ಐರ್ಲೆಂಡ್ ವಿರುದ್ಧ ಸರಣಿ ಗೆದ್ದ ಟೀಮ್ ಇಂಡಿಯಾ

| Updated By: ಝಾಹಿರ್ ಯೂಸುಫ್

Updated on: Aug 23, 2023 | 11:22 PM

Ireland vs India, 3rd T20I: 2018 ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ಧ ಸರಣಿ ಜಯಿಸಿತ್ತು. ಇದೀಗ ಜಸ್​ಪ್ರೀತ್ ಬುಮ್ರಾ ಅವರ ನಾಯಕತ್ವದಲ್ಲಿ ಭಾರತ ತಂಡವು ಐರ್ಲೆಂಡ್ ವಿರುದ್ಧ ಸರಣಿ ಗೆದ್ದಿದೆ. ಈ ಮೂಲಕ ಈ ಸಾಧನೆ ಮಾಡಿದ 3ನೇ ಭಾರತೀಯ ನಾಯಕ ಎನಿಸಿಕೊಂಡಿದ್ದಾರೆ.

ಐರ್ಲೆಂಡ್ ವಿರುದ್ಧ ಸರಣಿ ಗೆದ್ದ ಟೀಮ್ ಇಂಡಿಯಾ
Team india
Follow us on

ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ಗೆದ್ದುಕೊಂಡಿದೆ. ಡಬ್ಲಿನ್​ನ ಮಲಾಹೈಡ್​ನಲ್ಲಿ ನಡೆಯಬೇಕಿದ್ದ ಮೂರನೇ ಟಿ20 ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಇದರೊಂದಿಗೆ ಸರಣಿಯು ಟೀಮ್ ಇಂಡಿಯಾ ಪಾಲಾಗಿದೆ. ಇದಕ್ಕೂ ಮುನ್ನ ಮೊದಲ ಟಿ20 ಪಂದ್ಯದಲ್ಲಿ ಮಳೆಯ ಕಾರಣ ಭಾರತ ತಂಡವು ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ 2 ರನ್​ಗಳ ಜಯ ಸಾಧಿಸಿತ್ತು. ಹಾಗೆಯೇ 2ನೇ ಟಿ20 ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ 33 ರನ್​ಗಳ ಭರ್ಜರಿ ಗೆಲುವು ದಾಖಲಿಸಿತ್ತು.

ಇನ್ನು 3ನೇ ಪಂದ್ಯದ ಆರಂಭಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದ್ದು, ಇದಾದ ಬಳಿಕ ಕಟ್​ ಆಫ್ ಟೈಮ್ ತನಕ ಕಾಯಲಾಯಿತು. ಆದರೆ ನಿರಂತರ ಮಳೆಯಿಂದ ಮೈದಾನದ ಮೇಲ್ಮೈ ಒದ್ದೆಯಾಗಿದ್ದ ಪರಿಣಾಮ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ಅದರಂತೆ ಮೊದಲೆರಡು ಪಂದ್ಯಗಳಲ್ಲಿ ಗೆದ್ದು ಸರಣಿ ವಶಪಡಿಸಿಕೊಂಡಿದ್ದ ಟೀಮ್ ಇಂಡಿಯಾ ಟ್ರೋಫಿಯನ್ನು ಎತ್ತಿ ಹಿಡಿದಿದೆ.

ಜಸ್​ಪ್ರೀತ್ ಬುಮ್ರಾಗೆ ಚೊಚ್ಚಲ ಟ್ರೋಫಿ:

ಈ ಸರಣಿಯ ಮೂಲಕ ಜಸ್​ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಪಾದಾರ್ಪಣೆ ಮಾಡಿದ್ದರು. ಇದೀಗ ತಮ್ಮ ನಾಯಕತ್ವದಲ್ಲಿ ಬುಮ್ರಾ ಚೊಚ್ಚಲ ಟ್ರೋಫಿ ಗೆದ್ದುಕೊಂಡಿದ್ದಾರೆ. ಅಲ್ಲದೆ ಐರ್ಲೆಂಡ್ ವಿರುದ್ಧ ಸರಣಿ ಗೆದ್ದ ಟೀಮ್ ಇಂಡಿಯಾದ ಮೂರನೇ ನಾಯಕ ಎನಿಸಿಕೊಂಡಿದ್ದಾರೆ.

  • 2018 ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ಧ ಸರಣಿ ಜಯಿಸಿತ್ತು.
  • 2022 ರಲ್ಲಿ ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾವನ್ನು ಮುನ್ನಡೆಸಿ ಹಾರ್ದಿಕ್ ಪಾಂಡ್ಯ ಕಪ್ ಎತ್ತಿ ಹಿಡಿದಿದ್ದರು.
  • 2023 ರಲ್ಲಿ ಜಸ್​ಪ್ರೀತ್ ಬುಮ್ರಾ ನೇತೃತ್ವದ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ಧ ಸರಣಿ ಗೆದ್ದಿದೆ.

ಇನ್ನು ಈ ಸರಣಿಯಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಒಟ್ಟು 4 ವಿಕೆಟ್ ಕಬಳಿಸಿದ್ದ ಜಸ್​ಪ್ರೀತ್ ಬುಮ್ರಾಗೆ ಸರಣಿ ಶ್ರೇಷ್ಠ ಪ್ರಶಸ್ತಿ ನೀಡಲಾಗಿದೆ. ವಿಶೇಷ ಎಂದರೆ ಇದು ಬುಮ್ರಾ ಅವರ ಕಂಬ್ಯಾಕ್ ಸರಣಿಯಾಗಿತ್ತು. ಅಂದರೆ ಕಳೆದೊಂದು ವರ್ಷದಿಂದ ಮೈದಾನದಿಂದ ಹೊರಗುಳಿದಿದ್ದ ಬುಮ್ರಾ ಇದೀಗ ಕಂಬ್ಯಾಕ್ ಸರಣಿಯಲ್ಲೇ ಪ್ಲೇಯರ್ ಆಫ್​ ದಿ ಸಿರೀಸ್ ಪ್ರಶಸ್ತಿ ಪಡೆದಿದ್ದಾರೆ.

 

ಐರ್ಲೆಂಡ್ ತಂಡ: ಆಂಡ್ರ್ಯೂ ಬಾಲ್ಬಿರ್ನಿ, ಪಾಲ್ ಸ್ಟಿರ್ಲಿಂಗ್ (ನಾಯಕ), ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಬ್ಯಾರಿ ಮೆಕ್​ಕಾರ್ಥಿ, ಕ್ರೇಗ್ ಯಂಗ್, ಜೋಶುವಾ ಲಿಟಲ್, ಬೆಂಜಮಿನ್ ವೈಟ್, ಫಿಯಾನ್ ಹ್ಯಾಂಡ್, ಥಿಯೋ ವ್ಯಾನ್ ವೋರ್ಕಾಮ್, ಗೆರೆತ್ ಡೆಲಾನಿ, ರಾಸ್ ಅಡೈರ್.

ಇದನ್ನೂ ಓದಿ: ಜಸ್​ಪ್ರೀತ್ ಬುಮ್ರಾ ಟಿ20 ತಂಡದ 11ನೇ ನಾಯಕ: ಉಳಿದ 10 ಕ್ಯಾಪ್ಟನ್​ಗಳ ಪಟ್ಟಿ ಇಲ್ಲಿದೆ

ಭಾರತ ತಂಡ: ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ(ನಾಯಕ), ರವಿ ಬಿಷ್ಣೋಯ್, ಅವೇಶ್ ಖಾನ್, ಜಿತೇಶ್ ಶರ್ಮಾ, ಮುಖೇಶ್ ಕುಮಾರ್ , ಶಹಬಾಝ್ ಅಹಮದ್.

 

Published On - 10:51 pm, Wed, 23 August 23