AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR vs SRH, IPL 2026: ಪೋಸ್ಟ್ ಮ್ಯಾಚ್​ನಲ್ಲಿ ತಂಡದ ಗೆಲುವಿಗೆ ಕಾರಣರಾದ ಯಾರನ್ನೂ ಮರೆಯದ ಇಶಾನ್ ಕಿಶನ್, ಏನು ಹೇಳಿದ್ರು ನೋಡಿ

Ishan Kishan Post Match presentation talk: ಐಪಿಎಲ್ 2026 ರಲ್ಲಿ ಏಪ್ರಿಲ್ 2 ರಂದು ನಡೆದ ಆರನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಗೆಲುವು ಸಾಧಿಸಿತು. ಗೆಲುವಿನ ನಂತರ ಎಸ್ಆರ್​ಹೆಚ್ ನಾಯಕ ಇಶಾನ್ ಕಿಶನ್ ಕೆಲ ಮಹತ್ವದ ಹೇಳಿಕೆ ನೀಡಿದರು. ಅವರು ಏನೆಲ್ಲ ಹೇಳಿದ್ದಾರೆ ಎಂಬುದನ್ನು ಇಲ್ಲಿ ನೋಡಿ.

KKR vs SRH, IPL 2026: ಪೋಸ್ಟ್ ಮ್ಯಾಚ್​ನಲ್ಲಿ ತಂಡದ ಗೆಲುವಿಗೆ ಕಾರಣರಾದ ಯಾರನ್ನೂ ಮರೆಯದ ಇಶಾನ್ ಕಿಶನ್, ಏನು ಹೇಳಿದ್ರು ನೋಡಿ
Ishan Kishan Post Match Kkr Vs Srh
ಮಾಲಾಶ್ರೀ ಅಂಚನ್​
| Edited By: |

Updated on: Apr 03, 2026 | 8:45 AM

Share

ಬೆಂಗಳೂರು (ಏ. 03): ಗುರುವಾರ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಆರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 65 ರನ್‌ಗಳಿಂದ ಸೋಲಿಸಿತು. ಋತುವಿನ ಮೊದಲ ಗೆಲುವು ದಾಖಲಿಸಿದ ನಂತರ, ನಾಯಕ ಇಶಾನ್ ಕಿಶನ್ ತಮ್ಮ ಆಟಗಾರರನ್ನು ಹಾಡಿಹೊಗಳಿದ್ದಾರೆ. ಮುಖ್ಯವಾಗಿ ಆರಂಭಿಕ ಜೋಡಿಗಳಾದ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ನಮ್ಮ ತಂಡಕ್ಕೆ ಪಂದ್ಯವನ್ನು ತುಂಬಾ ಸುಲಭಗೊಳಿಸಿದರು ಎಂದು ಹೇಳಿದ್ದಾರೆ.

ಕೆಕೆಆರ್ ವಿರುದ್ಧದ ಗೆಲುವಿನ ಬಳಿಕ ಇಶಾನ್ ಕಿಶನ್ ಹೇಳಿದ್ದೇನು?

ಪಂದ್ಯದ ನಂತರ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಇಶಾನ್ ಕಿಶನ್, ಅವರು ಇಡೀ ತಂಡದ ಗೆಲುವಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. “ಎಲ್ಲರ ಪ್ರಯತ್ನದಿಂದ ನನಗೆ ಸಂತೋಷವಾಯಿತು. ಪಿಚ್ ಅಷ್ಟೊಂದು ಚೆನ್ನಾಗಿಲ್ಲ ಎಂದು ನಾನು ಭಾವಿಸುತ್ತೇನೆ. ಹೆಡ್ ಮತ್ತು ಅಭಿಷೇಕ್ ನಮಗೆ ಆಟವನ್ನು ಸುಲಭಗೊಳಿಸಿದರು. ಇದು ಸಂಪೂರ್ಣ ತಂಡದ ಪ್ರಯತ್ನವಾಗಿತ್ತು. ವಿಕೆಟ್ ಪಡೆಯುವುದು ನಮ್ಮ ಯೋಜನೆಯಾಗಿತ್ತು. ಹರ್ಷ್ ಆ ಚೆಂಡನ್ನು ಬೌಲ್ ಮಾಡಿದ್ದು ಅದ್ಭುತವಾಗಿತ್ತು, ಮತ್ತು ನಾವು ಆ ವಿಕೆಟ್ ಪಡೆದಿದ್ದು ಅದೃಷ್ಟವಾಗಿತ್ತು.”

“ಹರ್ಷ್ ತಮ್ಮ ದೇಶೀಯ ತಂಡಕ್ಕೂ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ನಾನು ಶಿವಾಂಗ್ ಅವರ ಕೊಡುಗೆ ಮರೆಯಲ್ಲ; ಅವರು ಅಸಾಧಾರಣವಾಗಿ ಉತ್ತಮ ಬೌಲಿಂಗ್ ಮಾಡಿದರು, ಉತ್ತಮ ಆತ್ಮವಿಶ್ವಾಸದಿಂದ ಬೌಲಿಂಗ್ ಮಾಡಿದರು. ಇಂದಿನ ಪಂದ್ಯದಲ್ಲಿ ಶಿವಾಂಗ್ ಅತ್ಯುತ್ತಮ ಕೆಲಸ ಮಾಡಿ ತಂಡಕ್ಕೆ ಸಹಕಾರ ನೀಡಿದರು” ಎಂದು ಕಿಶನ್ ಹೇಳಿದ್ದಾರೆ.

‘ನಾನು ಆಡೋದನ್ನು ಅವರು ಸಹಿಸಲ್ಲ, ನನ್ನ ಕಂಡ್ರೆ ಹೊಟ್ಟೆಕಿಚ್ಚು’; ಸಿಟ್ಟು ಹೊರಹಾಕಿದ ರಹಾನೆ

ಗೆಲುವಿನ ಹೊರತಾಗಿಯೂ, ಮುಂಬರುವ ಪಂದ್ಯಗಳಿಗೆ ತಂಡವು ತನ್ನ ಫೀಲ್ಡಿಂಗ್ ಅನ್ನು ಸುಧಾರಿಸಬೇಕಾಗಿದೆ ಎಂದು ಇಶಾನ್ ಕಿಶನ್ ಅಭಿಪ್ರಾಯಪಟ್ಟಿದ್ದಾರೆ. “ಫೀಲ್ಡಿಂಗ್ ವಿಭಾಗದಲ್ಲಿ ತಂಡವಾಗಿ ನಾವು ಕೆಲಸ ಮಾಡಬೇಕಾಗಿದೆ. 10-20 ರನ್‌ಗಳು ದೊಡ್ಡ ವ್ಯತ್ಯಾಸವನ್ನುಂಟುಮಾಡಬಹುದು” ಎಂದು ಅವರು ಹೇಳಿದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 226 ರನ್ ಗಳಿಸಿತು. ತಂಡದ ಪರವಾಗಿ ಹೆನ್ರಿಕ್ ಕ್ಲಾಸೆನ್ 52, ಅಭಿಷೇಕ್ ಶರ್ಮಾ 48 ಮತ್ತು ಟ್ರಾವಿಸ್ ಹೆಡ್ 46 ರನ್ ಗಳಿಸಿದರು, ನಿತೀಶ್ ರೆಡ್ಡಿ 24 ಎಸೆತಗಳಲ್ಲಿ 39 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ, ಕೋಲ್ಕತ್ತಾ ನೈಟ್ ರೈಡರ್ಸ್ 161 ರನ್‌ಗಳಿಗೆ ಆಲೌಟ್ ಆಯಿತು. ತಂಡದ ಪರ ಅಂಗ್ಕ್ರಿಶ್ ರಘುವಂಶಿ 52 ರನ್ ಗಳಿಸಿದರೆ, ರಿಂಕು ಸಿಂಗ್ 35 ರನ್ ಗಳಿಸಿದರು. ನಿತೀಶ್ ಕುಮಾರ್ ರೆಡ್ಡಿ 39 ರನ್ಸ್ ಮತ್ತು ಎರಡು ವಿಕೆಟ್‌ ಕಿತ್ತ ಪರಿಣಾಮ ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ