AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಲ್ ಮ್ಯಾಚ್​ಗೂ ಮುನ್ನ ನನ್ನ ಸಹೋದರಿ ತೀರಿಕೊಂಡಿದ್ದಾಳೆ, ಇದು ಅವಳಿಗೆ..!

T20 World Cup 2026: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್​ಗಳಲ್ಲಿ 159 ರನ್​ ಬಾರಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 96 ರನ್​ಗಳ ಅಮೋಘ ಗೆಲುವು ದಾಖಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಫೈನಲ್ ಮ್ಯಾಚ್​ಗೂ ಮುನ್ನ ನನ್ನ ಸಹೋದರಿ ತೀರಿಕೊಂಡಿದ್ದಾಳೆ, ಇದು ಅವಳಿಗೆ..!
Ishan Kishan
ಝಾಹಿರ್ ಯೂಸುಫ್
|

Updated on: Mar 09, 2026 | 8:59 AM

Share

T20 World Cup 2026: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ 159 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 96 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ಈ ಗೆಲುವಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ದಾಂಡಿಗ ಇಶಾನ್ ಕಿಶನ್, ತಮ್ಮ ಜೀವನದ ಅತ್ಯಂತ ಕಠಿಣ ಕ್ಷಣವೊಂದನ್ನು ಹಂಚಿಕೊಂಡಿದ್ದಾರೆ. ಅದು ಸಾವಿನ ಸುದ್ದಿಯೊಂದಿಗೆ..!

ಫೈನಲ್​ ಮ್ಯಾಚ್​ಗೂ ಮುನ್ನ ನನ್ನ ಸಹೋದರಿ ತೀರಿಕೊಂಡಿದ್ದಾರೆ. ಅವಳಿಗೆ ನಾನು ವಿಶ್ವಕಪ್ ಗೆಲ್ಲಬೇಕೆಂಬ ತುಂಬಾ ಆಸೆಯಿತ್ತು. ಆದರೆ ಇದೀಗ ಅವಳಿಲ್ಲ. ಈ ವಿಶ್ವಕಪ್ ನಾನು ಅವಳಿಗಾಗಿ ಅರ್ಪಿಸುತ್ತೇನೆ ಎಂದು ಇಶಾನ್ ಕಿಶನ್ ಸಂತಸದ ಕ್ಷಣಗಳ ನಡುವೆ ನೋವನ್ನು ಹಂಚಿಕೊಂಡಿದ್ದಾರೆ.

ಮಾರ್ಚ್ 7 ರಂದು ಪಶ್ಚಿಮ ಬಂಗಾಳದ ರಾಷ್ಟ್ರೀಯ ಹೆದ್ದಾರಿ 27 ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಶಾನ್ ಕಿಶನ್ ಅವರ ಕಸಿನ್ ಸಿಸ್ಟರ್ ವೈಷ್ಣವಿ ಸಿಂಗ್ ಮತ್ತು ಅವರ ಪತಿ ಮೃತಪಟ್ಟಿದ್ದರು,

ಅಪಘಾತದ ಸಮಯದಲ್ಲಿ ಕಾರಿನಲ್ಲಿದ್ದ ಈ ದಂಪತಿಯ ಆರು ತಿಂಗಳು ಮತ್ತು ಮೂರು ವರ್ಷದ ಇಬ್ಬರು ಪುಟ್ಟ ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುಟುಂಬದಲ್ಲಿ ಇಂತಹ ದೊಡ್ಡ ದುರಂತ ಸಂಭವಿಸಿದರೂ, ಇಶಾನ್ ಕಿಶನ್ ತಂಡದ ಹಿತದೃಷ್ಟಿಯಿಂದ ಫೈನಲ್ ಪಂದ್ಯವನ್ನು ಆಡಲು ನಿರ್ಧರಿಸಿದರು. ತಮ್ಮ ಸಹ ಆಟಗಾರ ಹಾರ್ದಿಕ್ ಪಾಂಡ್ಯ ಅವರು ನೀಡಿದ ಧೈರ್ಯದಿಂದಾಗಿ ಅವರು ಮೈದಾನಕ್ಕಿಳಿದರು.

ವೈಯಕ್ತಿಕ ದುಃಖದ ನಡುವೆಯೂ ಇಶಾನ್ ಕಿಶನ್ ಸ್ಫೋಟಕವಾಗಿ ಬ್ಯಾಟ್ ಬೀಸಿ 25 ಎಸೆತಗಳಲ್ಲಿ 54 ರನ್ (4 ಬೌಂಡರಿ, 4 ಸಿಕ್ಸರ್) ಗಳಿಸಿದರು. ಅಲ್ಲದೆ ಫೀಲ್ಡಿಂಗ್‌ನಲ್ಲಿ ಮೂರು ಅದ್ಭುತ ಕ್ಯಾಚ್‌ಗಳನ್ನು ಹಿಡಿದರು. ಈ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದರು.

ಈ ಚಾಂಪಿಯನ್ ಪಟ್ಟದ ಬೆನ್ನಲ್ಲೇ ತನ್ನ ನೋವನ್ನು ಹಂಚಿಕೊಂಡ ಇಶಾನ್ ಕಿಶನ್, “ಈ ಗೆಲುವನ್ನು ನನ್ನ ಸಹೋದರಿಗೆ ಅರ್ಪಿಸುತ್ತೇನೆ. ಅವಳು ನನ್ನ ಈ ಐತಿಹಾಸಿಕ ಕ್ಷಣಗಳನ್ನು ನೋಡಬೇಕೆಂದು ಬಯಸಿದ್ದಳು. ಹೀಗಾಗಿ ಈ ಟ್ರೋಫಿಯನ್ನು ನಾನು ಸಹೋದರಿಗೆ ಅರ್ಪಿಸುವುದಾಗಿ ಇಶಾನ್ ಕಿಶನ್ ಭಾವುಕರಾದರು.

ಇದನ್ನೂ ಓದಿ: Sanju Samson: ನನ್ನ ಈ ಪ್ರದರ್ಶನಕ್ಕೆ ‘ಅವರೇ’ ಕಾರಣ..!

ಇದೀಗ ತನ್ನ ವೃತ್ತಿಜೀವನದ ಅತಿದೊಡ್ಡ ಪ್ರೋತ್ಸಾಹಕರಲ್ಲಿ ಒಬ್ಬರಾಗಿದ್ದ ಸಹೋದರಿಯ ಸಾವಿನ ದುಃಖದ ನಡುವೆಯೂ ಪ್ರಚಂಡ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ಗೆಲುವಿನಲ್ಲಿ ತನ್ನದೇಯಾದ ಕೊಡುಗೆ ನೀಡಿದ ಇಶಾನ್ ಕಿಶನ್ ಅವರ ಬಗ್ಗೆ ಅಭಿಮಾನಿಗಳು ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್