
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 2ನೇ ಪಂದ್ಯದಲ್ಲಿ ಇಶಾನ್ ಕಿಶನ್ (Ishan Kishan) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಸಿಡಿಲಬ್ಬರದೊಂದಿಗೆ ಯುವ ದಾಂಡಿಗ ಐಪಿಎಲ್ 2025ರ ಮೊದಲ ಶತಕ ಸಿಡಿಸಿದ್ದಾರೆ. ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿತ್ತು.
ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ಹಂಗಾಮಿ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ನಾಯಕನ ನಿರ್ಧಾರ ತಪ್ಪು ಎಂಬುದನ್ನು ಪವರ್ಪ್ಲೇನಲ್ಲೇ ಎಸ್ಆರ್ಹೆಚ್ ಬ್ಯಾಟರ್ಗಳು ನಿರೂಪಿಸಿದ್ದರು.
ಏಕೆಂದರೆ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ (24) ಹಾಗೂ ಇಶಾನ್ ಕಿಶನ್ ಅವರ ಅಬ್ಬರೊಂದಿಗೆ ಸನ್ರೈಸರ್ಸ್ ಹೈದರಾಬಾದ್ ತಂಡವು ಪವರ್ಪ್ಲೇನಲ್ಲಿ ಬರೋಬ್ಬರಿ 94 ರನ್ ಕಲೆಹಾಕಿತು. ಇದಾದ ಬಳಿಕ ಟ್ರಾವಿಸ್ ಹೆಡ್ (67) ಔಟಾದರು.
ಆದರೆ ಮತ್ತೊಂದೆಡೆ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿದ ಇಶಾನ್ ಕಿಶನ್ ಎಸ್ಆರ್ಹೆಚ್ ಬೌಲರ್ಗಳ ಬೆಂಡೆತ್ತಿದರು. ಪರಿಣಾಮ ಕಿಶನ್ ಬ್ಯಾಟ್ನಿಂದ ಕೇವಲ 45 ಎಸೆತಗಳಲ್ಲಿ ಭರ್ಜರಿ ಶತಕ ಮೂಡಿಬಂತು.
ಇತ್ತ ಚೊಚ್ಚಲ ಐಪಿಎಲ್ ಶತಕ ಸಿಡಿಸಿದ ಖುಷಿಯಲ್ಲಿ ಇಶಾನ್ ಕಿಶನ್ ಮೈದಾನದಲ್ಲಿ ಓಡುತ್ತಾ ಸಂಭ್ರಮಿಸಿದರು. ಅಲ್ಲದೆ ಈ ಖುಷಿಯನ್ನು ಸನ್ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್ಗೆ ಫ್ಲೈಯಿಂಗ್ ಕಿಸ್ ನೀಡುವ ಮೂಲಕ ಹಂಚಿಕೊಂಡರು.
ಇದಕ್ಕೂ ಮುನ್ನ ಅರ್ಧಶತಕ ಪೂರೈಸಿದ ಬಳಿಕ ಇಶಾನ್ ಕಿಶನ್ ಸ್ಟೇಡಿಯಂನತ್ತ ತಿರುಗಿ ಫ್ಲೈಯಿಂಗ್ ಕಿಸ್ ನೀಡಿದ್ದರು. ಇದಾಗ್ಯೂ ಅದು ಯಾರಿಗೆ ಎಂಬುದು ಗೊತ್ತಾಗಿರಲಿಲ್ಲ. ಆದರೆ ಶತಕದ ಬಳಿಕ ಇಶಾನ್ ಕಿಶನ್ ಗಾಳಿಯಲ್ಲಿ ಮುತ್ತನ್ನು ರವಾನಿಸುತ್ತಿದ್ದಂತೆ ಕ್ಯಾಮೆರಾಮ್ಯಾನ್ ಕ್ಯಾಮೆರಾವನ್ನು ಸ್ಟೇಡಿಯಂನತ್ತ ತಿರುಗಿಸಿದ್ದಾರೆ. ಈ ವೇಳೆ ಕಾವ್ಯ ಮಾರನ್ ಕಾಣಿಸಿಕೊಂಡಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದೆ.
ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
ಇನ್ನು ಈ ಪಂದ್ಯದಲ್ಲಿ 47 ಎಸೆತಗಳನ್ನು ಎದುರಿಸಿದ ಇಶಾನ್ ಕಿಶನ್ 6 ಭರ್ಜರಿ ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ ಅಜೇಯ 106 ರನ್ ಬಾರಿಸಿದರು. ಈ ಸೆಂಚುರಿ ನೆರವಿನೊಂದಿಗೆ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 286 ರನ್ ಕಲೆಹಾಕಿದೆ.
287 ರನ್ಗಳ ಕಠಿಣ ಗುರಿ ಪಡೆದ ರಾಜಸ್ಥಾನ್ ರಾಯಲ್ಸ್ ತಂಡವು ದಿಟ್ಟ ಹೋರಾಟವನ್ನೇ ಪ್ರದರ್ಶಿಸಿದ್ದರು. ಆರಂಭಿಕನಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 37 ಎಸೆತಗಳಲ್ಲಿ 66 ರನ್ ಬಾರಿಸಿದರೆ, ಧ್ರುವ್ ಜುರೆಲ್ 35 ಎಸೆತಗಳಲ್ಲಿ 70 ರನ್ ಚಚ್ಚಿದರು. ಇದಾಗ್ಯೂ ಈ ಇಬ್ಬರು ಆಟಗಾರರಿಗೆ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 242 ರನ್ ಕಲೆಹಾಕಿ 44 ರನ್ಗಳಿಂದ ಸೋಲೊಪ್ಪಿಕೊಂಡಿತು.