IND vs WI: ಇಶಾನ್ vs ಭರತ್: ಟೀಮ್ ಇಂಡಿಯಾ ವಿಕೆಟ್ ಕೀಪರ್ ಯಾರು?

Ishan Kishan vs KS Bharat: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ವಿಕೆಟ್ ಕೀಪರ್ ಯಾರು? ಇಶಾನ್ ಕಿಶನ್ ಹಾಗೂ ಕೆಎಸ್ ಭರತ್ ನಡುವೆ ಪೈಪೋಟಿ.

IND vs WI: ಇಶಾನ್ vs ಭರತ್: ಟೀಮ್ ಇಂಡಿಯಾ ವಿಕೆಟ್ ಕೀಪರ್ ಯಾರು?
Ishan Kishan vs KS Bharat
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 11, 2023 | 4:12 PM

India vs West Indies Test: ಭಾರತ-ವೆಸ್ಟ್ ಇಂಡೀಸ್ ಮೊದಲ ಟೆಸ್ಟ್ ಪಂದ್ಯವು ಬುಧವಾರದಿಂದ (ಜುಲೈ 12) ಆರಂಭವಾಗಲಿದೆ. ಡೊಮಿನಿಕಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಯಾರಾಗಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್​ಗಳಾಗಿ ಕೆಎಸ್ ಭರತ್ (KS Bharat) ಹಾಗೂ ಇಶಾನ್ ಕಿಶನ್ (Ishan Kishan) ಸ್ಥಾನ ಪಡೆದಿದ್ದು, ಇವರಿಬ್ಬರಲ್ಲಿ ಒಬ್ಬರಿಗೆ ಅವಕಾಶ ಸಿಗಲಿದೆ. ಆದರೆ ಅತ್ತ ಟೀಮ್ ಇಂಡಿಯಾ 5 ಟೆಸ್ಟ್ ಪಂದ್ಯಗಳಲ್ಲಿ 8 ಇನಿಂಗ್ಸ್ ಆಡಿರುವ ಕೆಎಸ್ ಭರತ್ ಒಂದೇ ಒಂದು ಅರ್ಧಶತಕ ಬಾರಿಸಿಲ್ಲ. ಇದಾಗ್ಯೂ ಅವರನ್ನು ವೆಸ್ಟ್ ಇಂಡೀಸ್ ಸರಣಿಗೂ ಆಯ್ಕೆ ಮಾಡಲಾಗಿದೆ.

ಇತ್ತ ಕಳೆದ 5 ಟೆಸ್ಟ್​ ಪಂದ್ಯಗಳಲ್ಲೂ ಭರತ್​ಗೆ ಅವಕಾಶ ನೀಡಿದ್ದ ಪರಿಣಾಮ ಇಶಾನ್ ಕಿಶನ್ ಬೆಂಚ್ ಕಾದಿದ್ದರು. ಇದೀಗ ಈ ಬಾರಿ ಕೂಡ ತಂಡದಲ್ಲಿ ಭರತ್ ಇದ್ದಾರೆ.

ಮೇಲ್ನೋಟಕ್ಕೆ ಇಲ್ಲಿ ಟೀಮ್ ಇಂಡಿಯಾದ ಮೊದಲ ಆಯ್ಕೆ ಕೆಎಸ್ ಭರತ್ ಆಗಿರಲಿದ್ದಾರೆ. ಏಕೆಂದರೆ ಕಳೆದ ಐದು ಟೆಸ್ಟ್ ಪಂದ್ಯಗಳಲ್ಲಿ ವಿಫಲರಾಗಿರುವ ಕೆಎಸ್ ಭರತ್​ಗೆ ಈ ಬಾರಿ ಕೊನೆಯ ಅವಕಾಶ ನೀಡಬಹುದು. ಇದರಲ್ಲಿ ವಿಫಲರಾದರೆ, 2ನೇ ಟೆಸ್ಟ್ ಪಂದ್ಯದಲ್ಲಿ ಇಶಾನ್​ ಕಿಶನ್​ಗೆ ಚಾನ್ಸ್ ನೀಡುವ ಸಾಧ್ಯತೆಯಿದೆ.

ಕೆಎಸ್ ಭರತ್ ಅಂಕಿ ಅಂಶಗಳು:

ಟೀಮ್ ಇಂಡಿಯಾ ಪರ ಇದುವರೆಗೆ 8 ಟೆಸ್ಟ್ ಇನಿಂಗ್ಸ್ ಆಡಿರುವ ಕೆಎಸ್ ಭರತ್ ಕಲೆಹಾಕಿರುವುದು ಕೇವಲ 129 ರನ್​ಗಳು. ಅಂದರೆ ಕೇವಲ 18.43 ಸರಾಸರಿಯಲ್ಲಿ ರನ್​ಗಳಿಸಿದ್ದಾರೆ. ಇದೇ ಕಾರಣದಿಂದಾಗಿ ವೆಸ್ಟ್ ಇಂಡೀಸ್ ಸರಣಿಗೆ ಕೆಎಸ್ ಭರತ್ ಅವರ ಆಯ್ಕೆಯನ್ನು ಹಲವು ಮಾಜಿ ಆಟಗಾರರು ಪ್ರಶ್ನಿಸಿದ್ದರು.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ನಲ್ಲಿನ ಟೀಮ್ ಇಂಡಿಯಾದ 9 ಎದುರಾಳಿಗಳು ಇವರೇ..!

ಇಶಾನ್ ಕಿಶನ್ ಅಂಕಿ ಅಂಶಗಳು:

ಇಶಾನ್ ಕಿಶನ್ ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಇದುವರೆಗೆ ಪಾದರ್ಪಣೆ ಮಾಡಿಲ್ಲ. ಅತ್ತ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಒಟ್ಟು 82 ಇನಿಂಗ್ಸ್ ಆಡಿರುವ ಕಿಶನ್ 38.76 ರ ಸರಾಸರಿಯಲ್ಲಿ 2985 ರನ್ ಕಲೆಹಾಕಿದ್ದಾರೆ.  ಹೀಗಾಗಿಯೇ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಇಶಾನ್ ಕಿಶನ್ ಚೊಚ್ಚಲ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಅದರಂತೆ ಮೊದಲ ಟೆಸ್ಟ್ ಪಂದ್ಯದಲ್ಲಿ ಇಶಾನ್ ಕಿಶನ್​ಗೆ ಅದೃಷ್ಟ ಖುಲಾಯಿಸಲಿದೆಯಾ ಅಥವಾ ಕೆಎಸ್ ಭರತ್​ಗೆ ಮತ್ತೊಂದು ಚಾನ್ಸ್ ನೀಡಲಿದ್ದಾರಾ ಕಾದು ನೋಡಬೇಕಿದೆ.

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ