Team India: ಇಶಾನ್ ಕಿಶನ್-ಶ್ರೇಯಸ್ ಅಯ್ಯರ್ ತಂಡದಿಂದ ಹೊರಬೀಳಲು ಇದಂತೆ ಕಾರಣ..!

Team India: ಇಶಾನ್ ಕಿಶನ್ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು. ಆದರೆ ಟೆಸ್ಟ್ ಸರಣಿಗೂ ಮುನ್ನ ಅವರು ಟೀಮ್ ಇಂಡಿಯಾದಿಂದ ಹೊರಬಂದಿದ್ದರು. ಮಾನಸಿಕ ಒತ್ತಡದ ಕಾರಣದಿಂದಾಗಿ ಇಶಾನ್ ವಿಶ್ರಾಂತಿ ಬಯಸಿದ್ದರು. ಅದರಂತೆ ಅವರನ್ನು ಟೆಸ್ಟ್ ತಂಡದಿಂದ ಕೈ ಬಿಡಲಾಗಿತ್ತು.

Team India: ಇಶಾನ್ ಕಿಶನ್-ಶ್ರೇಯಸ್ ಅಯ್ಯರ್ ತಂಡದಿಂದ ಹೊರಬೀಳಲು ಇದಂತೆ ಕಾರಣ..!
Ishan Kishan - Shreyas Iyer
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 10, 2024 | 2:53 PM

ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ಪ್ರಕಟಿಸಲಾದ ಟೀಮ್ ಇಂಡಿಯಾದಲ್ಲಿ ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ (Ishan Kishan) ಹಾಗೂ ಶ್ರೇಯಸ್ ಅಯ್ಯರ್ (Shreyas Iyer) ಸ್ಥಾನ ಪಡೆದಿಲ್ಲ. ಇದರ ಬೆನ್ನಲ್ಲೇ ಚುಟುಕು ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರೂ ಈ ಇಬ್ಬರನ್ನು ಆಯ್ಕೆಗೆ ಪರಿಗಣಿಸದಿರಲು ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟುಕೊಂಡಿತು. ಇದೀಗ ಈ ಪ್ರಶ್ನೆಗಳಿಗೆ ಉತ್ತರಗಳು ಸಿಗುತ್ತಿವೆ.

ಇಶಾನ್ ಕಿಶನ್ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು. ಆದರೆ ಟೆಸ್ಟ್ ಸರಣಿಗೂ ಮುನ್ನ ಅವರು ಟೀಮ್ ಇಂಡಿಯಾದಿಂದ ಹೊರಬಂದಿದ್ದರು. ಮಾನಸಿಕ ಒತ್ತಡದ ಕಾರಣದಿಂದಾಗಿ ಇಶಾನ್ ವಿಶ್ರಾಂತಿ ಬಯಸಿದ್ದರು. ಅದರಂತೆ ಅವರನ್ನು ಟೆಸ್ಟ್ ತಂಡದಿಂದ ಕೈ ಬಿಡಲಾಗಿತ್ತು.

ಹೀಗೆ ವಿಶ್ರಾಂತಿ ಬಯಸಿದ್ದ ಇಶಾನ್ ಕಿಶನ್ ದುಬೈನಲ್ಲಿ ಎಂಎಸ್​ ಧೋನಿ ಜೊತೆ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಟಿವಿ ಚಾನೆಲ್​ವೊಂದರ ರಸಪ್ರಶ್ನೆ ಕಾರ್ಯಕ್ರಮದಲ್ಲೂ ಭಾಗವಹಿಸಿದ್ದರು.

ಇವೆಲ್ಲವನ್ನೂ ಗಮನಿಸಿದ್ದ ಆಯ್ಕೆ ಸಮಿತಿ ಸದಸ್ಯರು, ಅಫ್ಘಾನಿಸ್ತಾನ್ ವಿರುದ್ಧದ ಸರಣಿಗೆ ಅವರನ್ನು ಆಯ್ಕೆ ಮಾಡದಿರಲು ನಿರ್ಧರಿಸಿದ್ದಾರೆ. ಹೀಗಾಗಿ 3 ಪಂದ್ಯಗಳ ಸರಣಿಗೆ ಇಶಾನ್ ಕಿಶನ್ ಆಯ್ಕೆಯಾಗಿಲ್ಲ ಎಂದು ವರದಿಯಾಗಿದೆ.

ಇನ್ನೊಂದೆಡೆ ಶ್ರೇಯಸ್ ಅಯ್ಯರ್ ತಮ್ಮ ತಪ್ಪುಗಳನ್ನು ತಿದ್ಧಿಕೊಳ್ಳಲು ತಯಾರಾಗುತ್ತಿಲ್ಲ ಎಂದು ವರದಿಯಾಗಿದೆ. ಅಂದರೆ ಅವರ ಕೆಲ ಶಾಟ್​ಗಳಿಂದಾಗಿ ವಿಕೆಟ್ ಕೈಚೆಲ್ಲುತ್ತಿದ್ದಾರೆ. ಈ ತಪ್ಪುಗಳನ್ನು ಎತ್ತಿ ತೋರಿಸಲಾಗಿದ್ದರೂ ಅದರ ಬಗ್ಗೆ ಅಯ್ಯರ್ ತಲೆಕೆಡಿಸಿಕೊಳ್ಳುತ್ತಿಲ್ಲ. ಅದಲ್ಲದೆ ಆ ತಪ್ಪುಗಳನ್ನು ಪುನರಾವರ್ತಿಸುವ ಮೂಲಕ ಟೀಮ್ ಇಂಡಿಯಾ ಪಾಲಿಗೆ ದುಬಾರಿಯಾಗುತ್ತಿದ್ದಾರೆ. ಅಂತಹದ್ದೇ ತಪ್ಪುಗಳನ್ನು ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಮಾಡಿದ್ದಾರೆ ಎನ್ನಲಾಗಿದೆ.

ಆಟಗಾರರ ಇಂತಹ ಅಶಿಸ್ತಿನ ನಡೆಯ ಬಗ್ಗೆ ಆಯ್ಕೆ ಸಮಿತಿಗೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ವರದಿ ನೀಡಿದೆ. ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಲು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅರ್ಗರ್ಕರ್ ನಿರ್ದೇಶಿಸಿದ್ದಾರೆ ಎಂದು ವರದಿಯಾಗಿದೆ.

ಇದೇ ಕಾರಣದಿಂದಾಗಿ ಇದೀಗ ಇಶಾನ್ ಕಿಶನ್ ಹಾಗೂ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾ ಟಿ20 ತಂಡದಿಂದ ಹೊರಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ಅಶಿಸ್ತಿನಿಂದಿರುವ ಆಟಗಾರರಿಗೆ ಬಿಸಿ ಮುಟ್ಟಿಸುವ ಮೂಲಕ ಬಿಸಿಸಿಐ ಟಿ20 ವಿಶ್ವಕಪ್​ಗೂ ಮುನ್ನ ಬಲಿಷ್ಠ ತಂಡವನ್ನು ರೂಪಿಸುವ ಇರಾದೆಯಲ್ಲಿದೆ.

ಇದನ್ನೂ ಓದಿ: ಶ್ರೀರಾಮನ ಹಾಡು ಕೇಳುವುದೇ ಖುಷಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಕೇಶ್ ಕುಮಾರ್.

ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ