುತ್ತದೆ. ಅದರಂತೆ ಈ ಬಾರಿಯ ರಣಜಿ ಚಾಂಪಿಯನ್ ಸೌರಾಷ್ಟ್ರ ವಿರುದ್ಧ ಶೇಷ ಭಾರತ ತಂಡ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಚಾಂಪಿಯನ್ ತಂಡವನ್ನು ಸೋಲಿಸಿ ಶೇಷ ಭಾರತ ತಂಡ ಇರಾನಿ ಕಪ್ ಗೆದ್ದುಕೊಂಡಿದೆ.

ಸೌರಾಷ್ಟ್ರ ಪ್ಲೇಯಿಂಗ್ ಇಲೆವೆನ್: ಹಾರ್ವಿಕ್ ದೇಸಾಯಿ , ಸ್ನೆಲ್ ಪಟೇಲ್, ಚೇತೇಶ್ವರ ಪೂಜಾರ , ಶೆಲ್ಡನ್ ಜಾಕ್ಸನ್ , ಅರ್ಪಿತ್ ವಾಸವಾದ , ಪ್ರೇರಕ್ ಮಂಕಡ್ , ಚಿರಾಗ್ ಜಾನಿ , ಜಯದೇವ್ ಉನದ್ಕತ್ (ನಾಯಕ) , ಧರ್ಮೇಂದ್ರಸಿನ್ಹ್ ಜಡೇಜಾ , ಪಾರ್ಥ್ ಭುತ್ , ಚೇತನ್ ಸಕರಿಯಾ

ಶೇಷ ಭಾರತ ಪ್ಲೇಯಿಂಗ್ ಇಲೆವೆನ್: ಮಯಾಂಕ್ ಅಗರ್ವಾಲ್ , ಅಭಿಮನ್ಯು ಈಶ್ವರನ್ , ಯಶ್ ಧುಲ್ , ಹನುಮ ವಿಹಾರಿ (ನಾಯಕ) , ಸರ್ಫರಾಜ್ ಖಾನ್ , ಶ್ರೀಕರ್ ಭರತ್, ಜಯಂತ್ ಯಾದವ್ , ಸೌರಭ್ ಕುಮಾರ್ , ಮುಖೇಶ್ ಕುಮಾರ್ , ಕುಲದೀಪ್ ಸೇನ್ , ಉಮ್ರಾನ್ ಮಲಿಕ್

Published On - 3:30 pm, Tue, 4 October 22

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’