Sanju Samson: ಟೀಮ್ ಇಂಡಿಯಾ ತೊರೆಯುತ್ತಾರ ಸಂಜು?: ಸ್ಯಾಮ್ಸನ್​ಗೆ ಬಿಗ್ ಆಫರ್ ನೀಡಿದ ಐರ್ಲೆಂಡ್ ಕ್ರಿಕೆಟ್

Ireland Cricket Board: ಐರ್ಲೆಂಡ್ ಕ್ರಿಕೆಟ್ ಬೋರ್ಡ್ ಸಂಜು ಸ್ಯಾಮ್ಸನ್​ಗೆ ಬಿಗ್ ಆಫರ್ ಒಂದನ್ನು ನೀಡಿದೆ. ಸಂಜು ಕ್ರಿಕೆಟ್ ವೃತ್ತಿಜೀವನವನ್ನು ಮುಂದುವರಿಸಲು ತನ್ನ ದೇಶಕ್ಕೆ ಬಂದರೆ, ಅವರನ್ನು ಪ್ರತಿ ಪಂದ್ಯದಲ್ಲೂ ಆಡಿಸುತ್ತೇವೆ ಎಂದು ಐರ್ಲೆಂಡ್ ಕ್ರಿಕೆಟ್ ಭರವಸೆ ನೀಡಿದೆಯಂತೆ.

Sanju Samson: ಟೀಮ್ ಇಂಡಿಯಾ ತೊರೆಯುತ್ತಾರ ಸಂಜು?: ಸ್ಯಾಮ್ಸನ್​ಗೆ ಬಿಗ್ ಆಫರ್ ನೀಡಿದ ಐರ್ಲೆಂಡ್ ಕ್ರಿಕೆಟ್
Sanju Samson and Ireland Cricket
Follow us
TV9 Web
| Updated By: Vinay Bhat

Updated on: Dec 12, 2022 | 10:31 AM

ಭಾರತ ಕ್ರಿಕೆಟ್ ತಂಡದಲ್ಲಿ ಈಗ ಅನುಭವಿ ಯುವ ಆಟಗಾರರ ದಂಡೇ ಇದೆ. ಎರಡು ಬಲಿಷ್ಠ ತಂಡ ಕಟ್ಟುವಷ್ಟು ಆಟಗಾರರು ಟೀಮ್ ಇಂಡಿಯಾದಲ್ಲಿ (Team India) ಇದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ (IPL) ಹುಟ್ಟಿದ ಅನೇಕ ಆಟಗಾರರು ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಹೊಸ ಹೊಸ ಆಟಗಾರರು ಭಾರತೀಯ ಕ್ರಿಕೆಟ್​ಗೆ ಕಾಲಿಡುತ್ತಿರುವುದರಿಂದ ಪ್ರತಿಭಾವಂತ ಅನುಭವಿ ಪ್ಲೇಯರ್ಸ್​ಗೆ ಅವಕಾಶ ಸಿಗದಿರುವುದು ಕೂಡ ಹೆಚ್ಚಾಗುತ್ತಿದೆ. ಇದಕ್ಕೆ ಮುಖ್ಯ ಉದಾಹರಣೆ ಸಂಜು ಸ್ಯಾಮ್ಸನ್ (Sanju Samson). ಭಾರತದಲ್ಲಿ ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿರುವ ಸ್ಯಾಮ್ಸನ್ ಅವರನ್ನು ಸತತವಾಗಿ ಬಿಸಿಸಿಐ ಕಡೆಗಣಿಸುತ್ತಿದೆ. ವಿಕೆಟ್‌ಕೀಪರ್ ಬ್ಯಾಟರ್ ಸ್ಯಾಮ್ಸನ್ ಟೀಮ್ ಇಂಡಿಯಾ ಪರ ಕೇವಲ ಬೆರಳೆಣಿಕೆಯ ಪಂದ್ಯಗಳಲ್ಲಿ ಮಾತ್ರವೇ ಆಡಿದ್ದಾರೆ.

ಸುಮಾರು 7 ವರ್ಷಗಳ ವೃತ್ತಿ ಜೀವನದಲ್ಲಿ ಸಂಜು ಆಡಿರುವುದು ಕೇವಲ 27 ಪಂದ್ಯಗಳನ್ನು ಮಾತ್ರ. ಇವರಿಗೆ ಅವಕಾಶ ಯಾವಗೆಂದರೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದ ಸಂದರ್ಭ. ಅದುಕೂಡ ಖಚಿತವಿಲ್ಲ. ತಂಡಕ್ಕೆ ಆಯ್ಕೆಯಾದರೂ ಆಡುವ ಬಳಗದಲ್ಲಿ ಸ್ಥಾನ ಸಿಗುವುದು ಅನುಮಾನ. ಇತ್ತೀಚಿನ ಬಾಂಗ್ಲಾದೇಶ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿಗೂ ಇವರನ್ನು ಆಯ್ಕೆ ಮಾಡಿರಲಿಲ್ಲ. ಇದಕ್ಕೂ ಮೊದಲು ನ್ಯೂಜಿಲೆಂಡ್‌ ಪ್ರವಾಸಕ್ಕೆ ಆಯ್ಕೆ ಆಗಿದ್ದರಾದರೂ ಆಡಲು ಸಿಕ್ಕಿದ್ದು ಕೇವಲ ಒಂದು ಪಂದ್ಯ ಮಾತ್ರ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಟೀಮ್ ಇಂಡಿಯಾಕ್ಕೆ ಇವರು ಆಯ್ಕೆಯಾದಷ್ಟು ಸಮಯದಲ್ಲಿ ಬೆಂಚ್ ಕಾದಿದ್ದೇ ಹೆಚ್ಚು.

ಟಿ20 ತಂಡದಿಂದ ರೋಹಿತ್- ಕೊಹ್ಲಿ ಔಟ್! ಲಂಕಾ ವಿರುದ್ಧದ ಸರಣಿಯಲ್ಲಿ ಎರಡು ತಂಡಗಳು ಕಣಕ್ಕೆ?

ಇದನ್ನೂ ಓದಿ
Image
INDW vs AUSW: ಸೂಪರ್ ಓವರ್​ನಲ್ಲಿ ಗೆದ್ದ ಬಳಿಕ ತ್ರಿವರ್ಣ ಧ್ವಜ ಹಿಡಿದು ಮೈದಾನದಲ್ಲಿ ಸಂಭ್ರಮಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡ
Image
Super Over: ಭಾರತ-ಆಸ್ಟ್ರೇಲಿಯಾ 2ನೇ ಟಿ20 ಟೈ: ರೋಚಕ ಸೂಪರ್ ಓವರ್​ನಲ್ಲಿ ಗೆದ್ದ ಕೌರ್ ಪಡೆ
Image
IND vs BAN Test ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್​ಗೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಔಟ್, ಕನ್ನಡಿಗ ಕ್ಯಾಪ್ಟನ್
Image
IPL 2023: ಮಿನಿ ಹರಾಜಿನಲ್ಲಿ ಅಧಿಕ ಬೆಲೆಗೆ ಮಾರಾಟವಾಗಬಹುದಾದ ಐವರು ಅನ್‌ಕ್ಯಾಪ್ಡ್ ಆಟಗಾರರಿವರು

ಶನಿವಾರ ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ಅದ್ಭುತ ದ್ವಿಶತಕ ಬಾರಿಸುವ ಮೂಲಕ ಟೀಮ್ ಇಂಡಿಯಾದಲ್ಲಿ ಸಂಜು ಸ್ಯಾಮ್ಸನ್ ಅವಕಾಶ ಮತ್ತಷ್ಟು ಕ್ಷೀಣಿಸಿದೆ. ಬಿಸಿಸಿಐ ಆಯ್ಕೆ ಸಮಿತಿ ಸ್ಯಾಮ್ಸನ್‌ರನ್ನು ಯಾಕೆ ಭಾರತ ತಂಡದಲ್ಲಿ ಸೇರಿಸಿಕೊಳ್ಳುತ್ತಿಲ್ಲ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದನ್ನೆಲ್ಲ ಗಮನಿಸಿದರೆ ಟೀಮ್ ಇಂಡಿಯಾದಲ್ಲಿ ಮುಂದಿನ ದಿನಗಳಲ್ಲಿ ಸ್ಯಾಮ್ಸನ್​ಗೆ ಅವಕಾಶ ಸಿಗುವುದು ಅನುಮಾನ ಎಂದೇ ಹೇಳಬಹುದು. ಹೀಗಿರುವಾಗ ಐರ್ಲೆಂಡ್ ಕ್ರಿಕೆಟ್ ಬೋರ್ಡ್ ಸಂಜುಗೆ ಬಿಗ್ ಆಫರ್ ಒಂದನ್ನು ನೀಡಿದೆ. ವರದಿಗಳ ಪ್ರಕಾರ, ಐರ್ಲೆಂಡ್ ಕ್ರಿಕೆಟ್ ಬೋರ್ಡ್ ಸಂಜು ಸ್ಯಾಮ್ಸನ್ ಕ್ರಿಕೆಟ್ ವೃತ್ತಿಜೀವನವನ್ನು ಮುಂದುವರಿಸಲು ತನ್ನ ದೇಶಕ್ಕೆ ಬಂದರೆ, ಅವರನ್ನು ಪ್ರತಿ ಪಂದ್ಯದಲ್ಲೂ ಆಡಿಸುತ್ತೇವೆ ಎಂದು ಭರವಸೆ ನೀಡಿದೆಯಂತೆ.

ಐರ್ಲೆಂಡ್ ಕ್ರಿಕೆಟ್‌ ಮಂಡಳಿಯು ಸಂಜು ಸ್ಯಾಮ್ಸನ್ ಅವರನ್ನು ಈ ವಿಚಾರವಾಗಿ ಸಂಪರ್ಕಿಸಿದೆ. ಐರ್ಲೆಂಡ್‌ ತಂಡದಲ್ಲಿ ಸಂಜುಗೆ ಎಲ್ಲಾ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್ ಆಡುವ ಅವಕಾಶ ಕೊಡುವ ಬಗ್ಗೆ ಭರವಸೆ ನೀಡಲಾಗಿದೆ ಎನ್ನಲಾಗಿದೆ. ಆದರೆ, ಸಂಜು ಸ್ಯಾಮ್ಸನ್ ಅವರು ಐರ್ಲೆಂಡ್ ಕ್ರಿಕೆಟ್ ಮಂಡಳಿಯ ಈ ಪ್ರಸ್ತಾಪವನ್ನು ನಿರಾಕರಿಸಿದ್ದಾರಂತೆ. ಅವಕಾಶ ಕೊಡಲು ಬಂದ ಐರ್ಲೆಂಡ್ ಕ್ರಿಕೆಟ್‌ ಮಂಡಳಿಗೆ ಕೃತಜ್ಞತೆ ಸಲ್ಲಿಸಿರುವ ಸಂಜು, ತಾನು ಭಾರತ ತಂಡವನ್ನು ಪ್ರತಿನಿಧಿಸಲು ಬಯಸುತ್ತಿರುವ ಕಾರಣ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೇರೆ ರಾಷ್ಟ್ರಕ್ಕಾಗಿ ಆಡುವುದನ್ನು ಪರಿಗಣಿಸುವುದಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

ವಿಶ್ವದ ಯಾವುದೇ ಶ್ರೇಷ್ಠ ಬೌಲರ್​ಗಳನ್ನು ಎದುರಿಸುವ ಸಾಮರ್ಥ್ಯ ಹೊಂದಿದ್ದರೂ ಸಂಜು ಸ್ಯಾಮ್ಸನ್​ಗೆ ದೊಡ್ಡ ಟೂರ್ನಿಗಳಲ್ಲಿ ಅವಕಾಶ ಸಿಗಲಿಲ್ಲ. 2022ರ ಟಿ20 ವಿಶ್ವಕಪ್‌ ಟೂರ್ನಿ ಸೇರಿದಂತೆ 2022ರ ಏಷ್ಯಾ ಕಪ್‌ ಪಂದ್ಯಾವಳಿಯಿಂದ ಕೂಡ ಸಂಜು ಅವರನ್ನು ಹೊರಗಿಡಲಾಯಿತು. ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರಿಷಭ್ ಪಂತ್ ಹೊರಗುಳಿದಿದ್ದರೂ, ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಿಲ್ಲ. ಸ್ಯಾಮ್ಸನ್ ಕಡೆಗಣನೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಬಾರಿ ಆಕ್ರೋಶ ವ್ಯಕ್ತವಾಗುತ್ತಲೇ ಇರುತ್ತದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ