Ishan Kishan: ಭರ್ಜರಿ ಬ್ಯಾಟಿಂಗ್ ಮೂಲಕ ವಿಶೇಷ ದಾಖಲೆ ಬರೆದ ಇಶಾನ್ ಕಿಶನ್

| Updated By: ಝಾಹಿರ್ ಯೂಸುಫ್

Updated on: Jun 20, 2022 | 12:17 PM

Virat Kohli: ವಿರಾಟ್ ಕೊಹ್ಲಿ ಮಾರ್ಚ್ 2021 ರಲ್ಲಿ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆದ ಟಿ20 ಸರಣಿಯಲ್ಲಿ ಈ ಸಾಧನೆ ಮಾಡಿದ್ದರು. ಕೊಹ್ಲಿ 5 ಇನ್ನಿಂಗ್ಸ್‌ಗಳಲ್ಲಿ 116 ಸರಾಸರಿಯಲ್ಲಿ 231 ರನ್ ಗಳಿಸಿ ದಾಖಲೆ ಬರೆದಿದ್ದರು.

Ishan Kishan: ಭರ್ಜರಿ ಬ್ಯಾಟಿಂಗ್ ಮೂಲಕ ವಿಶೇಷ ದಾಖಲೆ ಬರೆದ ಇಶಾನ್ ಕಿಶನ್
Ishan Kishan
Follow us on

ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿಯು ಸಮಬಲದೊಂದಿಗೆ ಅಂತ್ಯಗೊಂಡಿದೆ. ಬೆಂಗಳೂರಿನಲ್ಲಿ ನಡೆದ ಕೊನೆಯ ಪಂದ್ಯದ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ರದ್ದುಗೊಳಿಸಲಾಯಿತು. ಇದಾಗ್ಯೂ ಈ ಪಂದ್ಯದಲ್ಲಿ ಇಶಾನ್ ಕಿಶನ್ (Ishan Kishan) ಬ್ಯಾಟ್ ಬೀಸಿದ್ದರು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಇಶಾನ್ ಕಿಶನ್ 7 ಎಸೆತಗಳಲ್ಲಿ 15 ರನ್​ ಕಲೆಹಾಕಿದ್ದರು. ಟೀಮ್ ಇಂಡಿಯಾ 3.3 ಓವರ್‌ಗಳಲ್ಲಿ 28 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದಾಗ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಿ, ಆ ಬಳಿಕ ರದ್ದು ಮಾಡಲಾಗಿತ್ತು. ವಿಶೇಷ ಎಂದರೆ ಈ ಪಂದ್ಯದಲ್ಲಿ 15 ರನ್ ಬಾರಿಸುವ ಮೂಲಕ ಇಶಾನ್ ಕಿಶನ್ ಟೀಮ್ ಇಂಡಿಯಾ ಪರ ವಿಶೇಷ ಸಾಧನೆ ಮಾಡಿದ್ದಾರೆ.

ಸೌತ್ ಆಫ್ರಿಕಾ ವಿರುದ್ದದ ಸರಣಿಯ 5 ಪಂದ್ಯಗಳಲ್ಲಿ ಇಶಾನ್ ಕಿಶನ್ 41ರ ಸರಾಸರಿಯಲ್ಲಿ 206 ರನ್ ಗಳಿಸಿದ್ದಾರೆ. ಈ ವೇಳೆ 2 ಅರ್ಧಶತಕಗಳನ್ನು ಬಾರಿಸಿದ್ದರು. ಈ ಮೂಲಕ ದ್ವಿಪಕ್ಷೀಯ ಟಿ20 ಸರಣಿಯೊಂದರಲ್ಲಿ 200 ಕ್ಕೂ ಅಧಿಕ ರನ್​ ಕಲೆಹಾಕಿದ 4ನೇ ಭಾರತೀಯ ಬ್ಯಾಟ್ಸ್​ಮನ್ ಎಂಬ ವಿಶೇಷ ದಾಖಲೆಯನ್ನು ಕಿಶನ್ ಬರೆದಿದ್ದಾರೆ.

ಇದಕ್ಕೂ ಮುನ್ನ ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಕೇವಲ 3 ಭಾರತೀಯ ಬ್ಯಾಟ್ಸ್‌ಮನ್‌ಗಳು ಮಾತ್ರ 200 ರನ್‌ಗಳನ್ನು ಕಲೆಹಾಕಿದ್ದರು. ವಿರಾಟ್ ಕೊಹ್ಲಿ ಮಾರ್ಚ್ 2021 ರಲ್ಲಿ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆದ ಟಿ20 ಸರಣಿಯಲ್ಲಿ ಈ ಸಾಧನೆ ಮಾಡಿದ್ದರು. ಕೊಹ್ಲಿ 5 ಇನ್ನಿಂಗ್ಸ್‌ಗಳಲ್ಲಿ 116 ಸರಾಸರಿಯಲ್ಲಿ 231 ರನ್ ಗಳಿಸಿ ದಾಖಲೆ ಬರೆದಿದ್ದರು. ಈ ವೇಳೆ ಕೊಹ್ಲಿಯ ಬ್ಯಾಟ್​ನಿಂದ 3 ಅರ್ಧಶತಕಗಳು ಮೂಡಿಬಂದಿತ್ತು.

ಇದನ್ನೂ ಓದಿ
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಹಾಗೆಯೇ 2020 ರ ಜನವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಸರಣಿಯ 5 ಪಂದ್ಯಗಳಲ್ಲಿ ಕೆಎಲ್ ರಾಹುಲ್ 224 ರನ್ ಗಳಿಸಿದ್ದರು. ಈ ವೇಳೆ ರಾಹುಲ್​ ಬ್ಯಾಟ್​ನಿಂದ 2 ಅರ್ಧಶತಕಗಳು ಮೂಡಿಬಂದಿತ್ತು. ಹಾಗೆಯೇ ಶ್ರೇಯಸ್ ಅಯ್ಯರ್ ಫೆಬ್ರವರಿ 2022 ರಲ್ಲಿ ಶ್ರೀಲಂಕಾ ವಿರುದ್ಧ ಆಡಿದ 3 ಪಂದ್ಯಗಳಲ್ಲಿ 204 ರನ್ ಗಳಿಸಿ ಈ ವಿಶೇಷ ಸಾಧನೆ ಮಾಡಿದ್ದರು. ಇದೀಗ ಇಶಾನ್ ಕಿಶನ್ ಕೂಡ ಒಂದೇ ಸರಣಿಯ ಮೂಲಕ 200 ಕ್ಕೂ ಅಧಿಕ ರನ್​ ಕಲೆಹಾಕಿ ಈ ವಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಇನ್ನು ಸೌತ್ ಆಫ್ರಿಕಾ ವಿರುದ್ದದ ದ್ವಿಪಕ್ಷೀಯ ಟಿ20 ಸರಣಿಯಲ್ಲಿ 200 ಕ್ಕೂ ಅಧಿಕ ರನ್​ ಕಲೆಹಾಕಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೂಡ ಇಶಾನ್ ಕಿಶನ್ ನಿರ್ಮಿಸಿದ್ದಾರೆ. ಒಟ್ಟಿನಲ್ಲಿ ಭರ್ಜರಿ ಫಾರ್ಮ್​​ನಲ್ಲಿರುವ ಇಶಾನ್ ಕಿಶನ್ ಸದ್ಯ ಐರ್ಲೆಂಡ್ ವಿರುದ್ದದ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ.

 

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.