IND vs IRE: ಸಂಜು ಸ್ಥಾನದಲ್ಲಿ ಜಿತೇಶ್ಗೆ ಅವಕಾಶ? 3ನೇ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ
IND vs IRE: ಟೀಂ ಇಂಡಿಯಾ ಸರಣಿ ಗೆದ್ದಿರುವುದರಿಂದ ಮೂರನೇ ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ ಕಾಣಬಹುದಾಗಿದೆ. ಅದರಂತೆ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ಗೆ ವಿಶ್ರಾಂತಿ ನೀಡುವ ಸಾಧ್ಯತೆಗಳಿದ್ದು, ಅವರ ಸ್ಥಾನದಲ್ಲಿ ಜಿತೇಶ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಅವಕಾಶ ಸಿಗಬಹುದಾಗಿದೆ.
ಐರ್ಲೆಂಡ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ (India vs Ireland) 2-0 ಅಂತರದಿಂದ ವಶಪಡಿಸಿಕೊಂಡಿದೆ. ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಆಗಸ್ಟ್ 23 ರಂದು ನಡೆಯಲಿದೆ. ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಐರ್ಲೆಂಡ್ ತಂಡವನ್ನು ಕ್ಲೀನ್ ಸ್ವೀಪ್ ಮಾಡಲು ಟೀಂ ಇಂಡಿಯಾ (Team India) ಸಜ್ಜಾಗಿದೆ. ಮತ್ತೊಂದೆಡೆ, ಐರ್ಲೆಂಡ್ ದೊಡ್ಡ ಪುನರಾಗಮನವನ್ನು ಮಾಡಲು ಪ್ರಯತ್ನಿಸುತ್ತಿದೆ. ಟೀಂ ಇಂಡಿಯಾ ಸರಣಿ ಗೆದ್ದಿರುವುದರಿಂದ ಮೂರನೇ ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ ಕಾಣಬಹುದಾಗಿದೆ. ಅದರಂತೆ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ಗೆ (Sanju Samson) ವಿಶ್ರಾಂತಿ ನೀಡುವ ಸಾಧ್ಯತೆಗಳಿದ್ದು, ಅವರ ಸ್ಥಾನದಲ್ಲಿ ಜಿತೇಶ್ ಶರ್ಮಾ (Jitesh Sharma) ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಅವಕಾಶ ಸಿಗಬಹುದಾಗಿದೆ.
ತಂಡದಲ್ಲಿ ಯಾರಿಗೆಲ್ಲ ಅವಕಾಶ?
ನಾಯಕ ಜಸ್ಪ್ರೀತ್ ಬುಮ್ರಾ ಮೂರನೇ ಪಂದ್ಯಕ್ಕೆ ಆಡುವ ಹನ್ನೊಂದರ ಬಳಗವನ್ನು ಬದಲಾಯಿಸುವ ಸಾಧ್ಯತೆಗಳು ಹೆಚ್ಚಿವೆ. ಮೊದಲ 2 ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಅರ್ಶ್ದೀಪ್ಗೆ ಬುಮ್ರಾ ವಿಶ್ರಾಂತಿ ನೀಡಬಹುದಾಗಿದೆ. ಹಾಗೆಯೇ ಸಂಜು ಸ್ಯಾಮ್ಸನ್ ಬದಲಿಗೆ ವಿಕೆಟ್ ಕೀಪರ್ ಜಿತೇಶ್ ಶರ್ಮಾ ತಂಡದಲ್ಲಿ ಸ್ಥಾನ ಪಡೆಯಬಹುದಾಗಿದೆ. ಇನ್ನು ಆಲ್ರೌಂಡರ್ ಕೋಟಾದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿರುವ ವಾಷಿಂಗ್ಟನ್ ಸುಂದರ್ ಬದಲು ಶಹಬಾಜ್ ಅಹ್ಮದ್ ಅವಕಾಶ ಗಿಟ್ಟಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಯುವ ವೇಗಿಗಳಾದ ಮುಖೇಶ್ ಕುಮಾರ್ ಮತ್ತು ಅವೇಶ್ ಖಾನ್ ಅವರಿಗೂ ತಂಡದಲ್ಲಿ ಅವಕಾಶ ಸಿಗುವ ಸಾಧ್ಯತೆಗಳಿವೆ.
IND vs IRE: ಭಾರತದ ಕ್ಲೀನ್ ಸ್ವೀಪ್ ಗುರಿಗೆ ಮಳೆ ಅಡ್ಡಿ? ಇಲ್ಲಿದೆ ಡಬ್ಲಿನ್ ಹವಾಮಾನ ವರದಿ
ಇದುವರೆಗಿನ ಸರಣಿಯ ಮೊದಲ 2 ಪಂದ್ಯಗಳಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ತೀಕ್ಷ್ಣ ಬೌಲಿಂಗ್ ಮೂಲಕ ಎಲ್ಲರ ಗಮನ ಸೆಳೆದಿತ್ತು. ಆದರೆ ಮಳೆಯಿಂದಾಗಿ ಪಂದ್ಯ ಪೂರ್ಣಗೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಈ ಪಂದ್ಯವನ್ನು ಡಕ್‌ವರ್ತ್ ಲೂಯಿಸ್ ಪ್ರಕಾರ ಟೀಂ ಇಂಡಿಯಾ 2 ರನ್‌ಗಳಿಂದ ಗೆದ್ದುಕೊಂಡಿತು. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್‌ಮನ್‌ಗಳು ಅಬ್ಬರಿಸಿದ್ದರು. ಮೊದಲ ಪಂದ್ಯದಲ್ಲಿ ಮಳೆಯಿಂದಾಗಿ ಆರಂಭಿಕ ಜೋಡಿ ಹೊರತುಪಡಿಸಿ ಯಾರಿಗೂ ಅವಕಾಶ ಸಿಗಲಿಲ್ಲ. ಆದರೆ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್‌ಮನ್‌ಗಳು ಅದನ್ನು ಸರಿದೂಗಿಸಿದರು.
ಎರಡನೇ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಅರ್ಧ ಶತಕ ಬಾರಿಸಿದರು. ಶಿವಂ ದುಬೆ ಮತ್ತು ರಿಂಕು ಸಿಂಗ್ ಜೋಡಿಯು ಅಬ್ಬರಿಸುವ ಹೊಡೆಯುವ ಮೂಲಕ ಇನ್ನಿಂಗ್ಸ್ಗೆ ಅಂತಿಮ ಸ್ಪರ್ಶ ನೀಡಿದ್ದರು. ಮೊದಲ ಬಾರಿಗೆ ಬ್ಯಾಟಿಂಗ್ ಮಾಡಿದ ರಿಂಕು 21 ಎಸೆತಗಳಲ್ಲಿ 38 ರನ್ ಸಿಡಿಸಿದ್ದರು. ಇನ್ನು ಬೌಲಿಂಗ್ ವಿಚಾರದಲ್ಲಿ ನಾಯಕ ಜಸ್ಪ್ರೀತ್ ಬುಮ್ರಾ 2 ಪಂದ್ಯಗಳಲ್ಲಿ 4 ವಿಕೆಟ್ ಪಡೆದರೆ, ರವಿ ಬಿಷ್ಣೋಯ್ ಕೂಡ ತಮ್ಮ ಛಾಪು ಮೂಡಿಸಿದ್ದಾರೆ.
ಐರ್ಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಜಿತೇಶ್ ಶರ್ಮಾ, ರಿಂಕು ಸಿಂಗ್, ಶಿವಂ ದುಬೆ, ಶಹಬಾಜ್ ಅಹಮದ್, ಜಸ್ಪ್ರೀತ್ ಬುಮ್ರಾ, ಮುಖೇಶ್ ಕುಮಾರ್/ ಆವೇಶ್ ಖಾನ್, ಪ್ರಸಿದ್ಧ್ ಕೃಷ್ಣ ಮತ್ತು ರವಿ ಬಿಷ್ಣೋಯ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ