AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI T20: ಪಂದ್ಯದ ಗತಿಯನ್ನೇ ಬದಲಾಯಿಸಿತು ಡೈವ್ ಬಿದ್ದು ಇಶಾನ್ ಕಿಶನ್ ಹಿಡಿದ ಈ ರೋಚಕ ಕ್ಯಾಚ್

Ishan Kishan Diving Catch Video: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಬ್ಯಾಟಿಂಗ್​ನಲ್ಲಿ ಭಾರತಕ್ಕೆ ಮಹತ್ವದ ಕೊಡುಗೆ ನೀಡದ ಇಶಾನ್ ಕಿಶನ್ ಮೂರನೇ ಟಿ20ಯಲ್ಲಿ ವಿಕೆಟ್ ಕೀಪಿಂಗ್ ಮಾಡಿ ನಿಕೋಲಸ್ ಪೂರನ್ ಅವರ ಕ್ಯಾಚ್ ಹಿಡಿದಿದ್ದು ಟೀಮ್ ಇಂಡಿಯಾ ಗೆಲುವಿಗೆ ಕಾರಣವಾಯಿತು.

IND vs WI T20: ಪಂದ್ಯದ ಗತಿಯನ್ನೇ ಬದಲಾಯಿಸಿತು ಡೈವ್ ಬಿದ್ದು ಇಶಾನ್ ಕಿಶನ್ ಹಿಡಿದ ಈ ರೋಚಕ ಕ್ಯಾಚ್
Ishan Kishan Catch IND vs WI 3rd T20
TV9 Web
| Updated By: Vinay Bhat|

Updated on:Feb 21, 2022 | 9:41 AM

Share

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಿಂದ ಹೊರಗುಳಿಯುವ ಭೀತಿಯಲ್ಲಿದ್ದ ಇಶಾನ್ ಕಿಶನ್​ಗೆ (Ishan Kishan) ರಿಷಭ್ ಪಂತ್ ಬಯೋ ಬಬಲ್ ತೊರೆದಿದ್ದು ವರದಾನವಾಯಿತು. ಓಪನರ್ ಆಗಿ ಮತ್ತೆ ಕಣಕ್ಕಿಳಿದ ಕಿಶನ್ 31 ಎಸೆತಗಳಲ್ಲಿ 34 ರನ್ ಗಳಿಸಿ ಔಟಾದರು. ಈ ಸರಣಿಯಲ್ಲಿ ಬ್ಯಾಟಿಂಗ್​ನಲ್ಲಿ ತಂಡಕ್ಕೆ ಮಹತ್ವದ ಕೊಡುಗೆ ನೀಡದ ಕಿಶನ್ ಅಂತಿಮ ಟಿ20 ಯಲ್ಲಿ ವಿಕೆಟ್ ಕೀಪಿಂಗ್ ಮಾಡಿ ಆ ಒಂದು ಕ್ಯಾಚ್ ಹಿಡಿದಿದ್ದು ಟೀಮ್ ಇಂಡಿಯಾ ಗೆಲುವಿಗೆ ಕಾರಣವಾಯಿತು. ಹೌದು, ರೋಹಿತ್ (Rohit Sharma) ಪಡೆ ನೀಡಿದ್ದ 185 ರನ್​ಗಳ ಕಠಿಣ ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್​ಗೆ ಆರಂಭದಲ್ಲೇ ದೀಪಕ್ ಚಹಾರ್ ಶಾಕ್ ನೀಡಿದರು. ಹೀಗಿರುವಾಗ ನಿಕೋಲಸ್ ಪೂರನ್ (Nicholas Pooran) ಏಕಾಂಗಿ ಹೋರಾಟ ಶುರು ಮಾಡಿದರು. ಒಂದು ಹಂತದಲ್ಲಿ ಪೂರನ್ ಜತೆಗೂಡಿದ ರೋವ್ಮನ್ ಪೊವೆಲ್ ಭಾರತದ ಬೌಲರ್‌ಗಳನ್ನು ಕಾಡಿದರು. ಇವರನ್ನು ಔಟ್ ಮಾಡುವುದೇ ಭಾರತಕ್ಕೆ ದೊಡ್ಡ ಸವಾಲಾಯಿತು. ಇವರಿಬ್ಬರು ಕ್ರೀಸ್​ನಲ್ಲಿ ಇದ್ದಿದ್ದರೆ ವೆಸ್ಟ್ ಇಂಡೀಸ್​ಗೆ ಗೆಲುವು ಕಟ್ಟಿಟ್ಟ ಬುತ್ತಿ ಎಂಬುದು ಖಚಿತವಾಗಿತ್ತು.

ಕೇವಲ 4 ಓವರ್​ಗಳಲ್ಲಿ ಈ ಜೋಡಿ 47 ರನ್ ಕಲೆಹಾಕಿತು. ಆದರೆ, ಹರ್ಷಲ್ ಪಟೇಲ್ ತಮ್ಮ ಸ್ಲೋವರ್ ಬಾಲ್ ಮೂಲಕ 14 ಎಸೆತಗಳಲ್ಲಿ 25 ರನ್ ಸಿಡಿಸಿದ್ದ ರೋವ್ಮನ್ ಪೊವೆಲ್​ರನ್ನು ಪೆವಿಲಿಯನ್​ಗೆ ಅಟ್ಟುವಲ್ಲಿ ಯಶಸ್ವಿಯಾದರು. ಆದರೆ, ಪೂರನ್ ಅರ್ಧಶತಕ ಬಾರಿಸಿ ತಮ್ಮದೇ ಶೈಲಿಯ ಬಿರುಸಿನ ಆಟವಾಡುತ್ತಿದ್ದರು. ಇವರ ಆಟಕ್ಕೆ ಬ್ರೇಕ್ ಹಾಕಿದ್ದು ಶಾರ್ದೂಲ್ ಥಾಕೂರ್ ಹಾಗೂ ಇಶಾನ್ ಕಿಶನ್. 18ನೇ ಓವರ್​ನಲ್ಲಿ ಶಾರ್ದೂಲ್ ಅವರು ಪೂರನ್​ಗೆ ವೈಡ್ ಔಟ್​ಸೈಡ್ ಮೂಲಕ ಸ್ಲೋವರ್ ಬಾಲ್ ಎಸೆದರು. ಇದನ್ನು ಸಿಕ್ಸ್​ಗೆ ಅಟ್ಟಲು ಪೂರನ್ ಯತ್ನಿಸಿದರು.

ಆದರೆ, ಚೆಂಡು ಅಂದುಕೊಂಡ ರೀತಿಯಲ್ಲಿ ಬ್ಯಾಟ್​ಗೆ ತಾಗದೇ ಗಾಳಿಯಲ್ಲಿ ಮೇಲೆ ಹೋಯಿತು. ಅತ್ತ ವಿಕೆಟ್ ಹಿಂಬದಿಯಿಂದ ಇಶಾನ್ ಕಿಶನ್ ಓಡಿ ಬಂದು ಅಚ್ಚರಿ ಎಂಬಂತೆ ಡೈವ್ ಬಿದ್ದು ರೋಚಕ ಕ್ಯಾಚ್ ಹಿಡಿದರು. ಈ ಮೂಲಕ ಪೂರನ್ ಅವರು 47 ಎಸೆತಗಳಲ್ಲಿ 61 ರನ್ ಚಚ್ಚಿ ಔಟಾದರು. ಇದು ಪಂದ್ಯದ ಸ್ಥಿತಿಯನ್ನೇ ಬದಲಾಯಿಸಿತು. ಕಿಶನ್ ಹಿಡಿದ ಈ ಒಂದು ಕ್ಯಾಚ್​ನಿಂದ ಮ್ಯಾಚ್ ಸಂಪೂರ್ಣವಾಗಿ ಟೀಮ್ ಇಂಡಿಯಾ ಕಡೆ ವಾಲಿತು. ಅಂತಿಮವಾಗಿ ವಿಂಡೀಸ್ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಲಕಷ್ಟೇ ಶಕ್ತವಾಗಿ ಸೋಲು ಕಂಡಿತು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಭಾರತ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ಸೂರ್ಯಕುಮಾರ್ ಯಾದವ್ (65ರನ್, 31 ಎಸೆತ, 1 ಬೌಂಡರಿ, 7 ಸಿಕ್ಸರ್) ಹಾಗೂ ವೆಂಕಟೇಶ್ ಅಯ್ಯರ್ (35*ರನ್, 19 ಎಸೆತ, 4 ಬೌಂಡರಿ, 2 ಸಿಕ್ಸರ್) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 5 ವಿಕೆಟ್‌ಗೆ 184 ರನ್ ಪೇರಿಸಿತು. ರೋಹಿತ್ ಪಡೆ ಈ ಪಂದ್ಯದಲ್ಲಿ 17 ರನ್‌ಗಳಿಂದ ಗೆದ್ದು ಬಿಗಿತು. ಈ ಮೂಲಕ ಚುಟುಕು ಕ್ರಿಕೆಟ್ ಸರಣಿಯಲ್ಲಿ ಭಾರತ 3-0 ಯಿಂದ ಕ್ಲೀನ್‌ಸ್ವೀಪ್ ಸಾಧಿಸಿತು.

Rohit Sharma: ಪಂದ್ಯ ಮುಗಿದ ಬಳಿಕ ಖುಷಿಯಲ್ಲಿ ರೋಹಿತ್ ಶರ್ಮಾ ಆಡಿದ ಮಾತು ನೀವೇ ಕೇಳಿ

Rohit Sharma: ಇತಿಹಾಸ ರಚಿಸಿದ ರೋಹಿತ್ ಶರ್ಮಾ: ಟಿ20 ಕ್ರಿಕೆಟ್​ನಲ್ಲಿ ಭಾರತ ಈಗ ನಂಬರ್ ಒನ್ ತಂಡ

Published On - 9:29 am, Mon, 21 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ