ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ, ಇದೀಗ ಟಿ20 ವಿಶ್ವಕಪ್‌ಗಾಗಿ ಟೀಮ್ ಇಂಡಿಯಾದ (Team India) ಚರ್ಚೆ ಜೋರಾಗಿದೆ. ಮತ್ತೊಂದೆಡೆ ಟೀಮ್ ಇಂಡಿಯಾದಲ್ಲಿ ಪ್ರತಿಭಾವನ್ವಿತ ಅನೇಕ ಆಟಗಾರರ ದಂಡೇ ಇದ್ದು, ಹೀಗಾಗಿಯೇ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ (T20 World Cup 2022) ತಂಡವನ್ನು ಆಯ್ಕೆ ಮಾಡುವುದು ಆಯ್ಕೆದಾರರಿಗೆ ಸುಲಭವಲ್ಲ. ಇದರ ನಡುವೆ ಟೀಮ್ ಇಂಡಿಯಾದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಟಿ20 ವಿಶ್ವಕಪ್‌ಗಾಗಿ ತಮ್ಮ ಪ್ಲೇಯಿಂಗ್ ಇಲೆವೆನ್ ಅನ್ನು ಆಯ್ಕೆ ಮಾಡಿದ್ದಾರೆ. ಸಂವಾದವೊಂದರಲ್ಲಿ ಮಾತನಾಡಿದ ಇರ್ಫಾನ್, ಆಸ್ಟ್ರೇಲಿಯಾದಲ್ಲಿ ಚೆಂಡು ಸ್ವಿಂಗ್ ಆಗುತ್ತದೆ. ಹೀಗಾಗಿ ತಂಡದಲ್ಲಿ ಅನುಭವಿ ಆಟಗಾರರು ಇರಬೇಕಾಗುತ್ತದೆ. ಅದರಂತೆ ಅನುಭವಿ ಬಳಗವನ್ನೇ ಪ್ಲೇಯಿಂಗ್ ಇಲೆವೆನ್ನಲ್ಲಿ ಆಯ್ಕೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಇಲ್ಲಿ ಅಗ್ರ ಕ್ರಮಾಂಕದಲ್ಲಿ ಕೆಎಲ್ ರಾಹುಲ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಿಕೊಳ್ಳಬೇಕೆಂದು ಎಂದು ಇರ್ಫಾನ್ ಪಠಾಣ್ ಅಭಿಪ್ರಾಯಪಟ್ಟಿದ್ದಾರೆ. ಕೊಹ್ಲಿಯ ಪ್ರಸ್ತುತ ಫಾರ್ಮ್ ಕಳವಳಕಾರಿಯಾಗಿದೆ. ಆದರೆ ಆಸ್ಟ್ರೇಲಿಯಾದಲ್ಲಿ ಅವರು ಸಾಕಷ್ಟು ರನ್ ಗಳಿಸಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿಯನ್ನು ಟಿ20 ವಿಶ್ವಕಪ್‌ಗೆ ಆಯ್ಕೆ ಮಾಡಬೇಕೆಂದು ಇರ್ಫಾನ್ ಪಠಾಣ್ ತಿಳಿಸಿದ್ದಾರೆ.
ಹಾಗೆಯೇ ನಂಬರ್ 4 ನಲ್ಲಿ ಸೂರ್ಯಕುಮಾರ್ ಯಾದವ್ ಆಡುವುದು ಉತ್ತಮ. ಅದೇ ರೀತಿ ಹಾರ್ದಿಕ್ ಪಾಂಡ್ಯ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕು ಎಂದು ಇರ್ಫಾನ್ ಪಠಾಣ್ ಹೇಳಿದರು. ಇನ್ನು ತಂಡದ ವಿಕೆಟ್ ಕೀಪರ್ ಕಮ್ ಫಿನಿಶರ್ ಆಗಿ ದಿನೇಶ್ ಕಾರ್ತಿಕ್ 6ನೇ ಕ್ರಮಾಂಕದಲ್ಲಿ ಆಡುವುದು ಸೂಕ್ತ ಎಂದಿರುವ ಪಠಾಣ್, ರವೀಂದ್ರ ಜಡೇಜಾ 7ನೇ ಕ್ರಮಾಂಕದಲ್ಲಿ ಆಡುವುದರಿಂದ ಬ್ಯಾಟಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಇನ್ನು ಬೌಲಿಂಗ್ ವಿಭಾಗದಲ್ಲಿ ಮೂವರು ವೇಗಿಗಳು ಇರಲೇಬೇಕು. ಹಾಗೆಯೇ ತಂಡದಲ್ಲಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಆಲ್ರೌಂಡರ್ಗಳಾಗಿ ಇರುವುದರಿಂದ ಓರ್ವ ಸ್ಪಿನ್ನರ್ ಇದ್ದರೆ ಸಾಕು ಎಂದು ಇರ್ಫಾನ್ ಪಠಾಣ್ ತಿಳಿಸಿದ್ದಾರೆ. ಅದರಂತೆ ಇರ್ಫಾನ್ ಪಠಾಣ್ ಅವರ ಟಿ20 ವಿಶ್ವಕಪ್ ಪ್ಲೇಯಿಂಗ್ ಇಲೆವೆನ್ ಹೀಗಿದೆ.
ಇರ್ಫಾನ್ ಪಠಾಣ್ ಟಿ20 ವಿಶ್ವಕಪ್ ಪ್ಲೇಯಿಂಗ್ 11: ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ.
ಕ್ರಿಕೆಟ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.