T20 World Cup 2022: ಟಿ20 ವಿಶ್ವಕಪ್ಗೆ ಟೀಮ್ ಇಂಡಿಯಾ (Team India) ಪ್ರಕಟವಾಗಿದೆ. 15 ಸದಸ್ಯರ ಈ ಬಳಗದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಹೀಗಾಗಿಯೇ ಪ್ಲೇಯಿಂಗ್ ಇಲೆವೆನ್ನಲ್ಲಿ (India Playing 11) ಯಾರಿಗೆ ಚಾನ್ಸ್ ಸಿಗಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ (Irfan Pathan). ಭಾರತ ತಂಡದ ಮಾಜಿ ಆಟಗಾರ ಪಠಾಣ್ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ಪ್ರಕಟಿಸಿದ್ದಾರೆ.
ಈ ಪ್ಲೇಯಿಂಗ್ ಇಲೆವೆನ್ನಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ನಿರೀಕ್ಷೆಯಂತೆ ವಿರಾಟ್ ಕೊಹ್ಲಿ ಇದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಸೂಕ್ತ ಆಟಗಾರ ಎಂಬುದನ್ನು ಪಠಾಣ್ ಹೇಳಿದ್ದಾರೆ.
5ನೇ ಕ್ರಮಾಂಕದಲ್ಲಿ ಆಲ್ರೌಂಡರ್ ದೀಪಕ್ ಹೂಡಾ ಅವರನ್ನು ಆಯ್ಕೆ ಮಾಡಿದ್ದು, ಈ ಮೂಲಕ ಹೆಚ್ಚುವರಿ ಬೌಲರ್ನನ್ನು ಬಳಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಹಾಗೆಯೇ 6ನೇ ಕ್ರಮಾಂಕದ ವೇಗದ ಬೌಲಿಂಗ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಸ್ಥಾನ ನೀಡಿದ್ದಾರೆ.
ಇನ್ನು ವಿಕೆಟ್ ಕೀಪರ್ ಸ್ಥಾನದಲ್ಲಿ ಇರ್ಫಾನ್ ಪಠಾಣ್ ದಿನೇಶ್ ಕಾರ್ತಿಕ್ ಅವರನ್ನು ಆಯ್ಕೆ ಮಾಡಿರುವುದು ವಿಶೇಷ. ಅಂದರೆ ರಿಷಭ್ ಪಂತ್ಗಿಂತ ಡಿಕೆ ಉತ್ತಮ ಆಟಗಾರ. ಅದರಲ್ಲೂ ಫಿನಿಶಿಂಗ್ ಪಾತ್ರಕ್ಕೆ ಸೂಕ್ತ ದಿನೇಶ್ ಕಾರ್ತಿಕ್. ಹೀಗಾಗಿ ಪಂತ್ ಅವರನ್ನು ಕೈ ಬಿಟ್ಟು ದಿನೇಶ್ ಕಾರ್ತಿಕ್ಗೆ ತಮ್ಮ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ನೀಡಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಮೂವರು ವೇಗಿಗಳು ಹಾಗೂ ಓರ್ವ ಸ್ಪಿನ್ನರ್ ಅನ್ನು ಆಯ್ಕೆ ಮಾಡಿದ್ದಾರೆ. ಅದರಂತೆ ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್ ಹಾಗೂ ಜಸ್ಪ್ರೀತ್ ಬುಮ್ರಾ ವೇಗಿಗಳಾಗಿ ಆಯ್ಕೆಯಾಗಿದ್ದಾರೆ. ಇನ್ನು ಸ್ಪಿನ್ನರ್ಗೆ ಯುಜ್ವೇಂದ್ರ ಚಹಾಲ್ಗೆ ಮಣೆಹಾಕಲಾಗಿದೆ. ಹೆಚ್ಚುವರಿ ಸ್ಪಿನ್ನರ್ ಆಗಿ ದೀಪಕ್ ಹೂಡಾ ಹಾಗೂ ವೇಗಿಯಾಗಿ ಹಾರ್ದಿಕ್ ಪಾಂಡ್ಯರನ್ನು ಬಳಸಿಕೊಳ್ಳಬಹುದು. ಈ ಮೂಲಕ 6 ಬೌಲರ್ಗಳನ್ನು ಬಳಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿರಲಿದೆ ಎಂದು ಇರ್ಫಾನ್ ಪಠಾಣ್ ಅಭಿಪ್ರಾಯಪಟ್ಟಿದ್ದಾರೆ.
ಇರ್ಫಾನ್ ಪಠಾಣ್ ಅವರ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ: