AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: 14 ಬೌಂಡರಿ, 4 ಸಿಕ್ಸರ್ ಸಹಿತ 2ನೇ ಏಕದಿನ ಶತಕ ಚಚ್ಚಿದ ಇಶಾನ್ ಕಿಶನ್

Ishan Kishan's Second ODI Century: ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆದ ಭಾರತ-ಅಫ್ಘಾನಿಸ್ತಾನ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ತಮ್ಮ ವೃತ್ತಿಜೀವನದ ಎರಡನೇ ಶತಕ ಸಿಡಿಸಿದ್ದಾರೆ. ನಾಯಕ ಶುಭ್​ಮನ್ ಗಿಲ್ ಕೂಡ ತಮ್ಮ 9ನೇ ಶತಕ ಗಳಿಸಿದ್ದು, ಇದು ಭಾರತದ ಎರಡನೇ ಶತಕ. ಕಿಶನ್ ಕೇವಲ 71 ಎಸೆತಗಳಲ್ಲಿ 14 ಬೌಂಡರಿ, 4 ಸಿಕ್ಸರ್ ಸೇರಿ ಶತಕ ಪೂರೈಸಿದರು. ಇಬ್ಬರ ಅಮೋಘ ಶತಕಗಳಿಂದ ಭಾರತ ತಂಡಕ್ಕೆ ದೊಡ್ಡ ಕೊಡುಗೆ ದೊರೆತಿದೆ.

IND vs AFG: 14 ಬೌಂಡರಿ, 4 ಸಿಕ್ಸರ್ ಸಹಿತ 2ನೇ ಏಕದಿನ ಶತಕ ಚಚ್ಚಿದ ಇಶಾನ್ ಕಿಶನ್
Ishan Kishan
ಪೃಥ್ವಿಶಂಕರ
|

Updated on:Jun 17, 2026 | 4:37 PM

Share

ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ (India vs Afghanistan) ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (Ishan Kishan) ಕೂಡ ಶತಕದ ಇನ್ನಿಂಗ್ಸ್ ಆಡಿದ್ದಾರೆ. ಈ ಪಂದ್ಯದಲ್ಲಿ ಭಾರತದ ಪಾಳಯದಿಂದ ಸಿಡಿದ ಎರಡನೇ ಶತಕ ಇದಾಗಿದೆ. ಕಿಶನ್​ಗೂ ಮೊದಲು ನಾಯಕ ಶುಭ್​ಮನ್ ಗಿಲ್ (Shubman Gill) ತಮ್ಮ ಏಕದಿನ ವೃತ್ತಜೀವನದ 9ನೇ ಶತಕ ಸಿಡಿಸಿದರೆ, ಇದೀಗ ಇಶಾನ್ ಕಿಶನ್ ಕೂಡ ತಮ್ಮ ಏಕದಿನ ವೃತ್ತಜೀವನದ ಎರಡನೇ ಶತಕವನ್ನು ಬಾರಿಸಿದರು. ಕಿಶನ್ ಕೇವಲ 71 ಎಸೆತಗಳಲ್ಲಿ 14 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ತಮ್ಮ ಶತಕ ಪೂರೈಸಿದರು. ಶತಕದ ಬಳಿಕವೂ ಒಂದೇ ಗೇರ್​ನಲ್ಲಿ ಬ್ಯಾಟಿಂಗ್‌ ಮಾಡಿದ ಕಿಶನ್ 79 ಎಸೆತಗಳಲ್ಲಿ ಏಳು ಸಿಕ್ಸರ್‌ಗಳು ಮತ್ತು 14 ಬೌಂಡರಿಗಳ ಸಹಿತ 125 ರನ್ ಬಾರಿಸಿ ಔಟಾದರು.

71 ಎಸೆತಗಳಲ್ಲಿ ಶತಕ ಪೂರ್ಣ

ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಇಶಾನ್ ಕಿಶನ್ 52 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಅಂದರೆ ಆರಂಭದಲ್ಲಿ ತಾಳ್ಮೆಯಿಂದ ಇನ್ನಿಂಗ್ಸ್ ಕಟ್ಟಿದ ಕಿಶನ್, ಅರ್ಧಶತಕದ ನಂತರ ಕೇವಲ 19 ಎಸೆತಗಳಲ್ಲಿ 100 ರನ್​ಗಳ ಗಡಿ ದಾಟಿದರು. ಇದರರ್ಥ ಅರ್ಧಶತಕದ ನಂತರ, ಮುಂದಿನ 50 ರನ್‌ಗಳನ್ನು ಪೂರೈಸಲು ಕಿಶನ್ ತೆಗೆದುಕೊಂಡಿದ್ದು, ಕೇವಲ 19 ಎಸೆತಗಳನ್ನು ಮಾತ್ರ. ಇದು ಅಫ್ಘಾನಿಸ್ತಾನ ವಿರುದ್ಧದ ಇಶಾನ್ ಅವರ ಮೊದಲ ಏಕದಿನ ಶತಕವಾಗಿದ್ದು, ಬೌಂಡರಿ ಬಾರಿಸುವ ಮೂಲಕ ಶತಕದ ಗಡಿ ದಾಟಿದ್ದು, ಅವರ ಶತಕದ ವಿಶೇಷತೆಯಾಗಿತ್ತು.

ಮ್ಯಾಕ್ಸ್‌ವೆಲ್ ದಾಖಲೆ ಉಡೀಸ್

ಇಶಾನ್ ಕಿಶನ್ ಅಫ್ಘಾನಿಸ್ತಾನ ವಿರುದ್ಧ 71 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ, ಈ ತಂಡದ ವಿರುದ್ಧ ಏಕದಿನದಲ್ಲಿ ಅತಿ ವೇಗದ ಶತಕ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದರು. ಈ ಮೂಲಕ ಈ ತಂಡದ ವಿರುದ್ಧ 76 ಎಸೆತಗಳಲ್ಲಿ ಶತಕ ಸಿಡಿಸಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ದಾಖಲೆಯನ್ನು ಮುರಿದರು. ಕಿಶನ್ ಜೊತೆಗೆ ಗಿಲ್ ಕೂಡ ಈ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದಿದ್ದಾರೆ. ಈ ಪಂದ್ಯದಲ್ಲಿ ಗಿಲ್ ಕೂಡ 77 ಎಸೆತಗಳಲ್ಲಿ ಶತಕ ಬಾರಿಸಿದರು.

IND vs ENG: ರೋಹಿತ್ ದಾಖಲೆಯ ಜೊತೆಗೆ 19 ವರ್ಷಗಳ ಹಳೆಯ ದಾಖಲೆ ಮುರಿದ ಕಿಶನ್

1,000 ಏಕದಿನ ರನ್‌ ಪೂರ್ಣ

ಈ ಶತಕದ ಇನ್ನಿಂಗ್ಸ್ ಮೂಲಕ ಇಶಾನ್ ಕಿಶನ್ ತಮ್ಮ ಏಕದಿನ ವೃತ್ತಿಜೀವನದಲ್ಲಿ 1,000 ರನ್‌ಗಳನ್ನು ಪೂರ್ಣಗೊಳಿಸಿದರು. 2021 ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದೊಂದಿಗೆ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಕಿಶನ್ ಇಲ್ಲಿಯವರೆಗೆ 29 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಆಡಿರುವ 26 ಇನ್ನಿಂಗ್ಸ್‌ಗಳಲ್ಲಿ 46 ಸರಾಸರಿ ಮತ್ತು 105 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್‌ನೊಂದಿಗೆ 1,050 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Wed, 17 June 26

Follow Us
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?"
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?