AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCBಯ ಈ ದಾಂಡಿಗ ಬೌಲರ್‌ಗಳ ಪಾಲಿಗೆ “ಸಿಂಹಸ್ವಪ್ನ”

IPL 2026: ಐಪಿಎಲ್ ಅಂಗಳದಲ್ಲಿ ರನ್ ಮಳೆ ಸುರಿಸುವವರು ಹಲವರಿದ್ದಾರೆ. ಆದರೆ ಎದುರಾಳಿ ಬೌಲರ್‌ಗಳ ಆತ್ಮವಿಶ್ವಾಸವನ್ನೇ ಕುಗ್ಗಿಸುವವರು ಕೆಲವರು ಮಾತ್ರ. ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಅಂತಹ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸುತ್ತಿರುವುದು ರಜತ್ ಪಾಟಿದಾರ್. ಇವರ ಆಕ್ರಮಣಕಾರಿ ಬ್ಯಾಟಿಂಗ್​ಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ಇರ್ಫಾನ್ ಪಠಾಣ್ ಮನಸೋತಿದ್ದಾರೆ.

RCBಯ ಈ ದಾಂಡಿಗ ಬೌಲರ್‌ಗಳ ಪಾಲಿಗೆ ಸಿಂಹಸ್ವಪ್ನ
Rcb
ಝಾಹಿರ್ ಯೂಸುಫ್
|

Updated on:Apr 15, 2026 | 2:11 PM

Share

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡುತ್ತಿದೆ. ಈ ಪ್ರದರ್ಶನದೊಂದಿಗೆ ಓರ್ವ ಬ್ಯಾಟರ್ ಮಾತ್ರ ಎದುರಾಳಿ ಬೌಲರ್‌ಗಳ ನಿದ್ದೆಗೆಡಿಸಿದ್ದಾರೆ. ಅವರು ಮತ್ಯಾರೂ ಅಲ್ಲ, ಮಧ್ಯಮ ಕ್ರಮಾಂಕದ ಸ್ಫೋಟಕ ಬ್ಯಾಟರ್ ರಜತ್ ಪಾಟಿದಾರ್.

ಟೀಮ್ ಇಂಡಿಯಾದ ಮಾಜಿ ಆಟಗಾರ ಮತ್ತು ಖ್ಯಾತ ವಿಶ್ಲೇಷಕ ಇರ್ಫಾನ್ ಪಠಾಣ್, ರಜತ್ ಪಾಟಿದಾರ್ ಅವರ ವಿಸ್ಫೋಟಕ ಬ್ಯಾಟಿಂಗ್​ಗೆ ಮಾರುಹೋಗಿದ್ದಾರೆ. ಅಲ್ಲದೆ ಅವರನ್ನು ಬೌಲರ್‌ಗಳ ಪಾಲಿನ “ಸಿಂಹಸ್ವಪ್ನ” ಎಂದು ಕರೆದಿದ್ದಾರೆ.

ಪಠಾಣ್ ಮೆಚ್ಚುಗೆಗೆ ಕಾರಣವೇನು?

ಸಾಮಾನ್ಯವಾಗಿ ವಿರಾಟ್ ಕೊಹ್ಲಿ ಅಥವಾ ಫಿಲ್ ಸಾಲ್ಟ್ ಅವರ ಮೇಲೆ ಎಲ್ಲರ ಕಣ್ಣಿರುತ್ತದೆ. ಆದರೆ, ಈ ಬಾರಿ ಇರ್ಫಾನ್ ಪಠಾಣ್ ಅವರ ಗಮನ ಸೆಳೆದಿರುವುದು ರಜತ್ ಪಾಟಿದಾರ್ ಅವರ ಅಪ್ರತಿಮ ‘ಇಂಟೆಂಟ್’.

ಈ ಬಗ್ಗೆ ಮಾತನಾಡಿದ ಪಠಾಣ್, “ಪಾಟಿದಾರ್ ಕ್ರೀಸ್‌ಗೆ ಬಂದ ಮೊದಲ ಎಸೆತದಿಂದಲೇ ಬೌಲರ್‌ಗಳ ಮೇಲೆ ಸವಾರಿ ಮಾಡುತ್ತಾರೆ. ಅವರ ಆಕ್ರಮಣಕಾರಿ ಆಟ ಆರ್‌ಸಿಬಿ ತಂಡದ ರನ್ ಗತಿಯನ್ನೇ ಬದಲಿಸುತ್ತಿದೆ,” ಎಂದು ಅಭಿಪ್ರಾಯಪಟ್ಟಿದ್ದಾರೆ.

ರಜತ್ ಅಬ್ಬರ:

  • ವೇಗದ ಅರ್ಧಶತಕ: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 20 ಎಸೆತಗಳಲ್ಲಿ 53 ರನ್ ಚಚ್ಚುವ ಮೂಲಕ ಪಾಟಿದಾರ್ ತಮ್ಮ ಕೆಪಾಸಿಟಿ ಏನೆಂದು ತೋರಿಸಿಕೊಟ್ಟಿದ್ದರು. ಇದರಲ್ಲಿ 5 ಅಮೋಘ ಸಿಕ್ಸರ್‌ಗಳಿದ್ದವು.
  • ಸ್ಪಿನ್ನರ್‌ಗಳ ಧೂಳೀಪಟ: ಈ ಸೀಸನ್‌ನಲ್ಲಿ ರಜಯ್ ಪಾಟಿದಾರ್ ಸ್ಪಿನ್ ಬೌಲರ್‌ಗಳ ವಿರುದ್ಧ 218ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸುತ್ತಿದ್ದಾರೆ. ಯಾವುದೇ ಸ್ಪಿನ್ನರ್ ಎದುರಾದರೂ ಕ್ರೀಸ್‌ನಿಂದ ಹೊರಬಂದು ಸಿಕ್ಸರ್ ಸಿಡಿಸುವುದು ಇವರ ಸ್ಪೆಷಾಲಿಟಿ.
  • ಸ್ಥಿರ ಪ್ರದರ್ಶನ: ಕೇವಲ ಒಂದು ಪಂದ್ಯಕ್ಕೆ ಸೀಮಿತವಾಗದೆ, ಬ್ಯಾಕ್-ಟು-ಬ್ಯಾಕ್ ಅರ್ಧಶತಕಗಳನ್ನು ಸಿಡಿಸುವ ಮೂಲಕ ಆರ್‌ಸಿಬಿ ಬ್ಯಾಟಿಂಗ್ ಬೆನ್ನೆಲುಬಾಗಿ ನಿಂತಿದ್ದಾರೆ.

ಇರ್ಫಾನ್ ಪಠಾಣ್ ಅವರ ಪ್ರಕಾರ, ಆರ್‌ಸಿಬಿ ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಬೇಕಾದರೆ ರಜತ್ ಪಾಟಿದಾರ್ ಅವರ ಫಾರ್ಮ್ ಅತ್ಯಂತ ನಿರ್ಣಾಯಕ. ವಿರಾಟ್ ಕೊಹ್ಲಿ ಒಂದು ಕಡೆ ನೆಲೆಯೂರಿದರೆ, ಇನ್ನೊಂದು ತುದಿಯಲ್ಲಿ ರಜತ್ ಪಾಟಿದಾರ್ ನಡೆಸುವ ಆಕ್ರಮಣಕಾರಿ ಬ್ಯಾಟಿಂಗ್ ಎದುರಾಳಿ ತಂಡದ ತಂತ್ರಗಳನ್ನೆಲ್ಲ ತಲೆಕೆಳಗಾಗಿಸುತ್ತಿದೆ.

ಇದನ್ನೂ ಓದಿ: RCB ವಿರುದ್ಧ ‘ರಾಜಧಾನಿ ಎಕ್ಸ್​ಪ್ರೆಸ್​’ ಆಗಮನ..!

ಹೀಗಾಗಿ ಮುಂದಿನ ಪಂದ್ಯದಲ್ಲಿ ರಜತ್ ಪಾಟಿದಾರ್ ಹೇಗೆ ಆಡಲಿದ್ದಾರೆ ಎಂಬುದರ ಮೇಲೆ ಆರ್​ಸಿಬಿ ತಂಡದ ಪ್ಲೇಆಫ್ ಲೆಕ್ಕಾಚಾರ ನಿರ್ಧಾರವಾಗಲಿದೆ. ಒಟ್ಟಿನಲ್ಲಿ ಈ ಬಾರಿಯ ಐಪಿಎಲ್‌ನಲ್ಲಿ ರಜತ್ ಪಾಟಿದಾರ್ ಕೇವಲ ಒಬ್ಬ ಬ್ಯಾಟರ್ ಆಗಿ ಉಳಿಯದೆ, ಆರ್‌ಸಿಬಿ ಪಾಲಿನ ‘ಎಕ್ಸ್-ಫ್ಯಾಕ್ಟರ್’ ಆಗಿ ಹೊರಹೊಮ್ಮುತ್ತಿರುದು ವಿಶೇಷ.

Published On - 2:05 pm, Wed, 15 April 26

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ