ICC Rankings: ಐಸಿಸಿ ರ‍್ಯಾಂಕಿಂಗ್‌ನಲ್ಲಿ ಬರೋಬ್ಬರಿ 117 ಸ್ಥಾನ ಜಿಗಿದ ಇಶಾನ್ ಕಿಶನ್! ಕೊಹ್ಲಿಗೂ ಲಾಭ

ICC Rankings: ಬುಧವಾರ ಬಿಡುಗಡೆಯಾದ ಇತ್ತೀಚಿನ ಏಕದಿನ ರ‍್ಯಾಂಕಿಂಗ್‌ನಲ್ಲಿ ಬರೋಬ್ಬರಿ 117 ಸ್ಥಾನಗಳ ಜಿಗಿತ ಕಂಡಿರುವ ಕಿಶನ್ 37ನೇ ಸ್ಥಾನಕ್ಕೆ ಬಂದು ತಲುಪಿದ್ದಾರೆ. ಈ ಪಂದ್ಯದಲ್ಲಿ ಇಶಾನ್ ಜೊತೆ ವಿರಾಟ್ ಕೊಹ್ಲಿ ಕೂಡ ಶತಕ ಬಾರಿಸಿದ್ದು, ಅವರಿಗೂ ರ‍್ಯಾಂಕಿಂಗ್‌ನಲ್ಲಿ ಮುಂಬಡ್ತಿ ಸಿಕ್ಕಿದೆ.

ICC Rankings: ಐಸಿಸಿ ರ‍್ಯಾಂಕಿಂಗ್‌ನಲ್ಲಿ ಬರೋಬ್ಬರಿ 117 ಸ್ಥಾನ ಜಿಗಿದ ಇಶಾನ್ ಕಿಶನ್! ಕೊಹ್ಲಿಗೂ ಲಾಭ
Ishan Kishan
Follow us
TV9 Web
| Updated By: ಪೃಥ್ವಿಶಂಕರ

Updated on:Dec 14, 2022 | 6:59 PM

ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ದಾಖಲೆಯ ದ್ವಿಶತಕ ಸಿಡಿಸಿದ್ದ ಯುವ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (Ishan Kishan) ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೆ ಏಕದಿನ ಕ್ರಿಕೆಟ್‌ ಇತಿಹಾಸಿದಲ್ಲಿ ಅತಿ ವೇಗದ ದ್ವಿಶತಕ ಸಿಡಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದ ಕಿಶನ್, ಇತ್ತೀಚಿನ ಐಸಿಸಿ ಶ್ರೇಯಾಂಕದಲ್ಲಿ (ICC rankings) ಈ ಅದ್ಭುತ ಇನ್ನಿಂಗ್ಸ್‌ನ ಲಾಭ ಪಡೆದಿದ್ದಾರೆ. ಬುಧವಾರ ಬಿಡುಗಡೆ ಮಾಡಿದ ಇತ್ತೀಚಿನ ಏಕದಿನ ರ‍್ಯಾಂಕಿಂಗ್‌ನಲ್ಲಿ ಬರೋಬ್ಬರಿ 117 ಸ್ಥಾನಗಳ ಜಿಗಿತ ಕಂಡಿರುವ ಕಿಶನ್ 37ನೇ ಸ್ಥಾನಕ್ಕೆ ಬಂದು ತಲುಪಿದ್ದಾರೆ. ಈ ಪಂದ್ಯದಲ್ಲಿ ಇಶಾನ್ ಜೊತೆ ವಿರಾಟ್ ಕೊಹ್ಲಿ (Virat Kohli) ಕೂಡ ಶತಕ ಬಾರಿಸಿದ್ದು ಅವರಿಗೂ ರ‍್ಯಾಂಕಿಂಗ್‌ನಲ್ಲಿ ಮುಂಬಡ್ತಿ ಸಿಕ್ಕಿದೆ.

ಇತ್ತೀಚಿನ ಐಸಿಸಿ ರ್ಯಾಂಕಿಂಗ್‌ನಲ್ಲಿ ವಿರಾಟ್ ಕೊಹ್ಲಿ ಎರಡು ಸ್ಥಾನ ಮೇಲೇರಿ ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ. ಮೂರು ವರ್ಷಗಳ ನಂತರ ಬಾಂಗ್ಲಾದೇಶದ ವಿರುದ್ಧ ಏಕದಿನ ಶತಕ ಸಿಡಿಸಿದ ಕೊಹ್ಲಿ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 72 ಶತಕಗಳನ್ನು ಪೂರೈಸಿದ್ದರು. ಈ ಶತಕಗಳ ವಿಚಾರದಲ್ಲಿ ಆಸೀಸ್ ಮಾಜಿ ನಾಯಕ ರಿಕಿ ಪಾಂಟಿಂಗ್​ರನ್ನು ಹಿಂದಿಕ್ಕಿದರು. ಶನಿವಾರ ಚಿತ್ತಗಾಂಗ್‌ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ 91 ಎಸೆತಗಳನ್ನು ಎದುರಿಸಿದ್ದ ಕೊಹ್ಲಿ 113 ರನ್‌ಗಳ ಇನಿಂಗ್ಸ್‌ ಆಡಿದ್ದರು. ಇದು ಆಗಸ್ಟ್ 2019 ರ ನಂತರ 50 ಓವರ್‌ಗಳ ಸ್ವರೂಪದಲ್ಲಿ ಕೊಹ್ಲಿಯ ಮೊದಲ ಶತಕವಾಗಿತ್ತು. ಕೊಹ್ಲಿಯೊಂದಿಗೆ ದಾಖಲೆಯ ಜೊತೆಯಾಟವನ್ನಾಡಿದ್ದ ಎಡಗೈ ಆರಂಭಿಕ ಕಿಶನ್ 131 ಎಸೆತಗಳಲ್ಲಿ 210 ರನ್‌ಗಳ ದಾಖಲೆಯ ಇನ್ನಿಂಗ್ಸ್ ಆಡಿದರು.

2. ಅಯ್ಯರ್​ಗೂ ಲಾಭ

ಈ ಇಬ್ಬರೊಂದಿಗೆ ಶ್ರೇಯಸ್ ಅಯ್ಯರ್ ಕೂಡ ಶ್ರೇಯಾಂಕದಲ್ಲಿ ಲಾಭ ಪಡೆದಿದ್ದು, ಢಾಕಾದಲ್ಲಿ ನಡೆದ ಸರಣಿಯ ಎರಡನೇ ಪಂದ್ಯದಲ್ಲಿ 82 ರನ್ ಗಳಿಸಿದ್ದರು. ಈ ಅರ್ಧಶತಕದಾಟದ ಲಾಭ ಪಡೆದಿರುವ ಅಯ್ಯರ್, 20 ನೇ ಸ್ಥಾನದಿಂದ ಜಿಗಿದು, 15 ನೇ ಸ್ಥಾನಕ್ಕೆ ಏರಿದ್ದಾರೆ. ಬೌಲರ್‌ಗಳ ಪೈಕಿ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಏಕದಿನ ರ‍್ಯಾಂಕಿಂಗ್‌ನಲ್ಲಿ ನಾಲ್ಕು ಸ್ಥಾನಗಳನ್ನು ಹೆಚ್ಚಿಸಿಕೊಂಡು 22ನೇ ಸ್ಥಾನಕ್ಕೆ ತಲುಪಿದ್ದಾರೆ. ಬಾಂಗ್ಲಾದೇಶದ ಸ್ಪಿನ್ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಒಂದು ಸ್ಥಾನ ಹೆಚ್ಚಿಸಿಕೊಂಡು ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ. ಆಲ್ ರೌಂಡರ್ ಪಟ್ಟಿಯಲ್ಲಿ ಬಾಂಗ್ಲಾದೇಶದ ಮೆಹೆದಿ ಹಸನ್ ಮಿರಾಜ್ ಮೂರು ಸ್ಥಾನ ಮೇಲೇರಿ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ.

IND vs BAN Day 1 Report: ಶತಕ ವಂಚಿತ ಪೂಜಾರ; ಶ್ರೇಯಸ್ ಮೇಲೆ ಭಾರತದ ಭರವಸೆ

3. ಟೆಸ್ಟ್ ಶ್ರೇಯಾಂಕದಲ್ಲಿ ಮಿಂಚಿದ ಲಬುಶೆನ್

ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಸರಣಿಯಲ್ಲಿ ಮೂರು ಶತಕ ಬಾರಿಸಿರುವ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಮಾರ್ನಸ್ ಲಬುಶೆನ್, ಟೆಸ್ಟ್ ಶ್ರೇಯಾಂಕದಲ್ಲಿ ವೃತ್ತಿಜೀವನದ ಅತ್ಯುತ್ತಮ 937 ರೇಟಿಂಗ್ ಅಂಕಗಳೊಂದಿಗೆ ಅಗ್ರ ಸ್ಥಾನವನ್ನು ಬಲಪಡಿಸಿಕೊಂಡಿದ್ದಾರೆ. ಕಳೆದ ವಾರ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಲಬುಶೆನ್, ದ್ವಿಶತಕ ಹಾಗೂ ಶತಕ ಬಾರಿಸಿದ್ದರು. ಟೆಸ್ಟ್ ಶ್ರೇಯಾಂಕದಲ್ಲಿ ಎರಡನೇ ಶ್ರೇಯಾಂಕದಲ್ಲಿರುವ ಸ್ಟೀವ್ ಸ್ಮಿತ್‌ಗಿಂತ ಲಬುಶೆನ್ ಈಗ 62 ರೇಟಿಂಗ್ ಪಾಯಿಂಟ್‌ಗಳ ಮುನ್ನಡೆ ಹೊಂದಿದ್ದಾರೆ.

ಇವರಲ್ಲದೆ ವಿಂಡೀಸ್ ವಿರುದ್ಧ 175 ಮತ್ತು 38 ರನ್ ಗಳಿಸಿದ್ದ ಟ್ರಾವಿಸ್ ಹೆಡ್, ಕೆರಿಬಿಯನ್ನರ ವಿರುದ್ಧ ಕಾಂಗರೂಗಳು ದಾಖಲೆಯ 419 ರನ್‌ಗಳ ಜಯ ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಐಸಿಸಿ ಶ್ರೇಯಾಂಕದಲ್ಲೂ ಲಾಭ ಪಡೆದಿರುವ ಹೆಡ್, ಟಾಪ್ 10 ರೊಳಗೆ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಭಾರತದ ಜೋಡಿ ರೋಹಿತ್ ಶರ್ಮಾ (10ನೇ ಸ್ಥಾನ) ಮತ್ತು ಕೊಹ್ಲಿ (12ನೇ ಸ್ಥಾನ)ಯನ್ನು ಹಿಂದಿಕ್ಕಿರುವ ಹೆಡ್, ಆರು ಸ್ಥಾನಗಳನ್ನು ಹೆಚ್ಚಿಸಿಕೊಂಡು ಏಳನೇ ಸ್ಥಾನಕ್ಕೆ ತಲುಪಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:54 pm, Wed, 14 December 22

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು