ದುಲೀಪ್ ಟ್ರೋಫಿ ಪಂದ್ಯದಿಂದ ಇಶಾನ್ ಕಿಶನ್ ಔಟ್: ಸಂಜು ಸ್ಯಾಮ್ಸನ್​ಗೆ ಬುಲಾವ್ ಸಾಧ್ಯತೆ

Duleep Trophy 2024: ದೇಶೀಯ ಅಂಗಳದ ಟೆಸ್ಟ್ ಟೂರ್ನಿ ದುಲೀಪ್ ಟ್ರೋಫಿಯು ಸೆಪ್ಟೆಂಬರ್ 5 ರಿಂದ ಶುರುವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 4 ತಂಡಗಳು ಕಣಕ್ಕಿಳಿಯಲಿದೆ. ಈ ತಂಡಗಳಲ್ಲಿ ಭಾರತ ಟೆಸ್ಟ್ ತಂಡದಲ್ಲಿರುವ ಆಟಗಾರರು ಕಾಣಿಸಿಕೊಳ್ಳಲಿರುವುದು ವಿಶೇಷ. ಆದರೀಗ ಟೀಮ್ ಡಿ ತಂಡದಿಂದ ವಿಕೆಟ್ ಕೀಪರ್ ಇಶಾನ್ ಕಿಶನ್ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ದುಲೀಪ್ ಟ್ರೋಫಿ ಪಂದ್ಯದಿಂದ ಇಶಾನ್ ಕಿಶನ್ ಔಟ್: ಸಂಜು ಸ್ಯಾಮ್ಸನ್​ಗೆ ಬುಲಾವ್ ಸಾಧ್ಯತೆ
Ishan Kishan
Follow us
ಝಾಹಿರ್ ಯೂಸುಫ್
|

Updated on:Sep 04, 2024 | 12:23 PM

ಸೆಪ್ಟೆಂಬರ್​ 5 ರಿಂದ ಶುರುವಾಗಲಿರುವ ದುಲೀಪ್ ಟ್ರೋಫಿಯ ಮೊದಲ ಪಂದ್ಯಕ್ಕೆ ಇಶಾನ್ ಕಿಶನ್ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಚೆನ್ನೈನಲ್ಲಿ ನಡೆಯುತ್ತಿರುವ ಬುಚಿ ಬಾಬು ಪಂದ್ಯಾವಳಿಯಲ್ಲಿ ಜಾರ್ಖಂಡ್ ಪರ ಕಣಕ್ಕಿಳಿದಿರುವ ಕಿಶನ್ ಗಾಯಗೊಂಡಿದ್ದು, ಹೀಗಾಗಿ ದುಲೀಪ್ ಟ್ರೋಫಿಯ ಆರಂಭಿಕ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ. ಅಲ್ಲದೆ ಇಶಾನ್ ಕಿಶನ್ ಬದಲಿಯಾಗಿ ಸಂಜು ಸ್ಯಾಮ್ಸನ್ ಆಯ್ಕೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಾರಿ ದುಲೀಪ್ ಟ್ರೋಫಿ ಟೂರ್ನಿಗೆ ಹೆಸರಿಲಾದ 4 ತಂಡಗಳಲ್ಲಿ ಇಶಾನ್ ಕಿಶನ್ ಟೀಮ್ ಡಿ ನಲ್ಲಿ ಸ್ಥಾನ ಪಡೆದಿದ್ದರು. ಶ್ರೇಯಸ್ ಅಯ್ಯರ್ ನಾಯಕತ್ವದ ಈ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಇಶಾನ್ ಆಯ್ಕೆಯಾಗಿದ್ದರು. ಇದೀಗ ಗಾಯಗೊಂಡಿರುವ ಕಾರಣ ಸೆಪ್ಟೆಂಬರ್ 5 ರಿಂದ ಶುರುವಾಗಲಿರುವ ಮೊದಲ ಪಂದ್ಯಕ್ಕೆ ಅವರು ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ.

ಅತ್ತ ದುಲೀಪ್ ಟ್ರೋಫಿ ಟೂರ್ನಿಗೆ ಆಯ್ಕೆಯಾಗದಿದ್ದ ಕೇರಳದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್​ಗೆ ಇದೀಗ ಬದಲಿ ಆಟಗಾರನಾಗಿ ಬುಲಾವ್ ಸಿಗುವ  ಸಾಧ್ಯತೆಯಿದೆ. ಅದರಂತೆ ಸೆಪ್ಟೆಂಬರ್ 5 ರಿಂದ ಅನಂತಪುರದ ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಟೀಮ್ ಸಿ ಮತ್ತು ಟೀಮ್ ಡಿ ನಡುವಣ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಕಾಣಿಸಿಕೊಳ್ಳಬಹುದು.

ದುಲೀಪ್ ಟ್ರೋಫಿ ತಂಡಗಳು:

ಟೀಮ್ A: ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲ್ದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ, ಶಾಶ್ವತ್ ರಾವತ್ .

ಟೀಮ್ B: ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಮುಶೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಹರ್, ಆರ್ ಸಾಯಿ ಕಿಶೋರ್, ಮೋಹಿತ್ ಅವಸ್ತಿ, ಎನ್ ಜಗದೀಶನ್ (ವಿಕೆಟ್ ಕೀಪರ್)

ಟೀಮ್ C: ರುತುರಾಜ್ ಗಾಯಕ್ವಾಡ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮಾರ್ಕಾಂಡೆ , ಸಂದೀಪ್ ವಾರಿಯರ್, ಗೌರವ್ ಯಾದವ್.

ಇದನ್ನೂ ಓದಿ: IPL 2025: ಕುತೂಹಲ ಮೂಡಿಸಿದ ಕೆಎಲ್ ರಾಹುಲ್ ನಡೆ..!

ಟೀಮ್ D: ಶ್ರೇಯಸ್ ಅಯ್ಯರ್ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತ, ಕೆಎಸ್ ಭರತ್ (ವಿಕೆಟ್ ಕೀಪರ್) , ಸೌರಭ್ ಕುಮಾರ್, ಇಶಾನ್ ಕಿಶನ್ (ಗಾಯಾಳು).

Published On - 12:22 pm, Wed, 4 September 24