AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಲೀಪ್ ಟ್ರೋಫಿಯಿಂದ ಇಶಾನ್ ಕಿಶನ್ ಔಟ್

Duleep Trophy 2025: ದುಲೀಪ್ ಟ್ರೋಫಿ 2025 ಆಗಸ್ಟ್ 28 ರಿಂದ ಶುರುವಾಗಲಿದೆ. ಈ ಬಾರಿಯ ಟೂರ್ನಿಯು ಎಲ್ಲಾ ಪಂದ್ಯಗಳು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯಲಿದೆ. ವಿಶೇಷ ಎಂದರೆ ಈ ಬಾರಿ ಕಣಕ್ಕಿಳಿಯಲಿರುವ 6 ತಂಡಗಳಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕೂಡ ಕಾಣಿಸಿಕೊಳ್ಳಲಿದ್ದಾರೆ.

ದುಲೀಪ್ ಟ್ರೋಫಿಯಿಂದ ಇಶಾನ್ ಕಿಶನ್ ಔಟ್
Ishan Kishan
ಝಾಹಿರ್ ಯೂಸುಫ್
|

Updated on: Aug 18, 2025 | 12:31 PM

Share

ದುಲೀಪ್ ಟ್ರೋಫಿ ಟೂರ್ನಿಯಿಂದ ಇಶಾನ್ ಕಿಶನ್ ಹೊರಬಿದ್ದಿದ್ದಾರೆ. ಪೂರ್ವ ವಲಯ ತಂಡದ ನಾಯಕರಾಗಿ ಆಯ್ಕೆಯಾಗಿದ್ದ ಕಿಶನ್ ಗಾಯದ ಕಾರಣ ಹೊರಗುಳಿದಿದ್ದು, ಅವರ ಬದಲಿಗೆ ಅಭಿಮನ್ಯು ಈಶ್ವರನ್ ಅವರಿಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ. ಇನ್ನು ಇಶಾನ್ ಕಿಶನ್ ಸ್ಥಾನಕ್ಕೆ ಯುವ ವಿಕೆಟ್ ಕೀಪರ್ ಬ್ಯಾಟರ್ ಆಶೀರ್ವಾದ್ ಸ್ವೈನ್ ಆಯ್ಕೆಯಾಗಿದ್ದಾರೆ.

ಒಡಿಶಾದ 20 ವರ್ಷದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಆಶಿರ್ವಾದ್ ಸ್ವೈನ್ ಇದುವರೆಗೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 11 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ  21 ಇನ್ನಿಂಗ್ಸ್‌ಗಳಲ್ಲಿ ಬ್ಯಾಟ್ ಬೀಸಿರುವ ಅವರು 30.75 ಸರಾಸರಿಯಲ್ಲಿ ಒಟ್ಟು 615 ರನ್ ಗಳಿಸಿದ್ದಾರೆ. ಇದರ ಜೊತೆಗೆ ವಿಕೆಟ್ ಕೀಪಿಂಗ್​ನಲ್ಲಿ 32 ಕ್ಯಾಚ್‌ಗಳು ಮತ್ತು 3 ಸ್ಟಂಪಿಂಗ್‌ಗಳನ್ನು ಸಹ ಮಾಡಿದ್ದಾರೆ. ಈ ಪ್ರದರ್ಶನದ ಫಲವಾಗಿ ಇದೀಗ ಯುವ ವಿಕೆಟ್ ಕೀಪರ್ ಬ್ಯಾಟರ್​ನನ್ನು ಪೂರ್ವ ವಲಯ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ದುಲೀಪ್ ಟ್ರೋಫಿಗೆ ಪೂರ್ವ ವಲಯ ತಂಡ: ಅಭಿಮನ್ಯು ಈಶ್ವರನ್ (ನಾಯಕ), ಆಶೀರ್ವಾದ್ ಸ್ವೈನ್ (ವಿಕೆಟ್ ಕೀಪರ್), ಸಂದೀಪ್ ಪಟ್ನಾಯಕ್, ವಿರಾಟ್ ಸಿಂಗ್, ಡ್ಯಾನಿಶ್ ದಾಸ್, ಶ್ರೀದಾಮ್ ಪಾಲ್, ಶರಣದೀಪ್ ಸಿಂಗ್, ಕುಮಾರ್ ಕುಶಾಗ್ರಾ, ರಿಯಾನ್ ಪರಾಗ್, ಉತ್ಕರ್ಷ್ ಸಿಂಗ್, ಮನೀಷಿ, ಸೂರಜ್ ಸಿಂಧು ಜೈಸ್ವಾಲ್, ಮುಖೇಶ್ ಕುಮಾರ್, ಆಕಾಶ್ ದೀಪ್ ಮತ್ತು ಮೊಹಮ್ಮದ್ ಶಮಿ.

ಸ್ಟ್ಯಾಂಡ್‌ಬೈ: ಮುಖ್ತಾರ್ ಹುಸೇನ್, ವೈಭವ್ ಸೂರ್ಯವಂಶಿ, ಸ್ವಸ್ತಿಕ್ ಸಮಲ್, ಸುದೀಪ್ ಕುಮಾರ್ ಘರಾಮಿ ಮತ್ತು ರಾಹುಲ್ ಸಿಂಗ್.

ಇದನ್ನೂ ಓದಿ: IPL 2026: ಇಬ್ಬರ ಡೀಲ್… ಸಂಜು ಸ್ಯಾಮ್ಸನ್ ಮೇಲೆ KKR ಕಣ್ಣು

ಏನಿದು ದುಲೀಪ್ ಟ್ರೋಫಿ?

ದುಲೀಪ್ ಟ್ರೋಫಿ ಎಂಬುದು ಭಾರತದಲ್ಲಿ ಆಡಲಾಗುವ ದೇಶೀಯ ಟೆಸ್ಟ್ ಕ್ರಿಕೆಟ್ ಟೂರ್ನಿ. ಈ ಟೂರ್ನಿಗೆ ಮಾಜಿ ಆಟಗಾರ ದುಲೀಪ್‌ಸಿನ್‌ಜಿ ಅವರ ಹೆಸರನ್ನು ಇಡಲಾಗಿದೆ. ಈ ಟೂರ್ನಿಯಲ್ಲಿ ಒಟ್ಟು 6 ವಲಯ ತಂಡಗಳು ಕಣಕ್ಕಿಳಿಯುತ್ತವೆ. ಇಲ್ಲಿ ಆಯಾ ವಲಯಗಳನ್ನು ಆಯಾ ಭಾಗದ ರಾಜ್ಯಗಳ ಆಟಗಾರರು ಪ್ರತಿನಿಧಿಸುತ್ತಾರೆ.

  • ಉತ್ತರ ವಲಯ : ಚಂಡೀಗಢ, ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ಸರ್ವೀಸಸ್ ತಂಡಗಳು.
  • ದಕ್ಷಿಣ ವಲಯ : ಆಂಧ್ರಪ್ರದೇಶ, ಗೋವಾ, ಹೈದರಾಬಾದ್ ಕರ್ನಾಟಕ, ಕೇರಳ, ಪಾಂಡಿಚೇರಿ ಮತ್ತು ತಮಿಳುನಾಡು.
  • ಕೇಂದ್ರ ವಲಯ : ಛತ್ತೀಸ್‌ಗಢ, ಮಧ್ಯಪ್ರದೇಶ, ರೈಲ್ವೆ, ರಾಜಸ್ಥಾನ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ವಿದರ್ಭ.
  • ಪೂರ್ವ ವಲಯ : ಅಸ್ಸಾಂ, ಬಿಹಾರ, ಬಂಗಾಳ, ಜಾರ್ಖಂಡ್, ಒಡಿಶಾ ಮತ್ತು ತ್ರಿಪುರಾ.
  • ಈಶಾನ್ಯ ವಲಯ : ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ.
  • ಪಶ್ಚಿಮ ವಲಯ : ಬರೋಡಾ, ಗುಜರಾತ್, ಮಹಾರಾಷ್ಟ್ರ, ಮುಂಬೈ ಮತ್ತು ಸೌರಾಷ್ಟ್ರ.