ಆರಂಭಿಕರ ವೈಫಲ್ಯ: ಪವರ್​ಪ್ಲೇನಲ್ಲೇ ಪವರ್​ ಕಳೆದುಕೊಂಡ ಟೀಮ್ ಇಂಡಿಯಾ

India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಮೂರನೇ ಟಿ20 ಪಂದ್ಯ ಮಂಗಳವಾರ ನಡೆಯಲಿದೆ. ಗಯಾನಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆದ್ದರೆ ಸರಣಿ ಕೆರಿಬಿಯನ್ನರ ಪಾಲಾಗಲಿದೆ.

ಆರಂಭಿಕರ ವೈಫಲ್ಯ: ಪವರ್​ಪ್ಲೇನಲ್ಲೇ ಪವರ್​ ಕಳೆದುಕೊಂಡ ಟೀಮ್ ಇಂಡಿಯಾ
Shubman Gill-Ishan Kishan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 07, 2023 | 6:11 PM

India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ (Team India) ಮುಗ್ಗರಿಸಿದೆ. ಚುಟುಕು ಕ್ರಿಕೆಟ್​ನಲ್ಲಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರುವ ಭಾರತ ತಂಡವು ಕೆರಿಬಿಯನ್ ನಾಡಲ್ಲಿ ಕಮಾಲ್ ಮಾಡುವಲ್ಲಿ ಎಡವುತ್ತಿದೆ. ಅದರಲ್ಲೂ ಮೊದಲೆರಡು ಪಂದ್ಯಗಳಲ್ಲಿ ಭಾರತೀಯ ಬ್ಯಾಟರ್​ಗಳು ಕೈಕೊಟ್ಟಿದ್ದರು. ಇದಕ್ಕೆ ಸಾಕ್ಷಿಯೇ 2 ಪಂದ್ಯಗಳಲ್ಲೂ ಭಾರತೀಯ ಬ್ಯಾಟ್ಸ್​ಮನ್​ಗಳು ಕಲೆಹಾಕಿದ ಮೊತ್ತ.

ಮೊದಲ ಟಿ20 ಪಂದ್ಯದಲ್ಲಿ 145 ರನ್​ಗಳಿಸಿ 4 ರನ್​ಗಳಿಂದ ಸೋಲೊಪ್ಪಿಕೊಂಡಿದ್ದ ಟೀಮ್ ಇಂಡಿಯಾ, 2ನೇ ಪಂದ್ಯದಲ್ಲಿ ಕಲೆಹಾಕಿದ್ದು ಕೇವಲ 152 ರನ್​ಗಳು. ಅಂದರೆ ಅತಿರಥ ಮಹಾರಥರು ಎನಿಸಿಕೊಂಡಿರುವ ಬ್ಯಾಟರ್​ಗಳಿದ್ದರೂ ಸ್ಪರ್ಧಾತ್ಮಕ ಮೊತ್ತಗಳಿಸುವಲ್ಲಿ ಭಾರತ ತಂಡ ವಿಫಲವಾಗುತ್ತಿದೆ. ಇದಕ್ಕೆ ಒಂದು ಕಾರಣ ಉತ್ತಮ ಆರಂಭದ ವೈಫಲ್ಯತೆ.

ಆರಂಭಿಕರಿಬ್ಬರೂ ವಿಫಲ:

ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ವಿಫಲರಾಗುತ್ತಿದ್ದಾರೆ. ಇದಕ್ಕೆ ಸಾಕ್ಷಿಯೇ ಇಬ್ಬರಿಬ್ಬರ ಜೊತೆಯಾಟದ ಅಂಕಿ ಅಂಶಗಳು. ಅಂದರೆ ಕೊನೆಯ 8 ಇನಿಂಗ್ಸ್​ಗಳನ್ನು ತೆಗೆದುಕೊಂಡರೂ ಗಿಲ್ ಹಾಗೂ ಇಶಾನ್ ಮೊದಲ ವಿಕೆಟ್​ಗೆ ಕನಿಷ್ಠ 30 ರನ್​ಗಳ ಜೊತೆಯಾಟವಾಡಿಲ್ಲ.

27, 12, 3, 10, 17, 7, 5, 16…ಇದು ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಅವರ ಕೊನೆಯ 8 ಟಿ20 ಇನಿಂಗ್ಸ್​ಗಳ ಜೊತೆಯಾಟ. ಅಂದರೆ ಪವರ್​ಪ್ಲೇನಲ್ಲೇ ಟೀಮ್ ಇಂಡಿಯಾ ಮೊದಲ ವಿಕೆಟ್​ ಕಳೆದುಕೊಳ್ಳುತ್ತಿರುವುದು ಸ್ಪಷ್ಟ.

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ 6 ರನ್​ಗಳಿಸಿ ಔಟಾದರೆ, ಶುಭ್​ಮನ್ ಗಿಲ್ ಕೇವಲ 3 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು 2ನೇ ಟಿ20 ಪಂದ್ಯದಲ್ಲಿ ಶುಭ್​ಮನ್ ಗಿಲ್ 7 ರನ್​ಗಳಿಸಿ ವಿಕೆಟ್ ಒಪ್ಪಿಸಿದರೆ, ಇಶಾನ್ ಕಿಶನ್ 23 ಎಸೆತಗಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 27 ರನ್​ ಮಾತ್ರ.

ಇದನ್ನೂ ಓದಿ: 7 ವರ್ಷಗಳಲ್ಲಿ ಪಾಕ್​​ ತಂಡದಲ್ಲಿ ಮಹತ್ವದ ಬದಲಾವಣೆ: ಟೀಮ್ ಇಂಡಿಯಾದಲ್ಲಿದ್ದಾರೆ ಪಂಚ ಪಾಂಡವರು..!

ಅಂದರೆ ಪವರ್​ಪ್ಲೇನಲ್ಲಿ ಅಬ್ಬರಿಸುವಲ್ಲಿ ಟೀಮ್ ಇಂಡಿಯಾದ ಇಬ್ಬರು ಆರಂಭಿಕರುವ ವಿಫಲರಾಗುತ್ತಿದ್ದಾರೆ. ಅಷ್ಟೇ ಅಲ್ಲದೆ ಇಬ್ಬರು ಕೂಡ ಬೇಗನೆ ವಿಕೆಟ್ ಒಪ್ಪಿಸುತ್ತಿರುವುದು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ. ಇದಾಗ್ಯೂ ಮೂರನೇ ಟಿ20 ಪಂದ್ಯದಲ್ಲಾದರೂ ಇಶಾನ್ ಹಾಗೂ ಗಿಲ್ ಭಾರತ ತಂಡಕ್ಕೆ ಶುಭಾರಂಭ ಒದಗಿಸಲಿದ್ದಾರಾ ಕಾದು ನೋಡಬೇಕಿದೆ.

ಮಾಡು ಇಲ್ಲವೇ ಮಡಿ ಪಂದ್ಯ:

ಭಾರತ-ವೆಸ್ಟ್ ಇಂಡೀಸ್ ನಡುವಣ ಮೂರನೇ ಟಿ20 ಪಂದ್ಯ ಮಂಗಳವಾರ ನಡೆಯಲಿದೆ. ಗಯಾನಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆದ್ದರೆ ಸರಣಿ ಕೆರಿಬಿಯನ್ನರ ಪಾಲಾಗಲಿದೆ. ಹೀಗಾಗಿ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ