Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ ಅವರ ಟೀಮ್ ಇಂಡಿಯಾ ಪ್ಲೇಯಿಂಗ್ 11

Irfan Pathan's T20 World Cup XI: ಬೌಲಿಂಗ್ ವಿಭಾಗದಲ್ಲಿ ಮೂವರು ವೇಗಿಗಳು ಹಾಗೂ ಓರ್ವ ಸ್ಪಿನ್ನರ್ ಅನ್ನು ಆಯ್ಕೆ ಮಾಡಿದ್ದಾರೆ. ಅದರಂತೆ ಜಸ್​ಪ್ರೀತ್ ಬುಮ್ರಾ ವೇಗಿಯಾಗಿ ಆಯ್ಕೆಯಾಗಿದ್ದಾರೆ.

Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ ಅವರ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 17, 2022 | 10:30 AM

T20 World Cup 2022: ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ (Team India) ಪ್ರಕಟವಾಗಿದೆ. 15 ಸದಸ್ಯರ ಈ ಬಳಗದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಹೀಗಾಗಿಯೇ ಪ್ಲೇಯಿಂಗ್ ಇಲೆವೆನ್​ನಲ್ಲಿ (India Playing 11) ಯಾರಿಗೆ ಚಾನ್ಸ್ ಸಿಗಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಇರ್ಫಾನ್ ಪಠಾಣ್ (Irfan Pathan). ಭಾರತ ತಂಡದ ಮಾಜಿ ಆಟಗಾರ ಪಠಾಣ್ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ಅನ್ನು ಪ್ರಕಟಿಸಿದ್ದಾರೆ.

ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ನಿರೀಕ್ಷೆಯಂತೆ ವಿರಾಟ್ ಕೊಹ್ಲಿ ಇದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಸೂಕ್ತ ಆಟಗಾರ ಎಂಬುದನ್ನು ಪಠಾಣ್ ಹೇಳಿದ್ದಾರೆ.

5ನೇ ಕ್ರಮಾಂಕದಲ್ಲಿ ಆಲ್​ರೌಂಡರ್ ದೀಪಕ್ ಹೂಡಾ ಅವರನ್ನು ಆಯ್ಕೆ ಮಾಡಿದ್ದು, ಈ ಮೂಲಕ ಹೆಚ್ಚುವರಿ ಬೌಲರ್​ನನ್ನು ಬಳಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಹಾಗೆಯೇ 6ನೇ ಕ್ರಮಾಂಕದ ವೇಗದ ಬೌಲಿಂಗ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯಗೆ ಸ್ಥಾನ ನೀಡಿದ್ದಾರೆ.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಇನ್ನು ವಿಕೆಟ್ ಕೀಪರ್ ಸ್ಥಾನದಲ್ಲಿ ಇರ್ಫಾನ್ ಪಠಾಣ್ ದಿನೇಶ್ ಕಾರ್ತಿಕ್ ಅವರನ್ನು ಆಯ್ಕೆ ಮಾಡಿರುವುದು ವಿಶೇಷ. ಅಂದರೆ ರಿಷಭ್ ಪಂತ್​ಗಿಂತ ಡಿಕೆ ಉತ್ತಮ ಆಟಗಾರ. ಅದರಲ್ಲೂ ಫಿನಿಶಿಂಗ್ ಪಾತ್ರಕ್ಕೆ ಸೂಕ್ತ ದಿನೇಶ್ ಕಾರ್ತಿಕ್. ಹೀಗಾಗಿ ಪಂತ್ ಅವರನ್ನು ಕೈ ಬಿಟ್ಟು ದಿನೇಶ್ ಕಾರ್ತಿಕ್​ಗೆ ತಮ್ಮ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ನೀಡಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಮೂವರು ವೇಗಿಗಳು ಹಾಗೂ ಓರ್ವ ಸ್ಪಿನ್ನರ್ ಅನ್ನು ಆಯ್ಕೆ ಮಾಡಿದ್ದಾರೆ. ಅದರಂತೆ ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್ ಹಾಗೂ ಜಸ್​ಪ್ರೀತ್ ಬುಮ್ರಾ ವೇಗಿಗಳಾಗಿ ಆಯ್ಕೆಯಾಗಿದ್ದಾರೆ. ಇನ್ನು ಸ್ಪಿನ್ನರ್​ಗೆ ಯುಜ್ವೇಂದ್ರ ಚಹಾಲ್​ಗೆ ಮಣೆಹಾಕಲಾಗಿದೆ. ಹೆಚ್ಚುವರಿ ಸ್ಪಿನ್ನರ್ ಆಗಿ ದೀಪಕ್ ಹೂಡಾ ಹಾಗೂ ವೇಗಿಯಾಗಿ ಹಾರ್ದಿಕ್ ಪಾಂಡ್ಯರನ್ನು ಬಳಸಿಕೊಳ್ಳಬಹುದು. ಈ ಮೂಲಕ 6 ಬೌಲರ್​ಗಳನ್ನು ಬಳಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿರಲಿದೆ ಎಂದು ಇರ್ಫಾನ್ ಪಠಾಣ್ ಅಭಿಪ್ರಾಯಪಟ್ಟಿದ್ದಾರೆ.

ಇರ್ಫಾನ್ ಪಠಾಣ್ ಅವರ ಪ್ಲೇಯಿಂಗ್ ಇಲೆವೆನ್​ ಈ ಕೆಳಗಿನಂತಿದೆ:

  1. ರೋಹಿತ್ ಶರ್ಮಾ (ನಾಯಕ)
  2. ಕೆಎಲ್ ರಾಹುಲ್
  3. ವಿರಾಟ್ ಕೊಹ್ಲಿ
  4. ಸೂರ್ಯಕುಮಾರ್
  5. ದೀಪಕ್ ಹೂಡಾ
  6. ಹಾರ್ದಿಕ್ ಪಾಂಡ್ಯ
  7. ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್)
  8. ಹರ್ಷಲ್ ಪಟೇಲ್
  9. ಭುವನೇಶ್ವರ್ ಕುಮಾರ್
  10. ಜಸ್​ಪ್ರೀತ್ ಬುಮ್ರಾ
  11. ಯುಜ್ವೇಂದ್ರ ಚಹಾಲ್
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್