ಐರ್ಲೆಂಡ್ ವಿರುದ್ಧ ಸರಣಿ ಗೆದ್ದ ಟೀಮ್ ಇಂಡಿಯಾ
Ireland vs India, 3rd T20I: 2018 ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ಧ ಸರಣಿ ಜಯಿಸಿತ್ತು. ಇದೀಗ ಜಸ್ಪ್ರೀತ್ ಬುಮ್ರಾ ಅವರ ನಾಯಕತ್ವದಲ್ಲಿ ಭಾರತ ತಂಡವು ಐರ್ಲೆಂಡ್ ವಿರುದ್ಧ ಸರಣಿ ಗೆದ್ದಿದೆ. ಈ ಮೂಲಕ ಈ ಸಾಧನೆ ಮಾಡಿದ 3ನೇ ಭಾರತೀಯ ನಾಯಕ ಎನಿಸಿಕೊಂಡಿದ್ದಾರೆ.
ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ಗೆದ್ದುಕೊಂಡಿದೆ. ಡಬ್ಲಿನ್ನ ಮಲಾಹೈಡ್ನಲ್ಲಿ ನಡೆಯಬೇಕಿದ್ದ ಮೂರನೇ ಟಿ20 ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಇದರೊಂದಿಗೆ ಸರಣಿಯು ಟೀಮ್ ಇಂಡಿಯಾ ಪಾಲಾಗಿದೆ. ಇದಕ್ಕೂ ಮುನ್ನ ಮೊದಲ ಟಿ20 ಪಂದ್ಯದಲ್ಲಿ ಮಳೆಯ ಕಾರಣ ಭಾರತ ತಂಡವು ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ 2 ರನ್ಗಳ ಜಯ ಸಾಧಿಸಿತ್ತು. ಹಾಗೆಯೇ 2ನೇ ಟಿ20 ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ 33 ರನ್ಗಳ ಭರ್ಜರಿ ಗೆಲುವು ದಾಖಲಿಸಿತ್ತು.
ಇನ್ನು 3ನೇ ಪಂದ್ಯದ ಆರಂಭಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದ್ದು, ಇದಾದ ಬಳಿಕ ಕಟ್ ಆಫ್ ಟೈಮ್ ತನಕ ಕಾಯಲಾಯಿತು. ಆದರೆ ನಿರಂತರ ಮಳೆಯಿಂದ ಮೈದಾನದ ಮೇಲ್ಮೈ ಒದ್ದೆಯಾಗಿದ್ದ ಪರಿಣಾಮ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ಅದರಂತೆ ಮೊದಲೆರಡು ಪಂದ್ಯಗಳಲ್ಲಿ ಗೆದ್ದು ಸರಣಿ ವಶಪಡಿಸಿಕೊಂಡಿದ್ದ ಟೀಮ್ ಇಂಡಿಯಾ ಟ್ರೋಫಿಯನ್ನು ಎತ್ತಿ ಹಿಡಿದಿದೆ.
ಜಸ್ಪ್ರೀತ್ ಬುಮ್ರಾಗೆ ಚೊಚ್ಚಲ ಟ್ರೋಫಿ:
ಈ ಸರಣಿಯ ಮೂಲಕ ಜಸ್ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಪಾದಾರ್ಪಣೆ ಮಾಡಿದ್ದರು. ಇದೀಗ ತಮ್ಮ ನಾಯಕತ್ವದಲ್ಲಿ ಬುಮ್ರಾ ಚೊಚ್ಚಲ ಟ್ರೋಫಿ ಗೆದ್ದುಕೊಂಡಿದ್ದಾರೆ. ಅಲ್ಲದೆ ಐರ್ಲೆಂಡ್ ವಿರುದ್ಧ ಸರಣಿ ಗೆದ್ದ ಟೀಮ್ ಇಂಡಿಯಾದ ಮೂರನೇ ನಾಯಕ ಎನಿಸಿಕೊಂಡಿದ್ದಾರೆ.
- 2018 ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ಧ ಸರಣಿ ಜಯಿಸಿತ್ತು.
- 2022 ರಲ್ಲಿ ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾವನ್ನು ಮುನ್ನಡೆಸಿ ಹಾರ್ದಿಕ್ ಪಾಂಡ್ಯ ಕಪ್ ಎತ್ತಿ ಹಿಡಿದಿದ್ದರು.
- 2023 ರಲ್ಲಿ ಜಸ್ಪ್ರೀತ್ ಬುಮ್ರಾ ನೇತೃತ್ವದ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ಧ ಸರಣಿ ಗೆದ್ದಿದೆ.
ಇನ್ನು ಈ ಸರಣಿಯಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಒಟ್ಟು 4 ವಿಕೆಟ್ ಕಬಳಿಸಿದ್ದ ಜಸ್ಪ್ರೀತ್ ಬುಮ್ರಾಗೆ ಸರಣಿ ಶ್ರೇಷ್ಠ ಪ್ರಶಸ್ತಿ ನೀಡಲಾಗಿದೆ. ವಿಶೇಷ ಎಂದರೆ ಇದು ಬುಮ್ರಾ ಅವರ ಕಂಬ್ಯಾಕ್ ಸರಣಿಯಾಗಿತ್ತು. ಅಂದರೆ ಕಳೆದೊಂದು ವರ್ಷದಿಂದ ಮೈದಾನದಿಂದ ಹೊರಗುಳಿದಿದ್ದ ಬುಮ್ರಾ ಇದೀಗ ಕಂಬ್ಯಾಕ್ ಸರಣಿಯಲ್ಲೇ ಪ್ಲೇಯರ್ ಆಫ್ ದಿ ಸಿರೀಸ್ ಪ್ರಶಸ್ತಿ ಪಡೆದಿದ್ದಾರೆ.
A special comeback! 💪#TeamIndia Captain @Jaspritbumrah93 led from the front with the ball & he receives the Player of the Series award 👏👏
India win the series 2⃣-0⃣ #IREvIND pic.twitter.com/iS6NxKvy0Z
— BCCI (@BCCI) August 23, 2023
ಐರ್ಲೆಂಡ್ ತಂಡ: ಆಂಡ್ರ್ಯೂ ಬಾಲ್ಬಿರ್ನಿ, ಪಾಲ್ ಸ್ಟಿರ್ಲಿಂಗ್ (ನಾಯಕ), ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಬ್ಯಾರಿ ಮೆಕ್ಕಾರ್ಥಿ, ಕ್ರೇಗ್ ಯಂಗ್, ಜೋಶುವಾ ಲಿಟಲ್, ಬೆಂಜಮಿನ್ ವೈಟ್, ಫಿಯಾನ್ ಹ್ಯಾಂಡ್, ಥಿಯೋ ವ್ಯಾನ್ ವೋರ್ಕಾಮ್, ಗೆರೆತ್ ಡೆಲಾನಿ, ರಾಸ್ ಅಡೈರ್.
ಇದನ್ನೂ ಓದಿ: ಜಸ್ಪ್ರೀತ್ ಬುಮ್ರಾ ಟಿ20 ತಂಡದ 11ನೇ ನಾಯಕ: ಉಳಿದ 10 ಕ್ಯಾಪ್ಟನ್ಗಳ ಪಟ್ಟಿ ಇಲ್ಲಿದೆ
ಭಾರತ ತಂಡ: ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ(ನಾಯಕ), ರವಿ ಬಿಷ್ಣೋಯ್, ಅವೇಶ್ ಖಾನ್, ಜಿತೇಶ್ ಶರ್ಮಾ, ಮುಖೇಶ್ ಕುಮಾರ್ , ಶಹಬಾಝ್ ಅಹಮದ್.
Published On - 10:51 pm, Wed, 23 August 23