ಏಷ್ಯಾಕಪ್​ಗೆ ತಿಲಕ್​ ವರ್ಮಾ ವೈಲ್ಡ್​ಕಾರ್ಡ್ ಎಂಟ್ರಿ..?

Tilak Varma: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಪಾದಾರ್ಪಣೆ ಮಾಡಿದ್ದ ತಿಲಕ್ ವರ್ಮಾ 5 ಇನಿಂಗ್ಸ್​ಗಳಲ್ಲಿ ಒಂದು ಅರ್ಧಶತಕ ಮತ್ತು ಅಜೇಯ 49 ಸೇರಿದಂತೆ 57.33 ಸರಾಸರಿಯಲ್ಲಿ 173 ರನ್ ಕಲೆಹಾಕಿದ್ದಾರೆ. ಹಾಗೆಯೇ ಒಂದು ವಿಕೆಟ್ ಕೂಡ ಪಡೆದಿದ್ದಾರೆ.

ಏಷ್ಯಾಕಪ್​ಗೆ ತಿಲಕ್​ ವರ್ಮಾ ವೈಲ್ಡ್​ಕಾರ್ಡ್ ಎಂಟ್ರಿ..?
Tilak Varma
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 15, 2023 | 3:47 PM

ಏಷ್ಯಾಕಪ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಆಗಸ್ಟ್ 30 ರಿಂದ ಶುರುವಾಗಲಿರುವ ಏಷ್ಯನ್ ರಾಷ್ಟ್ರಗಳ ಕ್ರಿಕೆಟ್​ ಕದನಕ್ಕಾಗಿ ಈಗಾಗಲೇ ಬಾಂಗ್ಲಾದೇಶ್, ಪಾಕಿಸ್ತಾನ್ ಹಾಗೂ ನೇಪಾಳ ತಮ್ಮ ತಂಡಗಳನ್ನು ಘೋಷಿಸಿದೆ. ಇದಾಗ್ಯೂ ಬಿಸಿಸಿಐ ಆಯ್ಕೆ ಸಮಿತಿ ಭಾರತ ತಂಡದ ಅಂತಿಮ ಪಟ್ಟಿ ಸಿದ್ಧಪಡಿಸಿಲ್ಲ. ಇದಕ್ಕೆ ಮುಖ್ಯ ಕಾರಣ ಕೆಲ ಆಟಗಾರರ ಗಾಯದ ಸಮಸ್ಯೆ. ಇಲ್ಲಿ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಫಿಟ್​ನೆಸ್ ಟೆಸ್ಟ್ ರಿಪೋರ್ಟ್​ಗಾಗಿ ಆಯ್ಕೆ ಸಮಿತಿ ಕಾಯುತ್ತಿದೆ. ಈ ವರದಿ ಬಂದ ಬೆನ್ನಲ್ಲೇ ಟೀಮ್ ಇಂಡಿಯಾ ಆಯ್ಕೆ ನಡೆಯಲಿದೆ ಎಂದು ತಿಳಿದು ಬಂದಿದೆ.

ತಿಲಕ್ ವರ್ಮಾ ವೈಲ್ಡ್​ಕಾರ್ಡ್ ಎಂಟ್ರಿ?

ಮುಂಬರುವ ಏಷ್ಯಾಕಪ್​ಗಾಗಿ ಆಯ್ಕೆ ಮಾಡಲಾಗುವ ಟೀಮ್ ಇಂಡಿಯಾದಲ್ಲಿ ತಿಲಕ್ ವರ್ಮಾ ಕೂಡ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಇತ್ತೀಚೆಗೆ ಯುವ ಆಟಗಾರ ನೀಡಿದ ಅದ್ಭುತ ಪ್ರದರ್ಶನ.

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಪಾದಾರ್ಪಣೆ ಮಾಡಿದ್ದ ತಿಲಕ್ ವರ್ಮಾ 5 ಇನಿಂಗ್ಸ್​ಗಳಲ್ಲಿ ಒಂದು ಅರ್ಧಶತಕ ಮತ್ತು ಅಜೇಯ 49 ಸೇರಿದಂತೆ 57.33 ಸರಾಸರಿಯಲ್ಲಿ 173 ರನ್ ಕಲೆಹಾಕಿದ್ದಾರೆ. ಹಾಗೆಯೇ ಒಂದು ವಿಕೆಟ್ ಕೂಡ ಪಡೆದಿದ್ದಾರೆ.

ಅಂದರೆ ಅನುಭವಿ ಆಟಗಾರರೇ ವಿಫಲರಾಗಿದ್ದ ಪಿಚ್​ನಲ್ಲಿ ತಿಲಕ್ ವರ್ಮಾ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಏಕಾಂಗಿ ಹೋರಾಟ ನಡೆಸಿದ್ದರು. ಹೀಗಾಗಿಯೇ ಏಷ್ಯಾಕಪ್​ನಲ್ಲಿ ಎಡಗೈ ದಾಂಡಿಗನಾಗಿ ತಿಲಕ್ ವರ್ಮಾ ಅವರನ್ನು ಕಣಕ್ಕಿಳಿಸುವ ಬಗ್ಗೆ ಆಯ್ಕೆ ಸಮಿತಿ ಚಿಂತನೆ ನಡೆಸಿದೆ.

ಏಕೆಂದರೆ ಈ ಹಿಂದೆ ಮಧ್ಯಮ ಕ್ರಮಾಂಕದಲ್ಲಿ ಎಡಗೈ ದಾಂಡಿಗನಾಗಿ ಕಾಣಿಸಿಕೊಳ್ಳುತ್ತಿದ್ದ ರಿಷಭ್ ಪಂತ್ ಪ್ರಸ್ತುತ ತಂಡದಲ್ಲಿಲ್ಲ. ಹೀಗಾಗಿ ಆ ಸ್ಥಾನವನ್ನು ತಿಲಕ್ ವರ್ಮಾ ತುಂಬುವ ವಿಶ್ವಾಸ ಮೂಡಿಸಿದ್ದಾರೆ. ಇಲ್ಲಿ ಕೆಎಲ್ ರಾಹುಲ್ ಅವರನ್ನು ವಿಕೆಟ್ ಕೀಪರ್ ಆಗಿ ಕಣಕ್ಕಿಳಿಸಿದರೆ ತಿಲಕ್ ವರ್ಮಾ ಅವರನ್ನು ಆಲ್​ರೌಂಡರ್ ಆಗಿ ಬಳಸಿಕೊಳ್ಳಬಹುದು. ಹೀಗಾಗಿಯೇ ಇದೀಗ ತಿಲಕ್ ವರ್ಮಾ ಏಷ್ಯಾಕಪ್​ಗೆ ವೈಲ್ಡ್ ಕಾರ್ಡ್ ಎಂಟ್ರಿ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

ಅಗ್ರ ಕ್ರಮಾಂಕದಲ್ಲಿ ಎಡಗೈ ದಾಂಡಿಗರ ಕೊರತೆ:

ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಶುಭ್​ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಲಿದ್ದಾರೆ. ಹಾಗೆಯೇ ಶ್ರೇಯಸ್ ಅಯ್ಯರ್ ಕಂಬ್ಯಾಕ್ ಮಾಡಿದರೆ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಅಂದರೆ ಅಗ್ರ ಕ್ರಮಾಂಕದಲ್ಲಿ ಕಣಕ್ಕಿಳಿಯುವ ನಾಲ್ವರು ಬಲಗೈ ಬ್ಯಾಟರ್​ಗಳು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್ 5ನೇ ಸ್ಥಾನದಲ್ಲಿ ಆಡಿದರೆ, ಹಾರ್ದಿಕ್ ಪಾಂಡ್ಯ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಹುದು. ಅಲ್ಲದೆ 7ನೇ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ ಕಣಕ್ಕಿಳಿಯಲಿದ್ದಾರೆ.

ಇಲ್ಲಿ 7 ಕ್ರಮಾಂಕದವರೆಗೆ ಇರುವುದು ಏಕೈಕ ಎಡಗೈ ದಾಂಡಿಗ (ರವೀಂದ್ರ ಜಡೇಜಾ). ಹಾಗೆಯೇ ಇಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಆಲ್​ರೌಂಡರ್​ಗಳು. ಹೀಗಾಗಿ ಮೂವರು ಬೌಲರ್​ಗಳನ್ನು ಕಣಕ್ಕಿಳಿಸಿ ಐವರಿಂದ ಬೌಲಿಂಗ್​ ಮಾಡಿಸಬಹುದು.

ಈ ಮೂಲಕ ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ ಅವರನ್ನು ಎಡಗೈ ದಾಂಡಿಗನಾಗಿ ಕಣಕ್ಕಿಳಿಸಬಹುದು. ಅಲ್ಲದೆ 6ನೇ ಬೌಲರ್ ಆಗಿಯೂ ಬಳಸಿಕೊಳ್ಳಲು ಅವಕಾಶವಿದೆ. ಹೀಗಾಗಿ ಏಷ್ಯಾಕಪ್​ ಬಳಗದಲ್ಲಿ ತಿಲಕ್ ವರ್ಮಾ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ