Ishan Kishan: ಸೆಹ್ವಾಗ್ ದಾಖಲೆ ಸರಿಗಟ್ಟಿದ ಇಶಾನ್ ಕಿಶನ್

IPL 2022: 2020 ರಿಂದ ಮುಂಬೈ ಇಂಡಿಯನ್ಸ್ ಪರ ಆರಂಭಿಕನಾಗಿ ಕಾಣಿಸಿಕೊಳ್ಳುತ್ತಿರುವ ಇಶಾನ್ ಕಿಶನ್ ಸತತ ಐದು ಇನಿಂಗ್ಸ್​ಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ.

Ishan Kishan: ಸೆಹ್ವಾಗ್ ದಾಖಲೆ ಸರಿಗಟ್ಟಿದ ಇಶಾನ್ ಕಿಶನ್
Ishan Kishan
Follow us
TV9 Web
| Updated By: ಝಾಹಿರ್ ಯೂಸುಫ್

Updated on:Apr 03, 2022 | 2:59 PM

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (IPL 2022) ಅತ್ಯಂತ ಯಶಸ್ವಿ ತಂಡವಾದ ಮುಂಬೈ ಇಂಡಿಯನ್ಸ್‌ (Mumbai Indians) ಈ ಬಾರಿ ಉತ್ತಮ ಆರಂಭ ಪಡೆದಿಲ್ಲ. ಕಳೆದ 9 ಸೀಸನ್‌ಗಳಂತೆ, IPL 2022 ರಲ್ಲೂ ಮುಂಬೈ ಇಂಡಿಯನ್ಸ್​ ತನ್ನ ಮೊದಲ ಪಂದ್ಯದಲ್ಲಿ ಸೋಲನುಭವಿಸಿದೆ. ಹಿಂದಿನ ವರ್ಷಗಳಲ್ಲಿ, ಮೊದಲ ಸೋಲಿನ ನಂತರ ತಂಡವು ಗೆಲುವಿನ ಹಾದಿಗೆ ಮರಳುತ್ತಿತ್ತು. ಆದರೆ ಈ ಬಾರಿ ರೋಹಿತ್ ಶರ್ಮಾ (Rohit Sharma) ಪಡೆ ಮೊದಲ ಎರಡು ಪಂದ್ಯಗಳಲ್ಲಿ ಪರಾಜಯಗೊಂಡಿದೆ. ತಂಡದ ಒಟ್ಟಾರೆ ಪ್ರದರ್ಶನ ಕಳವಳವನ್ನು ಉಂಟುಮಾಡಿದರೂ, ಆರಂಭಿಕ ಆಟಗಾರ ಇಶಾನ್ ಕಿಶನ್ (Ishan Kishan) ಮಾತ್ರ ಉತ್ತಮ ಪ್ರದರ್ಶನ ಮುಂದುವರೆಸಿದ್ದಾರೆ. ಎರಡೂ ಪಂದ್ಯಗಳಲ್ಲೂ ಅರ್ಧಶತಕ ಬಾರಿಸುವ ಮೂಲಕ ವಿಶೇಷ ದಾಖಲೆಯನ್ನೂ ಕೂಡ ಬರೆದಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ದ 54 ರನ್​ ಬಾರಿಸುವ ಮೂಲಕ ಐಪಿಎಲ್​ನಲ್ಲಿ ಸತತ ಐದು ಅರ್ಧಶತಕ ಬಾರಿಸಿದ 4ನೇ ಆರಂಭಿಕ ಆಟಗಾರ ಎಂಬ ದಾಖಲೆ ಬರೆದರು.

ಅಷ್ಟೇ ಅಲ್ಲದೆ ಐಪಿಎಲ್​ನಲ್ಲಿ ಈ ಸಾಧನೆ ಮಾಡಿದ ಎರಡನೇ ಭಾರತೀಯ ಬ್ಯಾಟ್ಸ್​ಮನ್ ಎನಿಸಿಕೊಂಡರು. ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಸತತ ಐದು ಅರ್ಧಶತಕ ಬಾರಿಸುವ ಮೂಲಕ ವೀರೇಂದ್ರ ಸೆಹ್ವಾಗ್ ದಾಖಲೆ ಬರೆದಿದ್ದರು. ಸೆಹ್ವಾಗ್ 2012 ರಲ್ಲಿ ಈ ಸಾಧನೆ ಮಾಡುವ ಮೂಲಕ ಹೊಸ ಇತಿಹಾಸ ಬರೆದಿದ್ದರು. ಇದಾದ ಬಳಿಕ 2018 ರಲ್ಲಿ ಜೋಸ್ ಬಟ್ಲರ್ ಸತತ ಐದು ಅರ್ಧಶತಕ ಬಾರಿಸಿ ಈ ದಾಖಲೆಯನ್ನು ಸರಿಗಟ್ಟಿದ್ದರು.

2019 ರಲ್ಲಿ ಎಸ್​ಆರ್​ಹೆಚ್​ ತಂಡದ ಆರಂಭಿಕರಾಗಿದ್ದ ಡೇವಿಡ್ ವಾರ್ನರ್ ಕೂಡ ಬ್ಯಾಕ್ ಟು ಬ್ಯಾಕ್ 5 ಹಾಫ್ ಸೆಂಚುರಿ ಸಿಡಿಸುವ ಮೂಲಕ ಈ ವಿಶೇಷ ದಾಖಲೆಯ ಪಾಲುದಾರರಾಗಿದ್ದರು. ಇದೀಗ ಇಶಾನ್ ಕಿಶನ್ ಕೂಡ ಆರಂಭಿಕನಾಗಿ ಸತತ ಐದು ಅರ್ಧಶತಕ ಬಾರಿಸಿ ಈ ದಾಖಲೆ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

2020 ರಿಂದ ಮುಂಬೈ ಇಂಡಿಯನ್ಸ್ ಪರ ಆರಂಭಿಕನಾಗಿ ಕಾಣಿಸಿಕೊಳ್ಳುತ್ತಿರುವ ಇಶಾನ್ ಕಿಶನ್ ಸತತ ಐದು ಇನಿಂಗ್ಸ್​ಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಈ ಹಿಂದೆ ಆರಂಭಿಕನಾಗಿ 72 (ಅಜೇಯ) , 50 (ಅಜೇಯ) ಮತ್ತು 84  ಇನ್ನಿಂಗ್ಸ್‌ಗಳನ್ನು ಆಡಿರುವ ಕಿಶನ್, ಈ ಬಾರಿ ಮೊದಲೆರಡು ಪಂದ್ಯಗಳಲ್ಲಿ 81 ಹಾಗೂ 54 ರನ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ 10 ವರ್ಷಗಳ ಹಿಂದೆ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಆರಂಭಿಕನಾಗಿ ವೀರೇಂದ್ರ ಸೆಹ್ವಾಗ್ ಬರೆದ ದಾಖಲೆಯನ್ನು ಇಶಾನ್ ಕಿಶನ್ ಸರಿಗಟ್ಟಿದ್ದಾರೆ.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

Published On - 2:54 pm, Sun, 3 April 22

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?