Sign In

By signing in or creating an account, you agree with Associated Broadcasting Company's Terms & Conditions and Privacy Policy.

Ishan Kishan: ಸೆಂಚುರಿ ಸಿಡಿಸಿ ಇಶಾನ್ ಕಿಶನ್ ಫ್ಲೈಯಿಂಗ್ ಕಿಸ್: ನಾಚಿ ನೀರಾದ ಕಾವ್ಯ ಮಾರನ್

IPL 2025 SRH vs RR: ಸನ್​ರೈಸರ್ಸ್ ಹೈದರಾಬಾದ್ ತಂಡದ ಯುವ ಎಡಗೈ ದಾಂಡಿಗ ಇಶಾನ್ ಕಿಶನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಹೈದರಾಬಾದ್​ನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 47 ಎಸೆತಗಳನ್ನು ಎದುರಿಸಿದ ಇಶಾನ್ ಕಿಶನ್ ಅಜೇಯ 106 ರನ್ ಬಾರಿಸಿ ಮಿಂಚಿದರು. ಈ ಶತಕದ ಬೆನ್ನಲ್ಲೇ ಸನ್​ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್​ಗೆ ಇಶಾನ್ ಫ್ಲೈಯಿಂಗ್ ಕಿಸ್ ನೀಡಿದ್ದು ವಿಶೇಷ.

Ishan Kishan: ಸೆಂಚುರಿ ಸಿಡಿಸಿ ಇಶಾನ್ ಕಿಶನ್ ಫ್ಲೈಯಿಂಗ್ ಕಿಸ್: ನಾಚಿ ನೀರಾದ ಕಾವ್ಯ ಮಾರನ್
Ishan Kishan - Kavya Maran
Follow us
ಝಾಹಿರ್ ಯೂಸುಫ್
|

Updated on: Mar 24, 2025 | 9:33 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಇಶಾನ್ ಕಿಶನ್ (Ishan Kishan) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಸಿಡಿಲಬ್ಬರದೊಂದಿಗೆ ಯುವ ದಾಂಡಿಗ ಐಪಿಎಲ್ 2025ರ ಮೊದಲ ಶತಕ ಸಿಡಿಸಿದ್ದಾರೆ. ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿತ್ತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ಹಂಗಾಮಿ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ನಾಯಕನ ನಿರ್ಧಾರ ತಪ್ಪು ಎಂಬುದನ್ನು ಪವರ್​ಪ್ಲೇನಲ್ಲೇ ಎಸ್​ಆರ್​ಹೆಚ್ ಬ್ಯಾಟರ್​ಗಳು ನಿರೂಪಿಸಿದ್ದರು.

ಇದನ್ನೂ ಓದಿ
Image
RCBಯಲ್ಲಿ ಬ್ರಿಟಿಷ್ ಪಡೆ... ಸೋತು ಸುಣ್ಣವಾಗಲಿದೆ ಎಂದ ಗಿಲ್​ಕ್ರಿಸ್ಟ್
Image
IPL 2025: ಐಪಿಎಲ್​ ಕಣದಲ್ಲಿದ್ದಾರೆ 13 ಕನ್ನಡಿಗರು
Image
IPL 2025: ಬ್ಯಾನ್ ಬ್ಯಾನ್ ಬ್ಯಾನ್... ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ
Image
IPL 2025: ಐಪಿಎಲ್​ನಲ್ಲಿ 10 ನಿಮಯಗಳು ಬದಲಾವಣೆ

ಏಕೆಂದರೆ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ (24) ಹಾಗೂ ಇಶಾನ್ ಕಿಶನ್ ಅವರ ಅಬ್ಬರೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ತಂಡವು ಪವರ್​ಪ್ಲೇನಲ್ಲಿ ಬರೋಬ್ಬರಿ 94 ರನ್​ ಕಲೆಹಾಕಿತು. ಇದಾದ ಬಳಿಕ ಟ್ರಾವಿಸ್ ಹೆಡ್ (67) ಔಟಾದರು.

ಆದರೆ ಮತ್ತೊಂದೆಡೆ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿದ ಇಶಾನ್ ಕಿಶನ್ ಎಸ್​ಆರ್​ಹೆಚ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕಿಶನ್ ಬ್ಯಾಟ್​ನಿಂದ ಕೇವಲ 45 ಎಸೆತಗಳಲ್ಲಿ ಭರ್ಜರಿ ಶತಕ ಮೂಡಿಬಂತು.

ಇತ್ತ ಚೊಚ್ಚಲ ಐಪಿಎಲ್ ಶತಕ ಸಿಡಿಸಿದ ಖುಷಿಯಲ್ಲಿ ಇಶಾನ್ ಕಿಶನ್ ಮೈದಾನದಲ್ಲಿ ಓಡುತ್ತಾ ಸಂಭ್ರಮಿಸಿದರು. ಅಲ್ಲದೆ ಈ ಖುಷಿಯನ್ನು ಸನ್​ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್​ಗೆ ಫ್ಲೈಯಿಂಗ್ ಕಿಸ್ ನೀಡುವ ಮೂಲಕ ಹಂಚಿಕೊಂಡರು.

ಇದಕ್ಕೂ ಮುನ್ನ ಅರ್ಧಶತಕ ಪೂರೈಸಿದ ಬಳಿಕ ಇಶಾನ್ ಕಿಶನ್ ಸ್ಟೇಡಿಯಂನತ್ತ ತಿರುಗಿ ಫ್ಲೈಯಿಂಗ್ ಕಿಸ್ ನೀಡಿದ್ದರು. ಇದಾಗ್ಯೂ ಅದು ಯಾರಿಗೆ ಎಂಬುದು ಗೊತ್ತಾಗಿರಲಿಲ್ಲ. ಆದರೆ ಶತಕದ ಬಳಿಕ ಇಶಾನ್ ಕಿಶನ್ ಗಾಳಿಯಲ್ಲಿ ಮುತ್ತನ್ನು ರವಾನಿಸುತ್ತಿದ್ದಂತೆ ಕ್ಯಾಮೆರಾಮ್ಯಾನ್ ಕ್ಯಾಮೆರಾವನ್ನು ಸ್ಟೇಡಿಯಂನತ್ತ ತಿರುಗಿಸಿದ್ದಾರೆ. ಈ ವೇಳೆ ಕಾವ್ಯ ಮಾರನ್ ಕಾಣಿಸಿಕೊಂಡಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದೆ.

ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ಇನ್ನು ಈ ಪಂದ್ಯದಲ್ಲಿ 47 ಎಸೆತಗಳನ್ನು ಎದುರಿಸಿದ ಇಶಾನ್ ಕಿಶನ್ 6 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 106 ರನ್ ಬಾರಿಸಿದರು. ಈ ಸೆಂಚುರಿ ನೆರವಿನೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 286 ರನ್ ಕಲೆಹಾಕಿದೆ.

ರಾಜಸ್ಥಾನ್ ರಾಯಲ್ಸ್ ಪಡೆಗೆ ವಿರೋಚಿತ ಸೋಲು:

287 ರನ್​ಗಳ ಕಠಿಣ ಗುರಿ ಪಡೆದ ರಾಜಸ್ಥಾನ್ ರಾಯಲ್ಸ್ ತಂಡವು ದಿಟ್ಟ ಹೋರಾಟವನ್ನೇ ಪ್ರದರ್ಶಿಸಿದ್ದರು. ಆರಂಭಿಕನಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 37 ಎಸೆತಗಳಲ್ಲಿ 66 ರನ್ ಬಾರಿಸಿದರೆ, ಧ್ರುವ್ ಜುರೆಲ್ 35 ಎಸೆತಗಳಲ್ಲಿ 70 ರನ್ ಚಚ್ಚಿದರು. ಇದಾಗ್ಯೂ ಈ ಇಬ್ಬರು ಆಟಗಾರರಿಗೆ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 242 ರನ್ ಕಲೆಹಾಕಿ 44 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?