ಇಶಾನ್ ಕಿಶನ್ – ಹಾರ್ದಿಕ್ ಪಾಂಡ್ಯ ಅಬ್ಬರಕ್ಕೆ ಹಲವು ದಾಖಲೆಗಳು ನಿರ್ನಾಮ
Ishan Kishan-Hardik Pandya: ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾ ಪರ 5ನೇ ವಿಕೆಟ್ಗೆ ಬರೋಬ್ಬರಿ 138 ರನ್ಗಳ ಜೊತೆಯಾಟವಾಡಿದರು. ಈ ಜೊತೆಯಾಟದೊಂದಿಗೆ ಈ ಜೋಡಿಯು ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಏಷ್ಯಾಕಪ್ನ ಮೂರನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಇಶಾನ್ ಕಿಶನ್ (Ishan Kishan) ಹಾಗೂ ಹಾರ್ದಿಕ್ ಪಾಂಡ್ಯ (Hardik Pandya) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಪಾಕಿಸ್ತಾನ್ ವಿರುದ್ಧದ ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ 81 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ 82 ರನ್ ಬಾರಿಸಿದ್ದರು. ಇನ್ನು 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಹಾರ್ದಿಕ್ ಪಾಂಡ್ಯ 90 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 87 ರನ್ ಚಚ್ಚಿದರು.
ಈ ಮೂಲಕ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾ ಪರ 5ನೇ ವಿಕೆಟ್ಗೆ ಬರೋಬ್ಬರಿ 138 ರನ್ಗಳ ಜೊತೆಯಾಟವಾಡಿದರು. ಈ ಜೊತೆಯಾಟದೊಂದಿಗೆ ಈ ಜೋಡಿಯು ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
- ಈ ಪಂದ್ಯದಲ್ಲಿ 82 ರನ್ ಬಾರಿಸುವ ಮೂಲಕ ಏಷ್ಯಾಕಪ್ನಲ್ಲಿ ಪಾಕಿಸ್ತಾನ್ ವಿರುದ್ಧ ಅತ್ಯಧಿಕ ರನ್ ಬಾರಿಸಿದ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಎಂಬ ದಾಖಲೆ ಇಶಾನ್ ಕಿಶನ್ ಪಾಲಾಗಲಿದೆ. ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಧೋನಿ 2008 ರ ಏಷ್ಯಾಕಪ್ನಲ್ಲಿ ಪಾಕ್ ವಿರುದ್ಧ 72 ರನ್ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.
- 138 ರನ್ಗಳ ಜೊತೆಯಾಟದೊಂದಿಗೆ ಏಷ್ಯಾಕಪ್ ಇತಿಹಾಸದಲ್ಲೇ ಭಾರತದ ಪರ 5ನೇ ವಿಕೆಟ್ಗೆ ಗರಿಷ್ಠ ರನ್ ಪೇರಿಸಿದ ಜೋಡಿ ಎಂಬ ದಾಖಲೆ ಹಾರ್ದಿಕ್ ಪಾಂಡ್ಯ-ಇಶಾನ್ ಕಿಶನ್ ಪಾಲಾಗಿದೆ. 2004 ರಲ್ಲಿ ಶ್ರೀಲಂಕಾ ವಿರುದ್ಧ ರಾಹುಲ್ ದ್ರಾವಿಡ್ – ಯುವರಾಜ್ ಸಿಂಗ್ 133 ರನ್ಗಳ ಜೊತೆಯಾಟವಾಡಿರುವುದು ಇದುವರೆಗಿನ ದಾಖಲೆಯಾಗಿತ್ತು.
- ಈ ಪಂದ್ಯದಲ್ಲಿ ಅರ್ಧಶತಕ ಪೂರೈಸುವ ಮೂಲಕ ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್ನಲ್ಲಿ ಸತತ 4 ಹಾಫ್ ಸೆಂಚುರಿ ಸಿಡಿಸಿದ 2ನೇ ವಿಕೆಟ್ ಕೀಪರ್ ಎಂಬ ದಾಖಲೆಯನ್ನು ಇಶಾನ್ ಕಿಶನ್ ತಮ್ಮದಾಗಿಸಿಕೊಂಡಿದ್ದರು. ಇದಕ್ಕೂ ಮುನ್ನ 2011 ರಲ್ಲಿ ಧೋನಿ ಈ ಸಾಧನೆ ಮಾಡಿದ್ದರು.
- ಪಾಕಿಸ್ತಾನ್ ವಿರುದ್ಧ ಐದನೇ ವಿಕೆಟ್ಗೆ ಅತ್ಯಧಿಕ ರನ್ಗಳ ಜೊತೆಯಾಟವಾಡಿದ ದಾಖಲೆ ಕೂಡ ಇದೀಗ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ ಪಾಲಾಗಿದೆ. 2005 ರಲ್ಲಿ ರಾಹುಲ್ ದ್ರಾವಿಡ್ ಹಾಗೂ ಮೊಹಮ್ಮದ್ ಕೈಫ್ ಪಾಕ್ ವಿರುದ್ದ 5ನೇ ವಿಕೆಟ್ಗೆ 135 ರನ್ ಪೇರಿಸಿದ್ದರು. ಇದೀಗ 138 ರನ್ಗಳ ಜೊತೆಯಾಟದೊಂದಿಗೆ ಪಾಂಡ್ಯ-ಕಿಶನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಇದನ್ನೂ ಓದಿ: ಏಷ್ಯಾಕಪ್ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1
- ಈ ಪಂದ್ಯದಲ್ಲಿ 81 ರನ್ ಬಾರಿಸುವ ಮೂಲಕ ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್ನಲ್ಲಿ ಸತತ 4 ಅರ್ಧಶತಕಗಳನ್ನು ಬಾರಿಸಿದ ಭಾರತದ ಅತ್ಯಂತ ಕಿರಿಯ ವಿಕೆಟ್ ಕೀಪರ್ ಎಂಬ ದಾಖಲೆಯನ್ನೂ ಕೂಡ ಇಶಾನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ 30ನೇ ವಯಸ್ಸಿನಲ್ಲಿ ಸತತ 4 ಅರ್ಧಶತಕ ಬಾರಿಸಿದ ಧೋನಿ ಹೆಸರಿನಲ್ಲಿತ್ತು. ಇದೀಗ 25 ವರ್ಷದ ಇಶಾನ್ ಕಿಶನ್ ಸತತ ನಾಲ್ಕು ಹಾಫ್ ಸೆಂಚುರಿಸಿ ಹೊಸನ ಇತಿಹಾಸ ನಿರ್ಮಿಸಿದ್ದಾರೆ. ಇಶಾನ್ ಕಿಶನ್ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಹ್ಯಾಟ್ರಿಕ್ ಹಾಫ್ ಸೆಂಚುರಿ ಸಿಡಿಸಿದ್ದರು. ಇದೀಗ ಏಷ್ಯಾಕಪ್ನಲ್ಲೂ ಅರ್ಧಶತಕ ಬಾರಿಸಿ ಈ ವಿಶೇಷ ಸಾಧನೆ ಮಾಡಿದ್ದಾರೆ.
Published On - 10:52 pm, Sat, 2 September 23