Sign In

By signing in or creating an account, you agree with Associated Broadcasting Company's Terms & Conditions and Privacy Policy.

WI vs IRE: ಟಿ20 ವಿಶ್ವಕಪ್​ನಿಂದ ವೆಸ್ಟ್ ಇಂಡೀಸ್ ಔಟ್..! ಎರಡು ಬಾರಿಯ ಚಾಂಪಿಯನ್​ಗಳಿಗೆ ಮುಖಭಂಗ

T20 World Cup 2022: ಹೋಬರ್ಟ್‌ನಲ್ಲಿ ನಡೆದ ಪಂದ್ಯದಲ್ಲಿ 9 ವಿಕೆಟ್​ಗಳಿಂದ ಕೆರಿಬಿಯನ್ ತಂಡವನ್ನು ಮಣಿಸಿದ ಐರ್ಲೆಂಡ್ ತಂಡ ಟಿ20 ವಿಶ್ವಕಪ್ ಅರ್ಹತಾ ಸುತ್ತಿಗೆ ಎಂಟ್ರಿಕೊಟ್ಟಿದೆ. ಈ ಸೋಲಿನೊಂದಿಗೆ ಈ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ತಂಡದ ಪಯಣ ಅಂತ್ಯಗೊಂಡಿದೆ.

WI vs IRE: ಟಿ20 ವಿಶ್ವಕಪ್​ನಿಂದ ವೆಸ್ಟ್ ಇಂಡೀಸ್ ಔಟ್..! ಎರಡು ಬಾರಿಯ ಚಾಂಪಿಯನ್​ಗಳಿಗೆ ಮುಖಭಂಗ
ವೆಸ್ಟ್ ಇಂಡೀಸ್ ತಂಡ
Follow us
TV9 Web
| Updated By: ಪೃಥ್ವಿಶಂಕರ

Updated on:Oct 21, 2022 | 1:11 PM

ಟಿ20 ವಿಶ್ವಕಪ್​ನ (T20 World Cup) ಅರ್ಹತಾ ಸುತ್ತಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಐರ್ಲೆಂಡ್ (Ireland) ವಿರುದ್ಧ ಸೋತ ವೆಸ್ಟ್ ಇಂಡೀಸ್ (West Indies) ತಂಡ ಈ ಬಾರಿಯ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದೆ. ಹೋಬರ್ಟ್‌ನಲ್ಲಿ ನಡೆದ ಪಂದ್ಯದಲ್ಲಿ 9 ವಿಕೆಟ್​ಗಳಿಂದ ಕೆರಿಬಿಯನ್ ತಂಡವನ್ನು ಮಣಿಸಿದ ಐರ್ಲೆಂಡ್ ತಂಡ ಟಿ20 ವಿಶ್ವಕಪ್ ಅರ್ಹತಾ ಸುತ್ತಿಗೆ ಎಂಟ್ರಿಕೊಟ್ಟಿದೆ. ಈ ಸೋಲಿನೊಂದಿಗೆ ಈ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ತಂಡದ ಪಯಣ ಅಂತ್ಯಗೊಂಡಿದೆ. ವಿಂಡೀಸ್ ತಂಡದ ಕಳಪೆ ಪ್ರದರ್ಶನವೇ ಅವರ ಸೋಲಿಗೆ ಕಾರಣವಾಗಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಪೂರನ್ ಪಡೆ ನಿಗದಿತ 20 ಓವರ್​ಗಳಲ್ಲಿ 146 ರನ್​ಗಳಿಸಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಐರ್ಲೆಂಡ್ ತಂಡ ಕೇವಲ ಒಂದು ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.

ವೆಸ್ಟ್ ಇಂಡೀಸ್ ಬ್ಯಾಟಿಂಗ್ ವೈಫಲ್ಯ

ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭಿಕರಾಗಿ ಕಣಕ್ಕಿಳಿದಿದ್ದ ಕೈಲ್ ಮೇಯರ್ಸ್ ಕೇವಲ 1 ರನ್ ಗಳಿಸಿ ಔಟಾದರು. ಇದರ ನಂತರ, ಜೋನಾಥನ್ ಚಾರ್ಲ್ಸ್ ಉತ್ತಮ ಇನ್ನಿಂಗ್ಸ್ ಆಡಲು ಪ್ರಯತ್ನಿಸಿದರೆ, ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಎವಿನ್ ಲೂಯಿಸ್ 18 ಎಸೆತಗಳಲ್ಲಿ 13 ರನ್ ಗಳಿಸಿ ತಮ್ಮ ವಿಕೆಟ್ ಒಪ್ಪಿಸಿದರು. ಆ ಬಳಿಕ ಚಾರ್ಲ್ಸ್ ಕೂಡ ಕೇವಲ 24 ರನ್​ಗಳಿಗೆ ಸುಸ್ತಾದರು. ನಾಯಕ ಪೂರನ್ ಮತ್ತೊಮ್ಮೆ ವಿಫಲರಾಗಿದಲ್ಲದೆ 11 ಎಸೆತಗಳಲ್ಲಿ 13 ರನ್ ಗಳಿಸಲಷ್ಟೇ ಶಕ್ತರಾದರು. ಬ್ರಾಂಡನ್ ಕಿಂಗ್ ಅಜೇಯ 62 ರನ್ ಗಳಿಸಿ ತಂಡವನ್ನು 146 ರನ್‌ಗಳಿಗೆ ಕೊಂಡೊಯ್ದರು. ಐರ್ಲೆಂಡ್ ಪರ ತಂಡದ ಲೆಗ್ ಸ್ಪಿನ್ನರ್ ಡೆಲಾನಿ 4 ಓವರ್​ಗಳಲ್ಲಿ ಕೇವಲ 16 ರನ್ ನೀಡಿ 3 ವಿಕೆಟ್ ಪಡೆದರು.

ಐರ್ಲೆಂಡ್ ತಂಡದ ಶ್ರೇಷ್ಠ ಬ್ಯಾಟಿಂಗ್

147 ರನ್‌ಗಳ ಗುರಿಗೆ ಉತ್ತರವಾಗಿ ಐರ್ಲೆಂಡ್ ಸ್ಫೋಟಕ ಆರಂಭ ಪಡೆಯಿತು. ಪಾಲ್ ಸ್ಟಿರ್ಲಿಂಗ್ ಮತ್ತು ನಾಯಕ ಬಲ್ಬಿರ್ನಿ ಮೊದಲ ವಿಕೆಟ್‌ಗೆ ಕೇವಲ 45 ಎಸೆತಗಳಲ್ಲಿ 73 ರನ್ ಸೇರಿಸಿದರು. ಇಬ್ಬರೂ ಬಿರುಸಿನ ಬ್ಯಾಟಿಂಗ್ ನಡೆಸಿ ವೆಸ್ಟ್ ಇಂಡೀಸ್ ತಂಡವನ್ನು ಆರಂಭದಲ್ಲೇ ಪಂದ್ಯದಿಂದ ಹೊರದಬ್ಬಿದರು. ಇದಾದ ಬಳಿಕ ವಿಕೆಟ್ ಕೀಪರ್ ಟಕ್ಕರ್ ಕೂಡ ಬಂದ ತಕ್ಷಣ ಅಬ್ಬರಿಸಲು ಆರಂಭಿಸಿದರು. ಈ ವೇಳೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಸ್ಟರ್ಲಿಂಗ್ ಕೇವಲ 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ತಂಡಕ್ಕೆ ಐತಿಹಾಸಿಕ ಜಯ ತಂದುಕೊಟ್ಟರು.

ಇದನ್ನೂ ಓದಿ: T20 World Cup 2022: ಕವಿತೆ ವಾಚಿಸುವ ಮೂಲಕ ಟೀಂ ಇಂಡಿಯಾಗೆ ಶುಭಹಾರೈಸಿದ ಅಮಿತಾಬ್ ಬಚ್ಚನ್; ವಿಡಿಯೋ ನೋಡಿ

ಅರ್ಹತಾ ಸುತ್ತಿನ ತನ್ನ ಮೊದಲ ಪಂದ್ಯದಲ್ಲಿ ಜಿಂಬಾಬ್ವೆ ಎದುರು ಸೋತಿದ್ದ ಐರ್ಲೆಂಡ್, ಅದರ ನಂತರ ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸೂಪರ್-12 ಸುತ್ತಿಗೆ ಎಂಟ್ರಿಕೊಟ್ಟಿದೆ. ಹಾಗೆಯೇ ತನ್ನ ಮೊದಲ ಪಂದ್ಯದಲ್ಲಿ ಸ್ಕಾಟ್ಲೆಂಡ್ ಎದುರು ಸೋತಿದ್ದ ವೆಸ್ಟ್ ಇಂಡೀಸ್, ತನ್ನ ಎರಡನೇ ಪಂದ್ಯದಲ್ಲಿ ಜಿಂಬಾಬ್ವೆ ಎದುರು ಗೆಲುವು ಸಾಧಿಸಿತ್ತು. ಆದರೆ ಕೊನೆಯ ನಿರ್ಣಾಯಕ ಪಂದ್ಯದಲ್ಲಿ ಐರ್ಲೆಂಡ್‌ ಎದುರು ಸೋತ ಕೆರಿಬಿಯನ್ ದೈತ್ಯ ತಂಡ ತನ್ನ ಟಿ20 ವಿಶ್ವಕಪ್‌ ಪ್ರಯಾಣವನ್ನು ಅರ್ಹತಾ ಸುತ್ತಿನಲ್ಲೇ ಕೊನೆಗೊಳಿಸಿತು.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Fri, 21 October 22

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ