ದಾಖಲೆಯ ‘ದ್ವಿಶತಕ’ ಸಿಡಿಸಿದ ಇಶಾನ್ ಕಿಶನ್

ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ದುಲೀಪ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್ ಮೂಲಕ ಅಬ್ಬರಿಸಿದ್ದಾರೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ಸೌತ್ ಝೋನ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಈಸ್ಟ್ ಝೋನ್ ತಂಡದ ನಾಯಕ ಕಿಶನ್ ಇದೀಗ ದ್ವಿಶತಕ ಬಾರಿಸಿ ವಿಶೇಷ ದಾಖಲೆ ಬರೆದಿದ್ದಾರೆ.

ದಾಖಲೆಯ ದ್ವಿಶತಕ ಸಿಡಿಸಿದ ಇಶಾನ್ ಕಿಶನ್
ಇಶಾನ್ ಕಿಶನ್
Image Credit source: TNCA

Updated on: Sep 08, 2026 | 7:21 AM

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿಯ ಫೈನಲ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಇಶಾನ್ ಕಿಶನ್ ಭರ್ಜರಿ ಡಬಲ್ ಸೆಂಚುರಿ ಸಿಡಿಸಿದ್ದಾರೆ. ಈ ದ್ವಿಶತಕದೊಂದಿಗೆ ದುಲೀಪ್ ಟ್ರೋಫಿ ಇತಿಹಾಸದಲ್ಲೇ ಫೈನಲ್ ಪಂದ್ಯದಲ್ಲಿ ಡಬಲ್ ಸೆಂಚುರಿ ಸಿಡಿಸಿದ ಈಸ್ಟ್ ಝೋನ್​ ತಂಡದ ಮೊದಲ ವಿಕೆಟ್ ಕೀಪರ್ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ 7ನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ಮನ್ಸೂರ್ ಅಲಿ ಖಾನ್ ಪಟೌಡಿ, ರಾಮನ್ ಲಂಬಾ, ಅಂಶುಮನ್ ಗಾಯಕ್ವಾಡ್, ಯೂಸುಫ್ ಪಠಾಣ್, ಚೇತೇಶ್ವರ್ ಪೂಜಾರ ಮತ್ತು ಯಶಸ್ವಿ ಜೈಸ್ವಾಲ್ ಈ ಸಾಧನೆ ಮಾಡಿದ್ದರು.

ಇದೀಗ ಈ ಪಟ್ಟಿಗೆ ಏಳನೇ ದಾಂಡಿಗನಾಗಿ ಇಶಾನ್ ಕಿಶನ್ ಈ ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದು ಭರ್ಜರಿ ಡಬಲ್ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ.

ಬೃಹತ್ ಮೊತ್ತದತ್ತ ಈಸ್ಟ್ ಝೋನ್:

ಸೌತ್ ಝೋನ್ ವಿರುದ್ಧದ ಪಂದ್ಯದಲ್ಲಿ ಈಸ್ಟ್​ ಝೋನ್ ಪರ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ 270 ಎಸೆತಗಳಲ್ಲಿ 2 ಭರ್ಜರಿ ಸಿಕ್ಸರ್ ಹಾಗೂ 25 ಫೋರ್​ಗಳೊಂದಿಗೆ 203* ರನ್​ಗಳಿಸಿ ದ್ವಿಶತಕ ಪೂರೈಸಿದರು.

ಇಶಾನ್ ಕಿಶನ್ ಅವರ ಈ ಭರ್ಜರಿ ಡಬಲ್ ಸೆಂಚುರಿ ನೆರವಿನೊಂದಿಗೆ ಈಸ್ಟ್ ಝೋನ್ ತಂಡವು 121.2 ಓವರ್​ಗಳ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 550 ರನ್ ಕಲೆಹಾಕಿದೆ.

ಈಸ್ಟ್​ ಝೋನ್ (ಪ್ಲೇಯಿಂಗ್ XI): ಅಭಿಮನ್ಯು ಈಶ್ವರನ್, ವೈಭವ್ ಸೂರ್ಯವಂಶಿ, ಕುಮಾರ್ ಕುಶಾಗ್ರಾ, ಸುದೀಪ್ ಕುಮಾರ್ ಘರಾಮಿ, ಇಶಾನ್ ಕಿಶನ್ (ನಾಯಕ, ಶಿಖರ್ ಮೋಹನ್, ಅನುಕೂಲ್ ರಾಯ್, ಎಂಡಿ ಕೌನೈನ್ ಖುರೈಶಿ, ಮೊಹಮ್ಮದ್ ಶಮಿ, ಅಭಿಜಿತ್ ಕೆ ಸರ್ಕಾರ್, ಮುಖೇಶ್ ಕುಮಾರ್.

ಇದನ್ನೂ ಓದಿ: ದುಲೀಪ್ ಟ್ರೋಫಿ ಫೈನಲ್ ಎಷ್ಟು ದಿನಗಳ ಪಂದ್ಯ? ಇಲ್ಲಿದೆ ಉತ್ತರ

ಸೌತ್ ಝೋನ್ (ಪ್ಲೇಯಿಂಗ್ XI): ರಿಕಿ ಭುಯಿ, ನಾರಾಯಣ್ ಜಗದೀಸನ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶೇಕ್ ರಶೀದ್, ತಿಲಕ್ ವರ್ಮಾ (ನಾಯಕ), ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ತ್ರಿಪುರಾಣ ವಿಜಯ್, ಮೊಹಮ್ಮದ್ ಸಿರಾಜ್, ಚಾಮ ವಿ ಮಿಲಿಂದ್, ಎಂಡಿ ನಿಧೀಶ್.

Published On - 1:38 pm, Mon, 7 September 26

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us